ಹಾವೇರಿ | ಸರ್ಕಾರಿ ಕಾನೂನು ಮಹಾವಿದ್ಯಾಲಯ ನಿರ್ಮಿಸಿ, ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಿ: ಎಸ್ಎಫ್ಐ ಆಗ್ರಹ

Date:

ಹಾವೇರಿ ನಗರದಲ್ಲಿಯೇ ಸರ್ಕಾರಿ ಕಾನೂನು ಮಹಾವಿದ್ಯಾಲಯ ಕಟ್ಟಡ ನಿರ್ಮಿಸಿ ಹಾಗೂ ಪ್ರಸಕ್ತ ವರ್ಷದಿಂದಲ್ಲೇ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಜಿಲ್ಲಾ ಸಮಿತಿಯ ಕಾರ್ಯಕರ್ತರು ರಾಜ್ಯ ಸರ್ಕಾರದ ಉಪ ಸಭಾಪತಿ ಹಾಗೂ ಶಾಸಕ ರುದ್ರಪ್ಪ ಲಮಾಣಿ ಅವರ ಗೃಹ ಕಚೇರಿಯಲ್ಲಿ ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು.

- Advertisement -

ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್ ಮಾತನಾಡಿ, “ನೂರಾರು ವಿದ್ಯಾರ್ಥಿಗಳು ಪದವಿ ಮುಗಿಸಿ ಉನ್ನತ ಶಿಕ್ಷಣ ಪಡೆಯಬೇಕು, ಅದರಲ್ಲೂ ವಕೀಲರಾಗಬೇಕೆಂದು ಕನಸು ಕಟ್ಟಿಕೊಂಡಿರುತ್ತಾರೆ. ಆದರೆ ಹಾವೇರಿ ಜಿಲ್ಲೆಯ ರಚನೆಗೊಂಡು 26 ವರ್ಷ ಕಳೆದರೂ ಸರ್ಕಾರಿ ಕಾನೂನು ಕಾಲೇಜು ಇಲ್ಲದೆ ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳ ಕಡೆ ಮುಖ ಮಾಡುವಂತಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹಾವೇರಿ ಜಿಲ್ಲಾ ಕೇಂದ್ರವಾಗಿ 26 ವರ್ಷಗಳು ಉರುಳಿದರೂ ಕೂಡ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿದ್ಯಾರ್ಥಿ ಸಮುದಾಯ ನೂರಾರು ಸಮಸ್ಯೆಗಳನ್ನು ಎದುರಿಸುವ ಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣವಾಗಿದೆ. ಈವರೆಗೂ ಇಲ್ಲಿ ಆಳ್ವಿಕೆ ಮಾಡಿದ ಸಚಿವರು, ಶಾಸಕರು, ಸಂಸದರು ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದಾಗಿ ವಿದ್ಯಾರ್ಥಿ ಸಮುದಾಯಕ್ಕೆ ಅತ್ಯಂತ ಅಗತ್ಯವಾದ ಮೂಲ ಸೌಲಭ್ಯಗಳನ್ನು ಒದಗಿಸದೆ ಅವರನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿಸಲು ಹೊರಟಿದೆ” ಎಂದು ಆರೋಪಿಸಿದರು.

“ಇಡೀ ಜಿಲ್ಲೆಗೆ ಒಂದೇ ಒಂದು ಖಾಸಗಿ ಕಾನೂನು ಕಾಲೇಜು ಇದೆ. ರಾಣೇಬೆನ್ನೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ಕೇವಲ 60 ಸೀಟುಗಳಿಗೆ ಮಾತ್ರ ಅವಕಾಶವಿದೆ. 60 ಸೀಟುಗಳಿಗೆ ಪ್ರತಿ ವರ್ಷವೂ ನೂರಾರು ಅರ್ಜಿಗಳು ಬರುತ್ತವೆ. ಅದರಲ್ಲಿ ಕೇವಲ 60 ಸೀಟ್ ನಿಯಮದಂತೆ ಭರ್ತಿ ಮಾಡಿಕೊಳ್ಳುತ್ತಾರೆ. ಇತರೆ ವಿದ್ಯಾರ್ಥಿಗಳಿಗೆ ಸೀಟು ಸಿಗದಿರುವುದು‌ ಹಾಗೂ ಸರ್ಕಾರಿ ಶುಲ್ಕಕ್ಕಿಂತ ದುಪ್ಪಟ್ಟು ಶುಲ್ಕ ವಸೂಲಿ ಮಾಡುವುದರಿಂದ ಸಾಮಾನ್ಯ ಬಡ ವಿದ್ಯಾರ್ಥಿಗಳಿಗೆ ಕಾನೂನು ಪದವಿ ಪಡೆಯುವುದು ಅಸಾದ್ಯವಾಗಿದೆ. ಅನಿವಾರ್ಯವಾಗಿ ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಶಿರಸಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳ ಮೊರೆ ಹೋಗಬೇಕಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್ಎಫ್ಐ) ಅನೇಕ ವರ್ಷಗಳಿಂದ ಹಾವೇರಿ ಜಿಲ್ಲೆಗೊಂದು ಕಾನೂನು ಕಾಲೇಜು ಮಂಜೂರು ಮಾಡುವಂತೆ ಹೋರಾಟ ಮಾಡುತ್ತಲೇ ಬಂದಿದೆ. ಆದರೂ ಸ್ಪಂದಿಸದ ಸರ್ಕಾರದ ನಿರ್ಲಕ್ಷ್ಯಕ್ಕೆ ಖಂಡನೀಯ” ಎಂದರು.

“ನಗರದಿಂದ ದೂರದ ಯಾವುದೇ ಸಾರಿಗೆ ಸಂಪರ್ಕ ಇಲ್ಲದಿರುವ ನೆಲೋಗಲ್ ಗುಡ್ಡದಲ್ಲಿ ಮಾಡುತ್ತಿರುವುದು ಸರಿಯಲ್ಲ. ಅಲ್ಲಿಗೆ ಬಸ್‌ಗಳು ಹೋಗುವುದಿಲ್ಲ. ಕನಿಷ್ಟ ದ್ವಿಚಕ್ರ ವಾಹನಗಳು ಹೋಗಲು ಸಾದ್ಯವಿಲ್ಲ. ಇದರಿಂದ ಕಾನೂನು ಶಿಕ್ಷಣದಿಂದ ವಂಚಿತರಾಗುವ ಅಪಾಯ ಕಾಡುತ್ತದೆ. ಹಾಗಾಗಿ ನಗರದಲ್ಲಿಯೇ ಕಟ್ಟಡ ನಿರ್ಮಿಸುವಂತಾಗಬೇಕು. ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಲು ಮುನ್ಸಿಪಲ್‌ ಮೈದಾನದಲ್ಲಿ ನಡೆಸಲು ಎಲ್ಲ ರೀತಿಯ ಅವಕಾಶಗಳಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜು.15ರಂದು ಬೃಹತ್‌ ಪ್ರತಿಭಟನೆ

“ವಿದ್ಯಾರ್ಥಿ ಸಂಘಟನೆಗಳು, ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ವಿಚಾರವಾದಿಗಳ, ಪ್ರಗತಿಪರ ಸಂಘಟನೆಗಳು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಕೈಗೊಳ್ಳಬೇಕು. ಇದಕ್ಕೆ ಸಂಬಂಧಿಸಿ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಈತ ಗಮನ ಹರಿಸಬೇಕು” ಎಂದು ಬಸವರಾಜ ಎಸ್ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರುಗಳಾದ ಸುಲೆಮಾನ್ ಮತ್ತಿಹಳ್ಳಿ, ಲಕ್ಷ್ಮಣ ಕೆಂಗಪ್ಪಳವರ, ನಾಗರಾಜ ಲಮಾಣಿ, ಪ್ರದೀಪ್ ಎಸ್ ಆರ್, ಮಾಲತೇಶ್ ನೆಗಳೂರ, ಈಶ್ವರ್ ಡಿ ಎಚ್, ದಯಾನಂದ ಹಿರೇಮಠ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...