ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಭಾಗವಹಿಸಿ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಮೃತ ಕಾರ್ಯಕರ್ತ. ಗಾಂಧಿ ಭಾರತ ಸಮಾವೇಶದಲ್ಲಿ ಭಾಗವಹಿಸಿದ್ದಾಗ ಅವರಿಗೆ ಹೃದಯಾಘಾತ ಸಂಭವಿಸಿತ್ತು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮದುವೆ ಖುಷಿಯಲ್ಲಿದ್ದ ಯುವಕನ ಕೊಲೆ
ಮೃತರ ಕುಟುಂಬಸ್ಥರು ಪರಿಹಾರ ನೀಡುವಂತೆ ಸ್ಥಳೀಯ ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ಮನವಿ ಸಲ್ಲಿಸಿದ್ದರು. ಶಾಸಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ 5 ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ. ಭಾನುವಾರ ಶಾಸಕ ಪ್ರಕಾಶ್ ಕೋಳಿವಾಡ ಅವರು ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು.
