ಹಾವೇರಿ | ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಎಸ್ಎಫ್ಐ, ಡಿವೈಎಫ್ಐ ಪ್ರತಿಭಟನೆ

Date:

Advertisements

“ಗುತ್ತಲದ ೯ನೇ ತರಗತಿಯ ವಿದ್ಯಾರ್ಥಿನಿಯ ಮೇಲೆನ ಲೈಂಗಿಕ ದೌರ್ಜನ್ಯ ಎಸಗಿರುವ ಶಿಕ್ಷಕನ ಮೇಲೆ ಕಠಿಣ ಕ್ರಮ ಜರುಗಿಸಬೇಕು” ಎಂದು ವಿದ್ಯಾರ್ಥಿಗಳು ಒತ್ತಾಯಿದರು.

ಹಾವೇರಿ ಪಟ್ಟಣದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ ಹಾಗೂ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಮೇಲೆ ಕ್ರಮ ಜರುಗಿಸುವಂತೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಎಸ್ಎಫ್ಐ ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರ ಕೊರವರ್ ಕಾರ್ಯದರ್ಶಿ ಗಂಗಾ ಯಲ್ಲಾಪುರ ಮಾತನಾಡಿ, “ದೇಶ, ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿಯೂ ವಿದ್ಯಾರ್ಥಿನಿಯರು, ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯಗಳು ಆತ್ಯಾಚಾರ ನಡೆಯುತ್ತಿರುವುದು ಖಂಡನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಗುತ್ತಲದ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ಮೇಲೆ ಶಿಸ್ತು ಕ್ರಮ ಜರುಗಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಶಾಲಾ-ಕಾಲೇಜ್, ಹಾಸ್ಟೆಲ್ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಕೆ.ಎಸ್.ಡಿ.ಎಫ್ ಮುಖಂಡರಾದ ತಿಪ್ಪೇಸ್ವಾಮಿ ಹೊಸಮನಿ, ಬಿಎಸ್ಎಸ್ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಎಸ್ಎಫ್ಐ ಮುಖಂಡರಾದ ಹಜರತ್ ಬಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಪದ್ಮಲತಾ, ವೇದವಲ್ಲಿ, ಸೌಜನ್ಯ ಪ್ರಕರಣಗಳನ್ನು SIT ತನಿಖೆಗೊಳಪಡಿಸಲು ಎ‌ಸ್ಎಫ್ಐ ಒತ್ತಾಯ

ಪ್ರತಿಭಟನೆಯಲ್ಲಿ ಎಸ್ ಎಫ್ ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಡಿ ವೈ ಎಫ್ ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪುಜಾರ, ಮುಖಂಡರು ಸುನೀಲ್ ಕುಮಾರ್ ಎಲ್, ಅರುಣ ಕುಮಾರ ನಾಗವತ್, ಫಕ್ಕರೇಶ್ ಮ್ಯಗಳಮನಿ, ಸುದೀಪ್ ಲಮಾಣಿ, ನವೀನ್ ರಾಥೋಡ್, ಚೇತನ್ ಲಮಾಣಿ ,ಮುತ್ತಪ್ಪ ಲಮಾಣಿ, ವಿಜಯ್ ಎನ್,  ಸಂಜೀವ ಕೆ, ವಿನಾಯಕ್, ಶಿವು, ರಾಹುಲ ಲಮಾಣಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X