ಹಾವೇರಿ | ಹಾಸ್ಟೆಲ್ ಆಹಾರ ಭತ್ಯೆ ಹೆಚ್ಚಿಸಿ ಉತ್ತಮ ಗುಣಮಟ್ಟದ ಆಹಾರ ಒದಗಿಸಿ: ಎಸ್ಎಫ್ಐ ಆಗ್ರಹ

Date:

Advertisements

ಹಾಸ್ಟೆಲ್ ಆಹಾರ ಭತ್ಯೆ ಹೆಚ್ಚಿಸಿ ಉತ್ತಮ ಗುಣಮಟ್ಟದ ಆಹಾರ ಒದಗಿಸಿ ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮಂಗಳವಾರ ಮುಂಜಾನೆ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಸಂಘಟನೆ ಕಾರ್ಯಕರ್ತರು ಒಗ್ಗೂಡಿ ಸಭೆ ನಡೆಸಿ ಊಟದ ವ್ಯವಸ್ಥೆ ಸರಿಪಡಿಸಿ, ಆಹಾರ ಭತ್ಯೆ ಹೆಚ್ಚಿಸಿ, ಗುಣಮಟ್ಟದ ಆಹಾರ ನೀಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು.

“ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವಂತೆ ಅನೇಕ ಬಾರಿ ಹೇಳಿದ್ದರೂ ವಸತಿ ನಿಲಯದಲ್ಲಿ ಈವರಗೆ ಸರಿಪಡಿಸಿಕೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ” ಎಸ್‌ಎಫ್‌ಐ ಹಾವೇರಿ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ್ ಎಸ್ ಹೇಳಿದರು.

Advertisements

“ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಹಾಸ್ಟೆಲ್ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕಿನ ಅಧಿಕಾರಿಗಳು ಮುಂದಾಗುತ್ತಿಲ್ಲ. ಕೂಡಲೇ ಊಟದ ವ್ಯವಸ್ಥೆ ಸರಿಪಡಿಸಿ, ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ಸರ್ಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವ ವಿದ್ಯಾರ್ಥಿ ವಿರೋಧಿ ನೀತಿ ಸರಿಯಲ್ಲ” ಎಂದು ಗಂಭೀರವಾಗಿ ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಸಕಲೇಶಪುರ | ಜಲ ಪ್ರವಾಹ : ಭಯದಲ್ಲಿ ದಿನದೂಡುತ್ತಿರುವ ನಾಗರಿಕರು!

ಸಮಾಜ ಕಲ್ಯಾಣ ಇಲಾಖೆಯ ಮ್ಯಾನೇಜರ್ ಜೀವನ್ ಪಮ್ಮಾರ ಮಾತನಾಡಿ, “ಪರಿಶೀಲನೆ ನಡೆಸಿ ಕೂಡಲೇ ಊಟದ ವ್ಯವಸ್ಥೆ ಸರಿಪಡಿಸಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಅತಿಕ ಜಿ ಎಚ್, ಕಿರಣ್ ಬಸನಾಳ, ಪ್ರಜ್ವಲ್, ಸುದೀಪ್ ಕೆ, ಅಭಿಷೇಕ್ ದೊಡ್ಡಮನಿ, ನನ್ನುಸಾಬ ನದಾಫ, ರಮೇಶ್ ನಾಯಕ್, ನಾಗರಾಜ್ ಕುರಿ, ಸಲೀಂ ಅಹ್ಮದ್, ಆಂಜನೇಯ ಬೇವಿನಹಳ್ಳಿ, ನಿಂಗರಾಜ ದೊಡ್ಡಮನಿ, ಕಿರಣ್ ಲಮಾಣಿ, ಸುದೀಪ್ ಯಲಿಗಾರ, ಕರಬಸು ತಳವಾರ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X