ಹಾವೇರಿಯ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಪತ್ರೆ ನಿರ್ವಹಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆರೋಗ್ಯ ಇಲಾಖೆಯ ಎಇಇ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಆಸ್ಪತ್ರೆಯನ್ನು ಪರಿಶೀಲಿಸಿದಾಗ ಆಸ್ಪತ್ರೆಯ ಛಾವಣಿಗಳು ಸೋರುತ್ತಿರುವುದನ್ನು ಅವರು ಗಮನಿಸಿದ್ದಾರೆ. ಅಲ್ಲದೆ, ಆಸ್ಪತ್ರೆಯ ವಿವಿಧ ಕೆಲಸ-ಕಾರ್ಯಗಳ ನಿರ್ವಹಣೆಯೂ ಸರಿಯಾಗಿಲ್ಲ ಎಂಬುದು ಅವರ ಗಮನಕ್ಕೆ ಬಂದಿದೆ.
ಇದರಿಂದ ಅಸಮಾಧಾನಗೊಂಡ ಅವರು ಎಇಇ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದರೆ.
ಮುಖ್ಯಮಂತ್ರಿ ಆಸ್ಪತ್ರೆ ಭೇಟಿ ವೇಳೆ, ಸಚಿವ ಎಚ್.ಕೆ.ಪಾಟೀಲ, ಬೈರತಿ ಸುರೇಶ್, ಶಿವಾನಂದ ಪಾಟೀಲ್, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ್ ಶಿವಣ್ಣನವರ, ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ ಸೇರಿದಂತೆ ವಿವಿಧ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಜರಿದ್ದರು.