ಹಾವೇರಿ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ವಿರುದ್ಧ ಹೋರಾಟಕ್ಕೆ ಎಸ್ಎಫ್ಐ ಕರೆ

Date:

ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ.

- Advertisement -

ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಕೃಷ್ಣ ನಾಯ್ಕ ಮಾತನಾಡಿ, “ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಜಿಲ್ಲೆಯಲ್ಲಿ ಹಾಸ್ಟೆಲ್‌ಗಳು, ಬಸ್ಸಿನ ಸಮಸ್ಯೆಗಳು ಪರಿಹಾರವಾಗಿಲ್ಲ. ವಿದ್ಯಾರ್ಥಿಗಳಿಗೆ ಅನುಕೂಲಕ್ಕೆ ತಕ್ಕಂತೆ ಬಸ್‌ಗಳಿಲ್ಲ, ಸಮಯಕ್ಕೆ ಬಸ್ ಬರುವುದಿಲ್ಲವೆಂದು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ವಿದ್ಯಾರ್ಥಿನಿಯರ ಉಚಿತ ಬಸ್ ಪಾಸ್ ಜತೆಗೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಹಾಸ್ಟೆಲ್‌ಗೆ ಅರ್ಜಿ ಹಾಕಿದ ವಿದ್ಯಾರ್ಥಿಗಳಿಗೆ ಇನ್ನೂ ಹಾಸ್ಟೆಲ್ ಪ್ರಾರಂಭವಾಗಿಲ್ಲದಿರುವುದು ದುರಂತವಾಗಿದೆ. ಈ ಹಿಂದೆ ಸರ್ಕಾರದ ವಿರುದ್ಧ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಹಾಗೂ ನೂತನ ಹಾಸ್ಟೆಲ್ ಮಂಜೂರು ಮಾಡಬೇಕೆಂದು ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ರಾಜ್ಯಾದ್ಯಂತ ನೆಡೆದ ವಿದ್ಯಾರ್ಥಿಗಳ ಪ್ರತಿಭಟನೆ ಪರಿಣಾಮವಾಗಿ ಇಡೀ ರಾಜ್ಯದಲ್ಲಿ ಹೆಚ್ಚುವರಿಯಾಗಿ ಹಾಸ್ಟೆಲ್‌ಗಳು ಮಂಜೂರಾಗಿವೆ. ಆದರೂ ರಾಜ್ಯ ಸರ್ಕಾರ, ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲು ಮುಂದಾಗಿಲ್ಲ” ಎಂದು ಆರೋಪಿಸಿದರು.

“ಕಳೆದ ವರ್ಷದಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಲವರಿಗೆ ಬಂದಿಲ್ಲ. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ವಿಪರೀತವಾಗಿದ್ದು, ಇದನ್ನು ತಡೆಯುವಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ವಿಫಲವಾಗಿದೆ. ಡೊನೇಷನ್ ಹಾವಳಿ ವಿರುದ್ಧ ಹೋರಾಟ ಮಾಡಲು ಹಾಗೂ ಡೊನೇಷನ್ ಹಾವಳಿ ನಿಯಂತ್ರಣ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಒತ್ತಾಯಿಸಬೇಕು” ಎಂದು ತೀರ್ಮಾನಿಸಲಾಯಿತು.

“ಪ್ರಸಕ್ತ ವರ್ಷದಿಂದಲೇ ಕಾನೂನು ಮಹಾವಿದ್ಯಾಲಯ 3 ಮತ್ತು 5 ವರ್ಷದ ಕೋರ್ಸ್ ಪ್ರಾರಂಭಿಸಬೇಕು. ಜಿಲ್ಲಾ ಕೇಂದ್ರದ ನಗರದಲ್ಲೇ ಮುನ್ಸಿಪಲ್ ಮೈದಾನದಲ್ಲಿರುವ ಕಾಲೇಜು ಕಟ್ಟಡದಲ್ಲಿ ತರಗತಿಗಳನ್ನು ಪ್ರಾರಂಭ ಮಾಡಬೇಕು. ನೂತನ ಹಾವೇರಿ ವಿಶ್ವವಿದ್ಯಾಲಯ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಮಾಡಲು ಮುಂದಾಗಬೇಕು. ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಬಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ನಗರ ಸಾರಿಗೆ ವ್ಯವಸ್ಥೆ ಪ್ರಾರಂಭಿಸಬೇಕು” ಎನ್ನುವಂತಹ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ರೂಪಿಸಲು ಎಸ್ಎಫ್ಐ ಕಾರ್ಯಕರ್ತರು ಚರ್ಚೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಬೈಂದೂರು ಸೋಮೇಶ್ವರ, ದೊಂಬೆ ಕರಾವಳಿ ಮಾರ್ಗ ಕೆಎಸ್ಸಾರ್ಟಿಸಿ ಬಸ್ಸಿಗಾಗಿ ಪ್ರತಿಭಟನೆ

“ಹಾಸ್ಟೆಲ್ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ ಕೊರತೆ, ಶೈಕ್ಷಣಿಕ ಸಮಸ್ಯೆಗಳ ಹಾಗೂ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜು ಪ್ರವೇಶದ ಜತೆಗೆ ಏಕಕಾಲಕ್ಕೆ ವಸತಿ ನಿಲಯಗಳನ್ನು ಪ್ರಾರಂಭಿಸುವುದು ಸೇರಿದಂತೆ ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್ಎಫ್ಐ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾಲೇಜು-ಹಾಸ್ಟೆಲ್‌ ಮುಖಂಡರು ಸುದೀರ್ಘ ಚರ್ಚೆ ನಡೆಸಿ ಹೋರಾಟಕ್ಕೆ ಕರೆ ನೀಡಲಾಗಿದೆ” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮುಖಂಡ ಅರುಣ ಕುಮಾರ ಎನ್, ವೈಶಾಲಿ ಎನ್, ಲಕ್ಷ್ಮೀ, ಅಕ್ಷತಾ ಹೆಚ್, ಸೌಮ್ಯಾ ಪೂಜಾರ್, ಚೈತ್ರ ಕೊರವರ್, ಸ್ಪೂರ್ತಿ ಮಾಳಗಿ, ಅನಿತಾ ಎಂ, ಸೀಮಾ ಬೂದಿಹಾಳ, ಹಜ್ರತ್ ವಿ, ವಿಕಾಸ್ ಗೌಡ, ವಿಮಲ್ ನಾಥ್, ಸಂಪದ ಜಿ, ನಝಮೀನ್ ಎನ್ ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...