ಹಾವೇರಿ | ಪೊಲೀಸರು ಸಮಾಜದ ಬಗ್ಗೆ ಕಳಕಳಿ ಭಾವನೆ ಹೊಂದಬೇಕು: ನಿವೃತ್ತ ಪೊಲೀಸ್ ಅಧಿಕಾರಿ ಆರ್ ವಾಯ್ ಅಂಬಿಗೇರ

Date:

Advertisements

“ಪೊಲೀಸರು ಸಮಾಜದ ಬಗ್ಗೆ ಕಳಕಳಿ ಭಾವನೆ ಹೊಂದಬೇಕು ಸಾರ್ವಜನಿಕ ನೆಮ್ಮದಿಗೆ ಕಾರ್ಯಪ್ರವೃತ್ತರಾಗಬೇಕು” ಎಂದು ನಿವೃತ್ತ ಪಿ ಎಸ್ ಐ ಆರ್ ವಾಯ್ ಅಂಬಿಗೇರ ಹೇಳಿದರು.

ಹಾವೇರಿ ಪಟ್ಟಣದ ಕೆರಿಮತ್ತಿಹಳ್ಳಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಪ್ರತಿ ವರ್ಷ ಏಪ್ರಿಲ್ 02 ರಂದು ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪೊಲೀಸ್ ಧ್ವಜಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಿ ಬಂದಂತಹ ಹಣವನ್ನು ನಿವೃತ್ತ ಪೊಲೀಸರ ಕ್ಷೇಮಾಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಬಳಕೆ ಮಾಡಿಕೊಳ್ಳಲಾಗಿತ್ತದೆ” ಎಂದು ಹೇಳಿದರು.

Advertisements

“ಪೊಲೀಸ್ ಕರ್ತವ್ಯ ನಿರ್ವಹಿಸುವಾಗ ಪೊಲೀಸ್ ಬಾವುಟ ಅವರ ಬಳಿ ಇರುತ್ತದೆ. ಅವರ ಕರ್ತವ್ಯ ಪ್ರಜ್ಞೆ ಆ ಬಾವುಟವು ಎತ್ತರೆತರಕ್ಕೆ ಹೋಗುತ್ತದೆ. ಕರ್ತವ್ಯದಲ್ಲಿ ನಿರ್ಲಕ್ಷತನ ತೋರಿದರೆ ಇಲಾಖೆಯ ಘನತೆ ಗೌರವ ಹಾಳಾಗುತ್ತದೆ. ಆದಕಾರಣ ಪೊಲೀಸರು ಶಿಸ್ತು ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸಬೇಕಾಗಿರುವುದು ಅವಶ್ಯಕವಾಗಿದೆ. ಪೊಲೀಸರಿಗೆ ಧರ್ಮವೆಂದರೆ ಕಾನೂನು ಕಾಪಾಡುವುದಾಗಿದೆ. ಪೊಲೀಸರಿಗೆ ಗ್ರಂಥ ವೆಂದರೆ ಸಂವಿಧಾನವಾಗಿದೆ. ಇವೆರಡರ ಅಡಿಯಲ್ಲಿ ಕೆಲಸ ಮಾಡಬೇಕು” ಎಂದರು.

“ಬಳಿಕ ಪ್ರಭಾರ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಎಂ ಸಂತೋಷ ಅವರು ವರದಿ ವಾಚನ ನೀಡಿ, “ಕರ್ನಾಟಕ ಪೊಲೀಸ್ ಪಡೆಯನ್ನು 1965 ರ ಏಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಕಾಯ್ದೆಗೆ ಒಳಪಡಿಸಲಾಯಿತು. ಅದರ ಸ್ಮರಣೆಗಾಗಿ ಪ್ರತಿ ವರ್ಷ ಪೊಲೀಸ್ ಧ್ವಜ ದಿನವನ್ನಾಗಿ ರಾಜ್ಯದ ಎಲ್ಲ ಘಟಕಗಳಲ್ಲಿ ಆಚರಿಸಲಾಗುತ್ತದೆ. ಕಾನೂನು ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳ ಸಂರಕ್ಷಣೆ ಮಾಡಲು ಈ ದಿನವನ್ನು ಮುಡಿಪಾಗಿಡಲಾಗುತ್ತದೆ. ನಿತ್ಯ ಜೀವನದಲ್ಲಿ ಶಾಂತಿ ಸೌಹಾರ್ದತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತದೆ. ನಿವೃತ್ತಿ ಹೊಂದಿದ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ಕುಟುಂಬದವರ ವೈದ್ಯಕೀಯ ವೆಚ್ಚ ಹಾಗೂ ಶವ ಸಂಸ್ಕಾರಕ್ಕಾಗಿ ಧನಸಹಾಯವನ್ನು ನೀಡಲಾಗುತ್ತದೆ. ಸಂಗ್ರಹವಾದ ಹಣದಲ್ಲಿ ಅರ್ಧದಷ್ಟು ಪೊಲೀಸ್ ಕಲ್ಯಾಣ ನಿಧಿಗೆ ಹಾಗೂ ಉಳಿದ ಅರ್ಧ ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮ ನಿಧಿಗೆ ಉಪಯೋಗಿಸಲಾಗುತ್ತದೆ. ಪೊಲೀಸ್ ಧ್ವಜ ಮಾರಾಟ ಮಾಡಿ ಬಂದಂತಹ ಹಣ ರೂ. 15 ಲಕ್ಷದಲ್ಲಿ ರೂ. 40 ಸಾವಿರ ಗಳನ್ನು ಮರಣೋತ್ತರ ಪರಿಹಾರವಾಗಿ ನೀಡಲಾಗಿದೆ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ರೂ.8.59 ಲಕ್ಷ ಒದಗಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಮೆಂಟ್ ಕಂಪೆನಿಯಿಂದ ಅನ್ಯಾಯ‌; ಬೇಸತ್ತ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನ

ಕಾರ್ಯಕ್ರಮದಲ್ಲಿ ಪರೇಡ್ ಕಮಾಂಡರ ಆರ್ ಪಿ ಐ ಶಂಕರಗೌಡ ಪಾಟೀಲ್ ಅವರು ಪೊಲೀಸ್ ಪಡೆಗಳ ಪಥ ಸಂಚಲನದ ನೇತೃತ್ವ ವಹಿಸಿದ್ದರು. ಅಶೋಕ ಹೊಸಮನಿ ಆರ್ ಪಿ ಐ ಹಾವೇರಿ ಇವರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ಪಥ ಸಂಚಲನ ನಡೆಸಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X