ಹಾವೇರಿ | ಜಿಲ್ಲೆಯ ಜನರಿಗೆ ಕಂದಾಯ ಇಲಾಖೆ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

Date:

“ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಗಳ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸಮಾಡಬೇಕು” ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಇಂದು ಸೋಮವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ಜಿಲ್ಲೆಯ ಸಾರ್ವಜನಿಕರು ಸಮಸ್ಯೆಗಳನ್ನು ಹೇಳಿಕೊಂಡು ಬಂದಾಗ ಅವರ ಸಮಸ್ಯೆವನ್ನು ಆಲಿಸಿ ಪರಿಹರಿಸಿ. ಜನರು ಸರ್ಕಾರದ ಯೋಜನೆಗಳ ಕುರಿತು ಗೊಂದಲಕ್ಕೆ ಒಳಗಾದಲ್ಲಿ ಅದನ್ನು ಬಗೆಹರಿಸಿ ಯೋಜನೆಯ ಉಪಯುಕ್ತತೆಯನ್ನು ಅವರಿಗೆ ತಲುಪುವಂತೆ ಮಾಡಿ” ಎಂದರು.

“ಜಿಲ್ಲೆಯಲ್ಲಿ ಬಗರ್‌ ಹುಕುಂ ಅರ್ಜಿಗಳು ವಿಲೇ ಆಗದೇ ಉಳಿದಿದ್ದರೆ ಅವುಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಗ್ರಾಮಾಡಳಿತ ಅಧಿಕಾರಿಗಳು ಇ ಆಫೀಸ್ ನಿರ್ವಹಣೆಯೊಂದಿಗೆ ತ್ವರಿತಗತಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು. ಕಂದಾಯ ಗ್ರಾಮ, ಪಾವತಿ ಆಂದೋಲನ, ಭೂ ಸುರಕ್ಷೆ ಮೊದಲಾದವುಗಳ” ಕುರಿತು ಸಭೆಯಲ್ಲಿ ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆಗಳನ್ನು ನೀಡಿದರು.

“ಜಿಲ್ಲೆಯ ಸಾರ್ವಜನಿಕರು ಒಂದೇ ವಿಷಯವಾಗಿ ಪದೆ ಪದೆ ಕಚೇರಿಗೆ ಅಲೆಯುಂತೆ ಆಗಬಾರದು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ಮುಂದಿನ ಸಭೆಯಲ್ಲಿ ಪ್ರಗತಿ ವರದಿ ಸಲ್ಲಿಸುವಂತೆ ಸೂಚನೆ ನೀಡಿ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಲಕ್ಷ್ಮೇಶ್ವರ ರಸ್ತೆಯುದ್ಧಕ್ಕೂ ನೂರಾರು ತಗ್ಗು ಗುಂಡಿಗಳು: ರಸ್ತೆ ಅಭಿವೃದ್ಧಿಪಡಿಸಲು ಸಾರ್ವಜನಿಕರು ಒತ್ತಾಯ

ಸಭೆಯಲ್ಲಿ ತಹಶೀಲ್ದಾರ್ ಶ್ರೀಮತಿ ರೇಣುಕಮ್ಮ, ಉಪ ತಹಶೀಲ್ದಾರ. ಕಂದಾಯ ನೀರಿಕ್ಷಕರು ಮತ್ತು ಗ್ರಾಮಾಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...