ಹಾವೇರಿ | ಪ್ರೀತಿಸಿದ ಯುವತಿ ಜೊತೆ ಹೋದ ಮಗ: ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; 6 ಮಂದಿಯ ಬಂಧನ

Date:

ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ ಮಾಡಿದ ಅಮಾನುಷ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯದ್ದೇ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದರಲ್ಲಿ ಮಹಿಳೆಯನ್ನು ವಿವಸ್ತ್ರ ಮಾಡಿಲ್ಲದಿದ್ದರೂ, ಆಕೆಯ ಯಾವುದೇ ತಪ್ಪಿಲ್ಲದೆ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.

- Advertisement -

ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಅರಮಲ್ಲಾಪುರ ಗ್ರಾಮದಲ್ಲಿ ಈ ಬರ್ಬರ ಘಟನೆ ನಡೆದಿದೆ. ಹನಮವ್ವ ದುರಗಪ್ಪ ಮೆಡ್ಲೆರಿ (50) ಹಲ್ಲೆಗೊಳಗಾದ ಮಹಿಳೆ. ಈಕೆಯ ಮಗ ಅದೇ ಗ್ರಾಮದ ಯುವತಿಯೊಬ್ಬಳ ಜೊತೆಗೆ ಪರಾರಿಯಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಗ್ರಾಮಸ್ಥರು ಮಹಿಳೆಯ ಮೇಲೆ ಹಲ್ಲೆ ನಡೆಸಿ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸುತ್ತಿರುವ ದೃಶ್ಯಗಳು ಮೊಬೈಲ್​ನಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಯುವಕನ ಮಗ ಯುವತಿಯೊಬ್ಬಳನ್ನು ಅಪಹರಿಸಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಯುವತಿ ಕಡೆಯವರು ಥಳಿಸಿದ್ದಾರೆ. ಅದೇ ಗ್ರಾಮದ ಚಂದ್ರಪ್ಪ, ಗಂಗಪ್ಪ, ಗುತ್ತೆವ್ವ ಹಲ್ಲೆ ಮಾಡಿದ ಆರೋಪಿಗಳು. ಈಕೆಯ ಮಗ ಮಂಜುನಾಥ ಯುವತಿಯನ್ನು ಕರೆದುಕೊಂಡು ಹೋಗಿರುವ ಆರೋಪವಿದೆ. ಆತ ಯುವತಿಯನ್ನು ಬಲವಂತವಾಗಿ ಅಪಹರಿಸಿದ್ದಲ್ಲದೆ ಆಭರಣಗಳನ್ನೂ ದೋಚಿದ್ದಾನೆ ಎಂದು ಇವರು ದೂರಿದ್ದಾರೆ.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ: ಸಿಎಂ ಸಿದ್ದರಾಮಯ್ಯ

ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿ, “ನಿನ್ನ ಮಗ ಎಲ್ಲಿದ್ದಾನೆ ಹೇಳು” ಎಂದು ಪೀಡಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಹನಮವ್ವಳಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರಾಣೆಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಸಂಬಂಧ ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...