ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಸುಮಾರು 35 ಮಂದಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಬೆಳಗಾವಿ ಮೂಲದ ಬಸ್ ಚಾಲಕ ಸದಾನಂದ (50) ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಹಾಸನ | ಮಕ್ಕಳು, ಮಹಿಳೆಯರ ನಾಪತ್ತೆ ಪ್ರಕರಣ: 51 ಮಂದಿ ಪತ್ತೆ; ಮಾನವ ಕಳ್ಳಸಾಗಾಣಿಕೆ ಶಂಕೆ
ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಬಸ್ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಅಪಘಾತ ಸಂಭವಿಸಿದ್ದು, ಅನಾಹುತ ಉಂಟಾಗಿದೆ. ಅಪಘಾತಕ್ಕೀಡಾದ ಬಸ್ ಬೆಂಗಳೂರಿನಿಂದ ಮೀರಜ್ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.