ಕನ್ನಡ ನಾಡು-ನುಡಿ, ನೆಲ, ಬಾಷಾ ಸಂಸ್ಕೃತಿ ಉಳಿಯಬೇಕಾದರೆ ಈ ನಾಡಿಗೆ ಕನ್ನಡಪರ ಸಂಘಟನೆಗಳ ಅವಶ್ಯವಿದೆ ಎಂದು ಹಾವೇರಿ ಜಿಲ್ಲೆ ಶಿಗ್ಗಾವಿಯ ತಡಸ ಗ್ರಾಮದಲ್ಲಿ ನಡೆದ ‘ಕನ್ನಡ ಹಬ್ಬ’ ಕಾರ್ಯಕ್ರಮದಲ್ಲಿ ಕರವೇ ಗಜಪಡೆ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.
ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ಸಂಘಟನೆಯ ವತಿಯಿಂದ ಅಯೋಜಿಸಿದ “ಕನ್ನಡ ಹಬ್ಬ” ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋವಾ, ಮಹಾರಾಷ್ಟ್ರ , ಆಂದ್ರ, ಕೇರಳ, ತಮಿಳುನಾಡು ರಾಜ್ಯವನ್ನು ಕಬಳಿಸುವ ಹುನ್ನಾರ ನಡೆದಾಗ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿದೇ ಇದ್ದಿದ್ದರೆ; ಇಡೀ ಕರ್ನಾಟಕ ರಾಜ್ಯವೇ ಹರಿದು ಹಂಚಿ ಹೋಗುತ್ತಿತ್ತು. ಈ ಬಗ್ಗೆ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕನ್ನಡಪರ ಸಂಘಟನೆಗಳಿಂದ ‘ಕನ್ನಡ ಹಬ್ಬ’ ಎಂಬ ಮಹೋನ್ನತ ಆಚರಣೆಯನ್ನು ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಇಲಾಖೆಯ ಅಂಬುಲೆನ್ಸ್ ಚಾಲಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.
ಇದನ್ನು ಓದಿದ್ದೀರಾ? ಬೆಳಗಾವಿ | ಕಾರು ಅಪಘಾತದಲ್ಲಿ ದಂಪತಿ ಸಾವು: 5 ಜನರಿಗೆ ಗಾಯ
ಕಾರ್ಯಕ್ರಮದಲ್ಲಿ ತಡಸ ಗ್ರಾಮ ಪಂಚಾಯತ್ ಅಧ್ಯಕ್ಷರು, ಕರವೇ ಗಜಪಡೆ ಜಿಲ್ಲಾ ಪದಾಧಿಕಾರಿಗಳು, ತಾಲೂಕಾಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸಂಘಟನೆಯ ಕಾರ್ಯಕರ್ತರು, ಶಾಲಾ ಕಾಲೇಜು ವಿಧ್ಯಾರ್ಥಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.