ಹಾವೇರಿ | ಜ.28ಕ್ಕೆ ರಾಣೆಬೆನ್ನೂರು ನಗರಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ

Date:

Advertisements

ಕೆಲವು ವರ್ಷಗಳ ಹಿಂದೆಯೇ ನಡೆಯಬೇಕಿದ್ದ ರಾಣೆಬೆನ್ನೂರು ತಾಲ್ಲೂಕಿನ ಸ್ಥಳೀಯ ನಗರಸಭೆ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಜ. 28ರಂದು ಚುನಾವಣೆ ನಡೆಯಲಿದೆ. ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

ಅಧ್ಯಕ್ಷ ಸ್ಥಾನ ಹಿಂದುಳಿದ ʼಅʼ ವರ್ಗಕ್ಕೆ ಮೀಸಲಾಗಿದ್ದು, ಬಿಜೆಪಿಯಲ್ಲಿ ʼಅʼ ಪ್ರವರ್ಗಕ್ಕೆ ಸೇರಿರುವ ಮಾಜಿ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಕವಿತಾ ಹೆದ್ದೇರಿ, ಹೊನ್ನವ್ವ ಕಾಟಿ, ರತ್ನವ್ವ ಪೂಜಾರ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಜಯಶ್ರೀ ಪೀಸೆ ಹಾಗೂ ಆರ್ ಶಂಕರ್ ಬಣದ ಜತೆ ಗುರುತಿಸಿಕೊಂಡಿರುವ ಅರೀಫಾಖಾನಂ ಸೌದಾಗರ ರೇಸ್‌ನಲ್ಲಿದ್ದಾರೆ.

ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ದೊರಕಿದ್ದು, ಬಿಜೆಪಿಯಲ್ಲಿ ಮಲ್ಲಿಕಾರ್ಜುನ ಅಂಗಡಿ, ಪ್ರಕಾಶ ಬುರಡಿಕಟ್ಟಿ, ಗುರುರಾಜ ತಿಳವಳ್ಳಿ ಪೈಪೋಟಿ ನಡೆಸಿದ್ದಾರೆ. ಇದಲ್ಲದೆ ಸಾಮಾನ್ಯ ಕ್ಷೇತ್ರ ಹೊರತುಪಡಿಸಿ ಅನ್ಯ ಕ್ಷೇತ್ರದಿಂದ ಆಯ್ಕೆಯಾದವರು ಹಾಗೂ ಇತರೇ ಪ್ರವರ್ಗದ ಸದಸ್ಯರೂ ಸ್ಪರ್ಧಿಸಬಹುದಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಅಧ್ಯಕ್ಷ ಶೇಖಪ್ಪ ಹೊಸಗೌಡ್ರ, ಮೆಹಬೂಬ್ ಮುಲ್ಲಾ, ಇತರ ಪ್ರವರ್ಗದಿಂದ ಆಯ್ಕೆಯಾಗಿರುವ ಶಶಿಧರ ಬಸನಾಯ್ಕರ, ಪುಟ್ಟಪ್ಪ ಮರಿಯಮ್ಮನವರ ಕೂಡ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

Advertisements

ನಗರಸಭೆಯ ಒಟ್ಟು 35 ಸ್ಥಾನಗಳ ಪೈಕಿ ಬಿಜೆಪಿ 15, ಕರ್ನಾಟಕ ಪ್ರಜಾಕೀಯ ಜನತಾ ಪಕ್ಷ (ಕೆಪಿಜೆಪಿ) 10, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 09 ಹಾಗೂ 01 ಪಕ್ಷೇತರ ಸದಸ್ಯರಿದ್ದಾರೆ.

ಸದ್ಯ ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದ 10 ಸದಸ್ಯರಲ್ಲಿ ನಾಗರಾಜ ಪವಾರ, ನಿಂಗಪ್ಪ ಕೋಡಿಹಳ್ಳಿ, ಹುಚ್ಚಪ್ಪ ಮೆಡ್ಲೇರಿ ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದಾರೆ. ಅರೀಫಾಖಾನಂ ಸೌದಾಗರ, ನೂರುಲ್ಲಾ ಖಾಜಿ, ಹಬಿಬುಲ್ಲಾ ಕಂಬಳಿ, ಗಫಾರಖಾನ ಐರಣಿ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಜತೆಗೆ ರಮೇಶ ಕರಡೇಣ್ಣನವರ, ಸಿದ್ದಪ್ಪ ಬಾಗಲರ, ಪ್ರಕಾಶ ಬುರುಡಿಕಟ್ಟಿ ತಟಸ್ಥವಾಗಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಸಂಸದ ಮತ್ತು ಶಾಸಕರಿಗೆ ಮತದಾನದ ಹಕ್ಕು ಇರುವುದರಿಂದ ಬಿಜೆಪಿಗೆ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಪ್ರಕಾಶ ಕೋಳಿವಾಡ ಮತ ಚಲಾಯಿಸಲು ಅವಕಾಶವಿದೆ.

ಈ ಸುದ್ದಿ ಓದಿದ್ದೀರಾ?: ಹಾವೇರಿ | ‘ಪರಿಸರ ಪತ್ರಿಕೋದ್ಯಮ’ ಪ್ರಶಸ್ತಿ ಭಾಜನರಾದ ಪತ್ರಕರ್ತ ಮಾಲತೇಶ ಅಂಗೂರ ಅವರಿಗೆ ಸನ್ಮಾನ

ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ್ ಕೋಳಿವಾಡ ಆಯ್ಕೆಯಾದ ಹಿನ್ನೆಲೆ ಹೇಗಾದರೂ ಮಾಡಿ ಕಾಂಗ್ರೆಸ್ ಅಭ್ಯರ್ಥಿಯೇ ಅಧ್ಯಕ್ಷ ಗದ್ದುಗೆ ಏರಬೇಕೆಂದು ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ನಗರಸಭೆಯಲ್ಲಿ ಕೇವಲ 09 ಸದಸ್ಯರನ್ನು ಹೊಂದಿದ್ದರೂ ಕೂಡ ಆರ್ ಶಂಕರ್ ಬಣದ ಹೆಚ್ಚಿನ ಸದಸ್ಯರು ಕಾಂಗ್ರೆಸ್ ಬೆಂಬಲಕ್ಕೆ ನಿಂತಿದ್ದಾರೆ. ತಾಲೂಕಿನಲ್ಲಿ ಬಿಜೆಪಿ ಒಡೆದು ಮೂರು ಭಾಗ ಆಗಿದ್ದರಿಂದ ಕಾಂಗ್ರೆಸ್ ಗೆ ಪ್ಲಸ್ ಆಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿರುವುದು ಗೆಲ್ಲುವ ಅವಕಾಶ ಹೆಚ್ಚಾಗಿದೆ ಎನ್ನಲಾಗಿದೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X