ಹಾವೇರಿ | ಹಿಂದಿ ಹೇರಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

Date:

Advertisements

ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಹಾಗೂ ರಾಷ್ಟ್ರೀಯ ಹಿಂದಿ ದಿವಸ ಆಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಹಾವೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಗುತ್ತಲ ರಸ್ತೆಯ ಕರವೇ ಕಚೇರಿಯಿಂದ ಸಗೂರ ಕರಿಯಪ್ಪ ವೃತ್ತದವರೆಗೆ ಪ್ರತಿಭಟನಾ ರಾಯಲಿ ನಡೆಸಿದ ಕರವೇ ಕಾರ್ಯಕರ್ತರು ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಈ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿಗೆ ಅನೈತಿಕವಾಗಿ ವಿಶೇಷ ಮನ್ನಣೆ ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲ ಭಾಷೆಗಳೂ ಒಕ್ಕೂಟದ ದೃಷ್ಟಿಯಲ್ಲಿ ಸಮಾನ ಎಂದು ಸಾರಬೇಕು. ರಾಜ್ಯದಲ್ಲಿ ಎಲ್ಲ ಕೇಂದ್ರ ಸರ್ಕಾರಿ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಎಲ್ಲ ಬಗೆಯ ಪತ್ರ ವ್ಯವಹಾರಗಳೂ ಕನ್ನಡದಲ್ಲೇ ನಡೆಯಬೇಕು ಎಂದು ಆಗ್ರಹಿಸಿದರು.

Advertisements

ಇದನ್ನು ಓದಿದ್ದೀರಾ? ರಾಮನಗರ | ಹಿರಿಯ ಪತ್ರಕರ್ತ ದಿ.ಮೋಹನ್ ಕುಮಾರ್ ಮಗನ ಮೇಲೆ ಮಾರಣಾಂತಿಕ ಹಲ್ಲೆ; ಕೊಲೆ ಯತ್ನ

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ, ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಗುಡಮಿ, ತಾಲೂಕು ಅಧ್ಯಕ್ಷ ಹಾಲೇಶ ಹಾಲಣ್ಣನವರ, ಮಾರುತಿ ಪೂಜಾರ, ಸಿಖಂದ‌ರ್ ವಾಲಿಕಾರ, ಬಿ.ಎಚ್.ಬಣಕಾರ, ಹಸನಸಾಬ ಹತ್ತಿಮತ್ತೂರ, ಅಶೋಕ ಹೊಸಮನಿ, ಅಬ್ಬು ಕೊಡಮಗ್ಗಿ, ಶಿವಾನಂದ ಪೂಜಾರ, ಬಸವರಾಜ ಅರಳಿ, ಕಾಳಪ್ಪ ಬಡಿಗೇರ, ಸತ್ಯವತಿ ಕಡೇರ, ಲಕ್ಷ್ಮೀಶ ಮೇಲೂರಿ, ಬಸಲಿಂಗಪ್ಪ ನರಗುಂದ, ಇಮಾಮಸಾಬ ತಿಮಾಪೂರ, ಬಸವರಾಜ ಕಡೆಮನಿ ಸೇರಿದಂತೆ ಜಿಲ್ಲೆಯ ಹಲವು ಕಾರ್ಯಕರ್ತರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X