ಹಾವೇರಿ | ರಾಜು ತಾಳಿಕೋಟೆ ಅಗಲಿಕೆ ರಂಗಭೂಮಿಗೆ ತುಂಬಲಾರದ ನಷ್ಟ: ಹಿರಿಯ ಸಾಹಿತಿ ಸತೀಶ ಕುಲಕರ್ಣಿ

Date:

“ನಮ್ಮ ನಾಡಿನಲ್ಲಿ ಕಂಪನಿ ನಾಟಕಗಳಿಂದ ಅನೇಕ ಕಲಾವಿದರು ಸಿನೆಮಾ ರಂಗಕ್ಕೆ ಹೋಗಿದ್ದಾರೆ. ಆದರೆ ರಾಜು ತಾಳಿಕೋಟೆ ಅವರು ತಮ್ಮ ಜವಾರಿ ಭಾಷೆಯ ಸಹಜ ಅಭಿನಯದಿಂದಾಗಿ ಜನ ಸಾಮನ್ಯರಿಗೆ ಆಕರ್ಷಣೀಯ ಕೇಂದ್ರವಾಗಿದ್ದರು. ಅಪ್ರತಿಮ ಪ್ರತಿಭೆಯಿಂದಾಗಿ ಸಿನೆಮಾ ರಂಗವು ಅವರನ್ನು ತೊಡಗಿಸಿಕೊಳ್ಳುವಂತ‌ ಹಾಸ್ಯ ಕಲೆ ರಾಜು ತಾಳಿಕೋಟೆ ಅವರಲ್ಲಿತ್ತು. ಅವರ ಅಗಲಿಕೆ ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ. ಎಂದು ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಅಭಿಪ್ರಾಯಪಟ್ಟರು.

- Advertisement -

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಿವೈಎಫ್ಐ, ಎಸ್ಎಫ್ಐ, ಅಲೆಮಾರಿ ಸಮುದಾಯ ಸಂಘಟನೆ, ಡಿಎಸ್ಎಸ್, ಸಾಹಿತಿ ಕಲಾವಿದರ ಬಳಗ ಹಾಗೂ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಆಯೋಜಿಸಿದ್ದ ರಾಜು ತಾಳಿಕೋಟೆಯವರ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಾಟಕ ಕಂಪೆನಿಗಳು ಸಂಕಷ್ಟಕ್ಕೆ ಸಿಲುಕಿದಾಗೆಲ್ಲ ಆ ಕಂಪನಿಗಳು ಪುನಶ್ಚೇತನಗೊಳ್ಳಲು ರಾಜು ತಾಳಿಕೋಟೆ ಸದಾ ಶ್ರಮಿಸುತ್ತಿದ್ದರು. ಧಾರವಾಡ ರಂಗಾಯಣಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿ ಬಂದ ಮೇಲೆ ಒಳ್ಳೆಯ ರಂಗ ಚಟುವಟಿಕೆಗಳನ್ನು ಆಯೋಜಿಸಿದ್ದರಲ್ಲದೇ, ಉತ್ತಮ ಕಾರ್ಯಯೋಜನೆಗಳನ್ನು ಹಾಕಿಕೊಂಡಿದ್ದರು” ಎಂದರು.

ಡಿಎಸ್ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಉಡಚಪ್ಪ ಮಾಳಗಿ ಮಾತನಾಡಿ, “ರಂಗಭೂಮಿಯಲ್ಲಿ ಸದಾ ಸಕ್ರಿಯವಾಗಿರುತ್ತಿದ್ದ ರಾಜು ತಾಳಿಕೋಟೆಯವರು ತಮ್ಮ ನಾಟಕಗಳ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುತ್ತಿದ್ದರು” ಎಂದರು.

ಡಿವೈಎಫ್ಐ ಜಿಲ್ಲಾ ಮುಖಂಡರಾದ ವಕೀಲ ನಾರಾಯಣ ಕಾಳೆ ಮಾತನಾಡಿ, “ಸಮಾಜದಲ್ಲಿರುವ ಬಡ ಜನ ವಿರೋಧಿ ರಾಜಕಾರಣವನ್ನು ತಮ್ಮ ನಾಟಕಗಳ ಮೂಲಕ ಜನತೆಗೆ ತಲುಪಿಸುತ್ತಿದ್ದರು. ಹಿರಿಯ ಕಲಾವಿದರು ಇನ್ನಷ್ಟು ಕಾಲ ಇರಬೇಕಿತ್ತು” ಎಂದರು.

ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಸದಸ್ಯರಾದ ಪರಿಮಳ ಜೈನ ಮಾತನಾಡಿ, “ರಾಜು ತಾಳಿಕೋಟೆಯವರು ರಂಗಭೂಮಿಯ ಗಟ್ಟಿ ಧ್ವನಿಯಾಗಿದ್ದರು. ಜನರ ಬದುಕಿನ ಪ್ರಶ್ನೆಗಳನ್ನು ವಿಡಂಬನೆಯ ಮೂಲಕ ಸ್ಪಷ್ಟವಾದ ಭಾಷೆಯಲ್ಲಿ ಹೇಳುತ್ತಿದ್ದರು. ಸಾಮಾನ್ಯ ಕುಡುಕನ ಪಾತ್ರದ ಮೂಲಕ ಸತ್ಯವನ್ನು ಸಾರಿದ ಮಹಾನ್ ಕಲಾವಿದರಾಗಿದ್ದರು” ಎಂದು ಕಂಬನಿ ಮಿಡಿದರು.

ಅಲೆಮಾರಿ ಸಮುದಾಯ ಸಂಘಟನೆಯ ಜಿಲ್ಲಾಧ್ಯಕ್ಷ ಶೆಟ್ಟಿ ವಿಭೂತಿ ನಾಯಕ, ಅಹಿಂದ ಮುಖಂಡರಾದ ವಕೀಲ ಬಸವರಾಜ ಹಾದಿಮನಿ, ರೈತ ಸಂಘಟನೆಯ ಜಿಲ್ಲಾ ಮುಖಂಡರಾದ ಸುರೇಶ ಛಲವಾದಿ, ಕವಿ ರಾಜೇಂದ್ರ ಹೆಗಡೆ ಅವರು ರಾಜು ತಾಳಿಕೋಟೆಯವರ ವ್ಯಕ್ತಿತ್ವವನ್ನು ಕೊಂಡಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ರಾಜು ತಾಳಿಕೋಟೆ ಮುಸ್ಲಿಂ ಸಮುದಾಯದಲ್ಲಿ ಜನಿಸಿದ್ದರೂ ಖಾಸ್ಗತೇಶ್ವರ ಮಠದ ಪರಮ ಭಕ್ತರಾಗಿದ್ದರು. ಕಲೆಯು ಜಾತಿ, ಮತಗಳನ್ನು ಮೀರಿದ್ದು ಎಂಬುದನ್ನು ಸಾಧಿಸಿ ತೋರಿದವರು. ಈ ನೆಲದ ಭಾವೈಕ್ಯತೆಯನ್ನು ತಮ್ಮ  ಬದುಕಿನುದ್ದಕ್ಕೂ ಸಹಜವಾಗಿ ಉಸಿರಿಕೊಂಡು ಬಾಳಿದವರು ಅದ್ಭುತ ಕಲಾವಿದರು. ಇವರು ತಮ್ಮ ನಾಟಕಗಳ ಮೂಲಕ ಜನರ ಮನದಲ್ಲಿ ಸದಾ ಅಜರಾಮರಾಗಿರುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? RSS ನಿಷೇಧ; ಪ್ರಿಯಾಂಕ್ ಖರ್ಗೆ ಹೇಳುವುದರಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ

ಪುಷ್ಪ ನಮನ ಹಾಗೂ ಶ್ರದ್ಧಾಂಜಲಿ: ಸಭೆಯಲ್ಲಿ ಅಗಲಿದ ರಾಜು ತಾಳಿಕೋಟೆಯವರ ಭಾವಚಿತ್ರಕ್ಕೆ ಪುಷ್ಪ ವೃಷ್ಠಿಗೈದು, ಎರಡು ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಗೌರವ ಶ್ರದ್ಧಾಂಜಲಿ ಸಲ್ಲಿಸಲಾಯ್ತು.

ಪ್ರಾಸ್ತಾವಿಕವಾಗಿ ರಮೇಶ ತಳವಾರ ಮಾತನಾಡಿದರು. ಬಸವರಾಜ ಎಸ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಖಲಂದರ್ ಅಲ್ಲಿಗೌಡ್ರ, ರೇಣುಕಾ ಕಹಾರ, ರಾಜಶೇಖರ ಮಾಳವಾಡ, ನಿಂಗರಾಜ ಪೂಜಾರ, ಉಮೇಶ ಮಹಾಂತ, ಧನುಷ್ ದೊಡ್ಮನಿ, ತೇಜಸ್ ದೊಡ್ಮನಿ, ಅನ್ವಿಕಾ ಆರ್.ಬಿ, ನಕ್ಷತ್ರ ಕಾಳೆ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...