ಹಾವೇರಿ | ಬಿಸಿಎಂ ಹಾಸ್ಟೆಲ್ ಪ್ರವೇಶ ಆಯ್ಕೆಪಟ್ಟಿ ಶೀಘ್ರ ಬಿಡುಗಡೆಗೆ ಎಸ್‌ಎಫ್‌ಐ ಆಗ್ರಹ

Date:

ನೂತನವಾಗಿ ಮಂಜೂರಾದ ಬಿಸಿಎಂ ಹಾಸ್ಟೆಲ್‌ ಪ್ರಾರಂಭಿಸಿ, ಅರ್ಜಿ ಹಾಕಿರುವ ಎಲ್ಲ ವಿದ್ಯಾರ್ಥಿಗಳಿಗೂ ವಸತಿ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ರಾಣೆಬೆನ್ನೂರು ತಾಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಹಾಸ್ಟೆಲ್ ಪ್ರವೇಶ ಆಯ್ಕೆಪಟ್ಟಿ ಬಿಡುಗಡೆ ವಿಳಂಬ ನೀತಿಯನ್ನು ಖಂಡಿಸಿ, ಕೂಡಲೇ ಆಯ್ಕೆ ಬಿಡುಗಡೆಗಾಗಿ ಆಗ್ರಹಿಸಿ ಪಟ್ಟಣದ ಬಸ್ ನಿಲ್ದಾಣದಿಂದ ಬಿಸಿಎಂ ಇಲಾಖೆವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಎದುರು ಧರಣಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್ ಮಾತನಾಡಿ, “ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಆಯ್ಕೆಪಟ್ಟಿ ಬಿಡುಗಡೆ ಮಾಡಿ ಅನೇಕ ದಿನಗಳು ಕಳೆದಿವೆ. ರಾಣೆಬೆನ್ನೂರ ತಾಲೂಕಿನ ಆಯ್ಕೆ ಪ್ರಕ್ರಿಯೆ ವಿಳಂಬಕ್ಕೆ ಹೊಣೆ ಯಾರು? ಆಯ್ಕೆಪಟ್ಟಿ ಬಿಡುಗಡೆ ಮಾಡುವವರೆಗೂ ಇಲಾಖೆಯ ಎದುರು ಹಗಲು ರಾತ್ರಿ ಧರಣಿ ನಡೆಸಲಾಗುವುದು. ಅಧಿಕಾರಿಗಳು ಶಾಸಕರ ಕಚೇರಿಗೆ ಹೋಗಿ ಆಯ್ಕೆ ಪಟ್ಟಿ ಬಿಡುಗಡೆ ಮಾಡುವವರೆಗೂ ಧರಣಿ ಮುಂದುವರೆಸುತ್ತೇವೆ” ಎಂದು ಪಟ್ಟುಹಿಡಿದ್ದ ಎಸ್ಎಫ್ಐ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಆಳವಾದ ಅಧ್ಯಯನ ನಡೆಸಿ ‘ಹಾವಳಿ’ ಕಾದಂಬರಿ ರಚಿಸಲಾಗಿದೆ: ಪವಣ ಕುಮಾರ್ ಕೆ ಪಿ

ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಕೊಣಸಾಲಿ, ಶೃತಿ ಆರ್ ಎಂ, ಕರಬಸಪ್ಪ ತೋಟಗೇರ್, ಶೃತಿ ಆರ್ ಎಂ, ಖಲಂದರ್ ಬಿ ಎಂ, ಜೀವನ್ ಕುಮಾರ ನಾಯಕ್, ಸಂಜೀವ ಮತ್ತೂರ, ಸಚಿನ್ ಹರಿಜನ ಪವನ್ ಕುಮಾರ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...