ಹಾವೇರಿ | ಬೆಲೆ ಏರಿಕೆಯ ಸರದಾರ ಪ್ರಧಾನಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ ಬಣ್ಣನೆ

Date:

ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

- Advertisement -

ಹಾವೇರಿ ಜಿಲ್ಲೆಯಲ್ಲಿ ₹650 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಜನಾರ್ಪಣೆಗೊಳಿಸಿ, ನೂತನ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

“ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ. ಈ ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತದೆ” ಎಂದು ಸಿಎಂ ಚುನಾವಣೆಗಳ ಭರವಸೆ ವ್ಯಕ್ತಪಡಿಸಿದರು.

“ನೀವು ಕಾಂಗ್ರೆಸ್ ಪಕ್ಷಕ್ಕೆ, ಈ ಸರ್ಕಾರಕ್ಕೆ ಕೊಟ್ಟ ಮತಗಳಿಗೆ ನಾವು ಘನತೆಯಿಂದ ಗೌರವಿಸಿದ್ದೇವೆ. ಚುನಾವಣೆಗೆ ಮೊದಲು ಕೊಟ್ಟ ಮಾತಿನಂತೆ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸಿ ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ” ಎಂದರು.

“ಗ್ಯಾರಂಟಿಗಳಿಂದ ಖಜಾನೆ ಖಾಲಿಯಾಗಿದೆಯೆಂದು ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಹಸಿ ಹಸಿ ಸುಳ್ಳುಗಳನ್ನು ನಂಬಬೇಡಿ. ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ ಈ ಬಾರಿಯ ಬಜೆಟ್ ಗಾತ್ರ ₹38 ಸಾವಿರ ಕೋಟಿ ಹೆಚ್ಚಾಗಿದೆ. ಮಾತ್ರವಲ್ಲ ಈ ಬಾರಿ ಬಂಡವಾಳ ವೆಚ್ಚ ₹83 ಸಾವಿರ ಕೋಟಿ ತೆಗೆದಿರಿಸಿದ್ದೀವಿ. ಕಳೆದ ವರ್ಷಕ್ಕಿಂತ ₹31 ಸಾವಿರ ಕೋಟಿ ಬಂಡವಾಳ ವೆಚ್ಚ ಹೆಚ್ಚಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ₹50 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ತೆಗೆದಿಟ್ಟಿದ್ದೇವೆ. ₹1,33,000 ಕೋಟಿ ಒಟ್ಟು ರೂಪಾಯಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ತೆಗೆದಿಟ್ಟಿದ್ದೀವಿ. ಇದುವೆಲ್ಲವೂ ಬಿಜೆಪಿಯ ಹಸಿ ಸುಳ್ಳುಗಳ ಸಂಪ್ರದಾಯಕ್ಕೆ ಉದಾಹರಣೆ” ಎಂದು ವಿವರಿಸಿದರು.

“ಆರ್ ಅಶೋಕ, ವಿಜಯೇಂದ್ರ ಈಗ ನಮ್ಮ ಸರ್ಕಾರದ ವಿರುದ್ಧ ನಕಲಿ ಜನಾಕ್ರೋಶ ಸಭೆ ನಡೆಸುತ್ತಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ನಾಳೆಯಿಂದ ಒಳಮೀಸಲಾತಿಗಾಗಿ ಸಮೀಕ್ಷೆ ಆರಂಭ, ಆದಿದ್ರಾವಿಡ ಬಾಂಧವರು ಇತ್ತ ಗಮನಿಸಿ

“ಅಚ್ಛೇದಿನ್ ಆಯೆಗಾ ಅಂದ್ರಲ್ಲಾ ಮೋದಿ, ಎಲ್ರೀ ಬಂತು ಈ ಅಚ್ಛೆ ದಿನ್. ದುರ್ಬೀನು ಹಾಕಿ ಹುಡುಕಿದರೂ ಕಾಣಿಸುತ್ತಿಲ್ಲ. ಡಾಲರ್ ಬೆಲೆ ₹59ರಿಂದ ₹85ಗೆ ಏರಿಕೆಯಾಗಿದೆ. ಅಡುಗೆ ಅನಿಲ 400 ರೂಪಾಯಿಂದ 879 ರೂ. ಆಗಿದೆ. ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಔಷಧ, ಚಿನ್ನ, ಅಕ್ಕಿ, ಬೇಳೆ, ಎಣ್ಣೆ, ಕಾಳು ಸೇರಿ ಎಲ್ಲದರ ಬೆಲೆಯನ್ನೂ ಮೋದಿ ಆಕಾಶಕ್ಕೆ ಏರಿಸಿದ್ದಾರಲ್ಲಾ ಇದೇನಾ ಅಚ್ಚೆ ದಿನ್? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ಮೋದಿ ಭರವಸೆ ಕೊಟ್ಟಿದ್ದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು, ಆಗಲಿಲ್ಲ. ಅದಕ್ಕೇ ಹೇಳೋದು ಸುಳ್ಳು, ಬಿಜೆಪಿಯ ಮನೆ ದೇವರು. ಆದ್ದರಿಂದ ಜನರ ಆಕ್ರೋಶ ಇರುವುದು ಬಿಜೆಪಿ ಮೇಲೆ, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಎನ್ನುವುದನ್ನು ಆರ್ ಅಶೋಕ್, ವಿಜಯೇಂದ್ರ ಅರ್ಥ ಮಾಡಿಕೊಳ್ಳಲಿ” ಎಂದರು.

ಶಾಸಕ ಶ್ರೀನಿವಾಸ್ ಮಾನೆಯವರಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಿಎಂ

“ಶಾಸಕ ಮಾನೆಯವರು ಕ್ಷೇತ್ರಕ್ಕೆ ಮಾಡಿರುವ ಕೆಲಸ ಕಾಣುತ್ತಿದೆ. ಈ ಊರಿನ ಅಳಿಯ ಬೊಮ್ಮಾಯಿಯವರೇ ಕ್ಷೇತ್ರಕ್ಕೆ ಏನು ಮಾಡಿದ್ದೀರಿ? ಜನರಿಗೆ ಉತ್ತರಿಸಿ ಎಂದು ಸವಾಲು ಹಾಕಿದ ಮುಖ್ಯಮಂತ್ರಿಗಳು, ಮುಂದೆ ಶಾಸಕ ಮಾನೆಯವರಿಗೆ ರಾಜಕೀಯವಾಗಿ ಉತ್ತಮ ಭವಿಷ್ಯ ಇದೆ” ಎಂದು ಘೋಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...