ಹಾವೇರಿ | ರಸ್ತೆಯಲ್ಲಿ ರಾರಾಜಿಸುತ್ತಿರುವ ತಗ್ಗು ಗುಂಡಿಗಳು; ದುರಸ್ತಿಗೆ ಸ್ತಳೀಯರ ಆಗ್ರಹ

Date:

ರಸ್ತೆಯುದ್ದಕ್ಕೂ ತಗ್ಗು ಗುಂಡಿಗಳು ತುಂಬಿದ್ದು, ಡಾಂಬರ್ ಪೂರ್ತಿ ಕಿತ್ತುಹೋಗಿದೆ. ರಸ್ತೆಗೆ ಅಲ್ಲಲ್ಲಿ ತೇಪೆ ಹಾಕಿದ್ದು, ದ್ವಿಚಕ್ರ ವಾಹನ ಸವಾರರು ಉರುಳಿ ಬೀಳುವ ಭಯದಲ್ಲಿದ್ದಾರೆ. ಹಾಗಾಗಿ ಸ್ಥಳೀಯರು ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -

ಹಾವೇರಿಯಿಂದ ಕರ್ಜಗಿಗೆ ಹಾಗೂ ಅಗಡಿ-ಬೂದಗಟ್ಟಿ ಮಾರ್ಗದಿಂದ ಗುತ್ತಲಕ್ಕೆ ತಲುಪುವ ರಸ್ತೆಯ ಡಾಂಬರ್ ಕಿತ್ತು ಹೋಗಿದೆ. ಅಲ್ಲಲ್ಲಿ ತಗ್ಗು ಗುಂಡಿಗಳು ಹೆಚ್ಚಾಗಿವೆ. ಈ ರಸ್ತೆಯಲ್ಲಿ ಸಂಚರಿಸುವ ಸವಾರರು ನಿತ್ಯ ಭಯದಲ್ಲಿಯೇ ಸಂಚರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಹಾವೇರಿಗೆ ಹೋಗುವ ರಸ್ತೆಯಲ್ಲಿ ಕೆಎಂಎಫ್ ಬಳಿ ಡಾಂಬರ್ ಕಿತ್ತುಹೋಗಿದ್ದು, ಗುಂಡಿಗಳು ಕಂಡುಬರುತ್ತವೆ. ಈ ಮಾರ್ಗದಲ್ಲಿ ಸಂಚರಿಸುವ ಜನರು ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ. ಕೆಲ ದ್ವಿಚಕ್ರ ವಾಹನಸವಾರರು, ಉರುಳಿಬಿದ್ದು ಗಾಯಗೊಂಡಿರುವ ಘಟನೆಗಳೂ ನಡೆದಿವೆ. ಕರ್ಜಗಿ ಬಸ್ ನಿಲ್ದಾಣದ ಎದುರೇ ಗುಂಡಿಗಳು ಬಿದ್ದು, ಮಳೆಯಾದರೆ ಕೆಸರು ಗದ್ದೆಯಂತಾಗುತ್ತದೆ. ಕಲಕೋಟಿ ಮಾರ್ಗದ ರಸ್ತೆಯೂ ಹಾಳಾಗಿದ್ದು, ಎಲ್ಲೆಂದರಲ್ಲಿ ತಗ್ಗುಗಳು ಬಿದ್ದಿವೆ. ಮಳೆಯಿಂದಾಗಿ ಗುಂಡಿಯಲ್ಲಿ ನೀರು ಸಂಗ್ರಹವಾಗುತ್ತದೆ. ಹೀಗೆ ನಿಂತ ನೀರಿನಿಂದ ಗುಂಡಿಗಳು ಮತ್ತಷ್ಟು ದೊಡ್ಡದಾಗಿ ರಸ್ತೆಗಳು ಹಾಳಾಗುತ್ತಿವೆ.

ಗುಂಡಿ ಬಿದ್ದಿರುವ ರಸ್ತೆ

ಅಗಡಿ, ಬೂದಗಟ್ಟಿ ಗ್ರಾಮಗಳ ಮಾರ್ಗದಿಂದ ಗುತ್ತಲಕ್ಕೆ ತಲುಪುವ ರಸ್ತೆಯ ಡಾಂಬರ್ ಕಿತ್ತುಹೋಗಿದೆ. ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳು, ಅಲ್ಲಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ. ಈ ಮಾರ್ಗದಲ್ಲಿ ದೊಡ್ಡ ದೊಡ್ಡ ಲಾರಿಗಳು, ಟಿಪ್ಪರ್‌ಗಳ ಉಸುಗು, ಕಡಿ ಹೇರಿಕೊಂಡು ಹೆಚ್ಚು ಓಡಾಡುವುದರಿಂದ, ತಗ್ಗು ಗುಂಡಿಗಳು ಹೆಚ್ಚಾಗಿವೆ. ಡಾಂಬರ್ ಕಿತ್ತುಹೋಗಿ, ಡಾಂಬರ್ ಕೆಳಗೆ ಹಾಕಲಾಗಿದ್ದ, ಕಡಿ ಕಲ್ಲುಗಳು ಮೇಲೆ ಬಂದು, ದ್ವಿಚಕ್ರ ವಾಹನ ಸವಾರರು ಕೆಳಗೆ ಬೀಳುವ ಭಯದಲ್ಲಿ ಸಂಚರಿಸುತ್ತಿದ್ದಾರೆ. ಇದರಿಂದ ಸವಾರರು ಸ್ಥಳೀಯರು ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಗುಂಡಿ ಬಿದ್ದಿರುವ ರಸ್ತೆ 1

ರಸ್ತೆಗೆ ತೇಪೆ: ಗುತ್ತಲಕ್ಕೆ ಹೋಗುವ ರಸ್ತೆಯಲ್ಲಿ ಮೂರು ದೊಡ್ಡದಲ್ಲದ ಸೇತುವೆಗಳು ಕಂಡುಬಂದಿದ್ದು, ಅಲ್ಲಲ್ಲಿ, ತಗ್ಗು ಗುಂಡಿಗಳಿಗೆ ಗರಸು ಮಣ್ಣು ಹಾಕಿ ತೇಪೆ ಹಾಕಿದ್ದಾರೆ. ಅಷ್ಟೇ ಅಲ್ಲದೇ ಗುತ್ತಲ ಹೋಬಳಿ ಪ್ರವೇಶದಿಂದ ಬಸ್ ನಿಲ್ದಾಣದವರೇ ತಗ್ಗು ಗುಂಡಿಗಳಿಗೆ ಗರಸು, ಕಡಿ ಹಾಕಿದ್ದಾರೆ. ಟಿಪ್ಪರ್ ಲಾರಿ ಹೆಚ್ಚು ಓಡಾಡುವುದರಿಂದ ಗರಸು ಮಣ್ಣು, ಕಡಿ ಮೇಲೆ ಎದ್ದು ಸವಾರರ ಜೀವಕ್ಕೆ ಕುತ್ತಾಗುವೆ.

ಗುಂಡಿ ಬಿದ್ದಿರುವ ರಸ್ತೆ2

ಕರ್ನಾಟಕ ರಕ್ಷಣಾ ವೇದಿಕೆ ಹಾವೇರಿ ತಾಲೂಕು ಅಧ್ಯಕ್ಷ ಹಾಲೇಶ್ ಹಾಲಣ್ಣವರ ಮಾತನಾಡಿ, “ಸುಮಾರು ವರ್ಷಗಳಿಂದ ರಸ್ತೆ ಸಮಸ್ಯೆ ಇದೆ. ಎಷ್ಟೋ ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲುಗಳಿಗೆ ಪೆಟ್ಟಾಗಿದೆ. ಅಲ್ಲಲ್ಲಿ ತಗ್ಗು ಗುಂಡಿಗಳಿಗೆ ಗರಸು ತೇಪೆ ಹಾಕಿ ರಿಪೇರಿ ಮಾಡಿದ್ದಾರೆ. ಈ ರಸ್ತೆ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದ್ದೇವೆ. ಅಧಿಕಾರಿಗಳು ಕೂಡಲೇ ಎಚ್ಛೆತ್ತು ದುರಸ್ತಿ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಘಟಪ್ರಭಾದಲ್ಲಿ ಹದಗೆಟ್ಟ ರಸ್ತೆ; ಸ್ಥಳೀಯ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

ದ್ವಿಚಕ್ರ ವಾಹನಸವಾರ ಯಲ್ಲಪ್ಪ ಎಸ್ ಮಾತನಾಡಿ, “ನಮ್ಮೂರಿಂದ ಗುತ್ತಲವರೆಗೂ ರಸ್ತೆ ಸರಿಯಿಲ್ಲ. ನಿತ್ಯವೂ ಗುತ್ತಲ್ಲಕ್ಕೆ ಓಡಾಡುತ್ತೇವೆ. ಹದಿನೈದು ನಿಮಿಷದ ದಾರಿ ತಲುಪುವಷ್ಟರಲ್ಲಿ ಹೆಚ್ಚು ಕಮ್ಮಿ ಒಂದು ಗಂಟೆ ಬೇಕಾಗುತ್ತೆ. ಇದರಿಂದ ತುಂಬಾ ಬೇಸರವಾಗುತ್ತದೆ” ಎಂದು ಹೇಳಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...