ಹಾವೇರಿ | ಬೆಳೆ ಹಾನಿ, ಸೂಕ್ತ ಪರಿಹಾರ ನೀಡುವಂತೆ ಪ್ರಗತಿಪರ ಸಂಘಟನೆಗಳು ಮನವಿ

Date:

“ಹಾನಗಲ್ಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಅಂದರೆ 80% ರಷ್ಟು ರೈತ ಸಮುದಾಯ ಜೀವನ ನಡೆಸುವ ಪ್ರದೇಶವಾಗಿದೆ.  ಅತೀ ಹೆಚ್ಚು ಅಂದರೆ ಸುಮಾರು 46 ಸಾವಿರ ಕ್ಕೂ ಹೆಚ್ಚು ಪೆಕ್ಟರ್ ಭೂ ಪ್ರದೇಶ ಸಾಗುವಳಿ ಮಾಡಲು ಅನುಕೂಲವಿದ್ದ ಪ್ರದೇಶವಾಗಿದೆ.ಮಾನ್ಸೂನ್ ಬೂಜಾಟದಿಂದ ಜಡೆ ಮಳೆ ಸುರಿದು ಅಷ್ಟೂ ಭೂ ಪ್ರದೇಶ ನೀರಿನಿಂದ ಆವೃತವಾಗಿದ್ದು, ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು” ಎಂದು ಸರಕಾರಕ್ಕೆ ಪ್ರಗತಿಪರ ಸಂಘಟನೆ ಮುಖಂಡರು ಒತ್ತಾಯಿಸಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದಲ್ಲಿ ತಹಸೀಲ್ದಾರ ಕಚೇರಿಯಲ್ಲಿ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ಪ್ರಗತಿಪರ ಸಂಘಟನೆ ಹಾಗೂ ರೋಷನಿ ಟ್ರಸ್ಟ್ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ಈ ಮನವಿ ಸಮಯದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರಪ್ಪ ಬಳಿಗಾರ್ ಮಾತನಾಡಿ, ರೈತರು ಸಾಲ ಸೋಲ ಮಾಡಿ ಬೀಜ ಗೊಬ್ಬರ ಖರೀದಿಸಿ, ಮಣ್ಣಲ್ಲಿ ಬೆರೆಸಿ ಇನ್ನೇನು ಬೆಳೆ ಮೊಳಕೆಯೊಡೆಯುವ ಸಮಯದಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಇಲ್ಲದ ಅವಾಂತರ ಸೃಷ್ಟಿಯಾಗಿ ಬಿತ್ತಿದ ಬೀಜ ಮೊಳಕೆಯೊಡೆಯುವ ಹಂತದಲ್ಲಿಯೇ ಮಣ್ಣಲ್ಲಿ ಕಮರಿಹೋಗಿದೆ. ಅಲ್ಪ ಸ್ವಲ್ಪ ಬೆಳೆದ ಬೆಳೆಯೂ ಹಾಳಾಗಿ ಹೋಗಿದ್ದು, ಬಿತ್ತದೆ ಉಳಿದ ಭೂ ಪ್ರದೇಶ ಇನ್ನೂ ಹಾಗೆಯೇ ಉಳಿದಿದೆ. ಬಿತ್ತನೆಯ ಕಾಲ ಮುಗಿದುಹೋಗಿದ್ದು ರೈತ ಮುಂದಿನ ಜೀವನ ಕ್ರಮದ ಬಗ್ಗೆ ಚಿಂತೆಗೀಡಾಗಿದ್ದಾನೆ” ಎಂದು ಹೇಳಿದರು.

“ಇಂತಹ ಸಂದರ್ಭದಲ್ಲಿ ರೈತರಿಗೆ ಅತ್ಮಸ್ಥೆರ್ಯ ತುಂಬುವುದರ ಜೊತೆಗೆ ಆರ್ಥಿಕ ನೆರವು ಸರಕಾರ ಮಾಡಬೇಕು. ಬೆಳೆ ಹಾನಿಗೆ ಸೂಕ್ತ ಪರಿಹಾರವನ್ನು ಸರಕಾರ ಕೊಡಬೇಕು” ಎಂದು ಒತ್ತಾಯಿದರು.

ಪ್ರಗತಿಪರ ಸಂಘಟನೆ ಮುಖಂಡರು ಫೇರೋಜ್ ಮಾತನಾಡಿ, “ರೈತ ಎಲ್ಲ ಬೆಳೆಗಳಿಗೆ ಬೆಳೆ ವಿಮೆ ಪಾವತಿಸಿದ್ದು, ಒಟ್ಟು ನಾಶವಾಗಿರುವ ಬೆಳೆಗೆ ಬೆಳೆ ವಿಮೆ ಪಾವತಿಸಿದ ಎಲ್ಲ ರೈತರಿಗೆ ವಿಮಾ ಕಂಪನಿ ಈ ಕೂಡಲೆ 25% ಬೆಳೆ ವಿಮೆ ಹಣವನ್ನು ರೈತರ ಖಾತೆಗೆ ಜಮೆ ಮಾಡಬೇಕು. ತಾಲೂಕಿನಲ್ಲಿ ಬೆಳೆದ ಬೆಳೆಗಳಿಗೆ ಮೇಲುಗೊಬ್ಬರವಾಗಿ ಬಳಸುವ ಯೂರಿಯಾ ಗೊಬ್ಬರ ಸರಿಯಾದ ಸಮಯಕ್ಕೆ ರೈತರಿಗೆ ಸಿಗದೆ ಮತ್ತಷ್ಟು ಬೆಳೆಗಳು ಅವನತಿಯ ಅಂಚಿನಲ್ಲಿದ್ದು ಶೀಘ್ರದಲ್ಲಿ ರೈತನಿಗೆ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ದೊರಕುವಂತಾಗಬೇಕು” ಎಂದು ಒತ್ತಾಯಿಸಿದರು.

“ರಾಸಾಯನಿಕ ಗೊಬ್ಬರದ ಜೊತೆಗೆ ಮಣ್ಣು ಪರೀಕ್ಷೆ ಮಾಡದೆ ಲಿಂಕ್‌ನ್ನು ಗೊಬ್ಬರದ ಜೊತೆಗೆ ಹೆಚ್ಚುವರಿಯಾಗಿ ನೀಡುತ್ತಿದ್ದು, ಒತ್ತಾಯ ಪೂರ್ವಕವಾಗಿ ರೈತರಿಗೆ ಹೊರೆ ಹೊರಿಸಲಾಗಿದೆ. ಇದು ಮತ್ತಷ್ಟು ರೈತರನ್ನು ಸಾಲಗಾರರನ್ನಾಗಿಸುವಲ್ಲಿ ಪ್ರಮುಖ ಕಾರಣವಾಗಿದೆ. ಮುಂದೆ ಕೃಷಿ ಇಲಾಖೆ ಮಣ್ಣು ಪರೀಕ್ಷೆ ಮಾಡದೆ ಯಾವುದೆ ಲಿಂಕ್‌ನ್ನು ರೈತರಿಗೆ ಕೊಡದಂತೆ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ಈ ಸಮಯದಲ್ಲಿ ಪ್ರಗತಿಪರ ಮುಖಂಡರು ಮಂಜುನಾಥ ಕರ್ಜಗಿ, ಎನ್. ಎಂ ಪೂಜಾರ, ಬಿ. ಆರ್. ಶೆಟ್ಟರ, ಅನಿತಾ ಡಿಸೋಜಾ, ಕಲ್ಲಪ್ಪ, ಮಾರ್ತಾಂಡಪ್ಪ, ರೈತರು ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...