ಹಾವೇರಿ | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೆ ಎಸ್ಎಫ್ಐ ಆಗ್ರಹ

Date:

Advertisements

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯತನವನ್ನು ಖಂಡಿಸಿರುವ ಎಸ್‌ಎಫ್‌ಐ, ಕೂಡಲೇ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಿ 2-3 ತಿಂಗಳು ಕಳೆದರೂ ಕೂಡ ಹಾಸ್ಟೆಲ್ ಬಯಸಿ ವಿದ್ಯಾರ್ಥಿಗಳು ಹಾಸ್ಟೆಲ್‌ಗಾಗಿ ಅರ್ಜಿ ಹಾಕಿದ್ದಾರೆ. ಆದರೆ ಇನ್ನೂ ಕೂಡ ಆಯ್ಕೆ ಪಟ್ಟಿ ಪ್ರಕಟಿಸಿಸಲ್ಲ. ಇದರಿಂದಾಗಿ ಪ್ರತಿದಿನ ವಿದ್ಯಾರ್ಥಿಗಳು ಗ್ರಾಮಗಳಿಂದ ಕಾಲೇಜುಗಳಿಗೆ ಹಣ ಕೊಟ್ಟು ಬರುತ್ತಿದ್ದಾರೆ. ಒಂದೆಡೆ ಅನೇಕ ಗ್ರಾಮಗಳಿಗೆ ಬಸ್ ಸೌಲಭ್ಯ ಇಲ್ಲ ಮತ್ತು ಅನೇಕ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಹಾಕಿ ಆಯ್ಕೆ ಪಟ್ಟಿ ಪ್ರಕಟಿಸುತ್ತಾರೆ ಎಂದು ಕಾಯುತ್ತಿದ್ದಾರೆ. ಅನೇಕ ವಿದ್ಯಾರ್ಥಿಗಳು ದೂರದ ಊರಿನಿಂದ ನೂರಾರು ರೂಪಾಯಿ ಖರ್ಚು ಮಾಡಿಕೊಂಡು ಬರುತ್ತಿದ್ದಾರೆ ಎಸ್‌ಎಫ್‌ಐ ಹಾವೇರಿ ಮುಖಂಡ ಬಸವರಾಜ್ ಎಸ್ ಹೇಳಿದರು.

2024-25ನೇ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆ ವಿಳಂಬ ನೀತಿಯನ್ನು ಖಂಡಿಸಿ, ಅಧಿಕಾರಿಗಳ ನಿರ್ಲಕ್ಷ್ಯತನ ವಿರೋಧಿಸಿ, ಕೂಡಲೇ ಆಯ್ಕೆ ಬಿಡುಗಡೆ ಹಾಗೂ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಸೌಕರ್ಯ ಕಲ್ಪಿಸಲು ಹಾಗೂ ಹೆಚ್ಚುವರಿ ಹಾಸ್ಟೆಲ್ ಮಂಜೂರು ಮಾಡುವಂತೆ ಒತ್ತಾಯಿಸಿ ಎಸ್ಎಫ್ಐ ಹಾವೇರಿ ಜಿಲ್ಲಾ ಘಟಕದ ವತಿಯಿಂದ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ್ ಶ್ರೀಧರ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

Advertisements

ಮೂರು ತಿಂಗಳು ಕಳೆದರು ಈವರೆಗೂ ಹಾಸ್ಟೆಲ್ ಆಯ್ಕೆ ಪ್ರಕ್ರಿಯೆ ನಡೆಸದೆ ಇಷ್ಟೊಂದು ನಿರ್ಲಕ್ಷ್ಯತನ ತೋರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನಡೆ ಸರಿಯಲ್ಲ. ಅಧಿಕಾರಿಗಳು ಮುಂಜಾಗ್ರತೆಯ ವಹಿಸಿ ಕಾಲೇಜು ಪ್ರಾರಂಭವಾಗುವ ಸಂದರ್ಭದಲ್ಲಿಯೇ ಹಾಸ್ಟೆಲ್ ಆಯ್ಕೆ ನಡೆಯಬೇಕು. ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಾಸ್ಟೆಲ್‌ಗಳನ್ನು ಕಲ್ಪಿಸಬೇಕು ಎಂದು ಬಸವರಾಜ್ ಎಸ್ ಒತ್ತಾಯಿಸಿದರು.

ಮೆನು ಚಾರ್ಟ್ ಪ್ರಕಾರ ಉತ್ತಮ ಗುಣಮಟ್ಟದ ಆಹಾರವನ್ನು ಸಮಯಕ್ಕೆ ಸರಿಯಾಗಿ ಒದಗಿಸಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಹಾಗೂ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 3.500 ರೂ ಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಸುಲೈಮಾನ್ ಮತ್ತಿಹಳ್ಳಿ ಮಾತನಾಡಿ, ಪ್ರತಿ ನಿತ್ಯವು ಕಾಲೇಜ್, ಹಾಸ್ಟೆಲ್, ಕಚೇರಿ ಓಡಾಡಿ ಸಾಕಾಗಿದೆ ಸಾಮಾನ್ಯ ಬಡ ವಿದ್ಯಾರ್ಥಿಗಳನ್ನು ಅಲೆದಾಡಿಸುವುದು ಖಂಡನೀಯ. ಅಧಿಕಾರಿಗಳು ಹಾಗೂ ಸರ್ಕಾರ ಎಚ್ಚೆತ್ತುಕೊಂಡು ಕಾಲೇಜ್ ಹಾಸ್ಟೆಲ್ ಏಕಕಾಲದಲ್ಲಿ ಪ್ರಾರಂಬಿಸಿಬೇಕು. ಕೂಡಲೇ ಆಯ್ಕೆ ಪಟ್ಟಿ ಬಿಡುಗಡೆ ಮಾಡಬೇಕು ಒಂದುವೇಳೆ ಇದೆ ನಿರ್ಲಕ್ಷ್ಯತನ ಮುಂದುವರೆದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಾಲತೇಶ್ ಬ ದೊಡ್ಡಮನಿ, ನೇಹಾಲ್ ಖಾನ್ ಗಂಗಾವತಿ, ಗೌತಮ್ ಸಾವಕ್ಕನವರ, ವಿಜಯ ಶಿರಹಟ್ಟಿ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X