ಹಾವೇರಿ | ಸರ್ಕಾರಿ ಶಾಲೆ ಮುಚ್ಚದಂತೆ ಸಿಎಂಗೆ SFI ಮನವಿ

Date:

ಹಾವೇರಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಹಾವೇರಿ ಜಿಲ್ಲಾ ಸಮಿತಿಯ ವತಿಯಿಂದ 2000 ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ಕೈಬಿಡುವಂತೆ ಮನವಿ ಸಲ್ಲಿಸಲಾಯಿತು.

- Advertisement -

ಮನವಿಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅವರು, “ಸರ್ಕಾರಿ ಶಾಲೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವುದಿಲ್ಲ ಅಥವಾ ಖಾಸಗಿ ಶಾಲೆಗಳಿಗೆ ಕೊಡುವುದಿಲ್ಲ” ಎಂದು ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಕಾಡಿನ ಮಕ್ಕಳೇ ವನ್ಯಜೀವಿಗಳ ನಿಜವಾದ ಬಂಧುಗಳು: ಆದಿವಾಸಿಗಳ ಜ್ಞಾನ,...

ಕಾಡು ಎಂದರೆ ಕೇವಲ ಮರಗಳು, ಪ್ರಾಣಿಗಳು ಮತ್ತು ಭೌಗೋಳಿಕ ಪ್ರದೇಶವಲ್ಲ. ಅದು ಸಾವಿರಾರು ವರ್ಷಗಳಿಂದ ಮನುಷ್ಯ ಮತ್ತು ಪ್ರಕೃತಿ ಪರಸ್ಪರ ಅವಲಂಬನೆಯೊಂದಿಗೆ ಬದುಕಿಕೊಂಡು ಬಂದಿರುವ ಜೀವಂತ ಪರಿಸರ ವ್ಯವಸ್ಥೆ. ಈ ವ್ಯವಸ್ಥೆಯೊಂದಿಗೆ ಅತ್ಯಂತ...

ಹೆಬ್ಬೆರಳು ಕತ್ತರಿಸಿದ ಆಕ್ರಮಣಕಾರರು, ಗುಮಾಸ್ತರನ್ನು ಸೃಷ್ಟಿಸಿದ ಮೆಕಾಲೆ- ಇದು...

ಇತಿಹಾಸದ ಹೆಸರಿನಲ್ಲಿ ಆಯ್ದ ನಿರೂಪಣೆ; ಜಾತಿ ಪ್ರಾಬಲ್ಯ, ಶಿಕ್ಷಣದ ಹಕ್ಕು ಮತ್ತು ಆಧುನಿಕ ಅಭಿವೃದ್ಧಿಯ ವಾಸ್ತವಗಳು ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸದ ಹೆಸರಿನಲ್ಲಿ ಮುಂದಿಟ್ಟಿರುವ ಹೆಬ್ಬೆರಳು ಕತ್ತರಿಸಿದ ಆಕ್ರಮಣಕಾರರು ಮತ್ತು ಗುಮಾಸ್ತರನ್ನು ಸೃಷ್ಟಿಸಿದ...

ಈ ಸಂದರ್ಭದಲ್ಲಿ ಎಸ್ಎಫ್ಐ ಹಾವೇರಿ ಜಿಲ್ಲಾ ಅಧ್ಯಕ್ಷ ಅರುಣ್ ಕುಮಾರ್ ನಗವತ್ ಮಾತನಾಡಿ, ರಾಜ್ಯದ 2000 ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಪ್ರಯತ್ನವು ಬಡ, ಗ್ರಾಮೀಣ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣದ ಹಕ್ಕಿಗೆ ಧಕ್ಕೆ ತರುವ ಆತಂಕವಿದೆ. ಸರ್ಕಾರಿ ಶಾಲೆಗಳು ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಪ್ರಮುಖ ಆಧಾರ ಸ್ತಂಭಗಳಾಗಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳ ವಶಕ್ಕೆ ನೀಡಬಾರದು. ಈ ಯೋಜನೆಯನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ಈ ಭರವಸೆಯನ್ನು ಸ್ವಾಗತಿಸುತ್ತೇವೆ. ಆದರೆ ಕೇವಲ ಭರವಸೆಗೆ ಸೀಮಿತವಾಗದೆ, ಸರ್ಕಾರಿ ಶಾಲೆಗಳ ಅಸ್ತಿತ್ವ ಮತ್ತು ಸ್ವಾಯತ್ತತೆಯನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಸ್ಪಷ್ಟವಾದ ಅಧಿಕೃತ ನಿರ್ಧಾರ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಯನ್ನೂ ಉಳಿಸುವವರೆಗೂ SFI ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಸರ್ಕಾರಿ ಶಿಕ್ಷಣ ವ್ಯವಸ್ಥೆಯ ರಕ್ಷಣೆಗಾಗಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಒಗ್ಗಟ್ಟಾಗಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಚೃತ್ರಾ ಕೊರವರ, ಮುಖಂಡರಾದ ಮಹಮದ್ ಯಾಸಿನ್, ಲೋಕೇಶ ಎಸ್, ದ್ಯಾಮಣ್ಣ ಆರೇರ್, ಶೋಭ ದೇವರಮನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತನಿಖೆಗೆ ಸಿಜೆಐ ಸೂಚಿಸಿದ್ದ ನ್ಯಾಯಾಧೀಶರೇ ಈಗ ಜಾರ್ಖಂಡ್ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ!

ಪ್ರಾಮಾಣಿಕತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ದೂರುಗಳ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಇರಾನಿನ ದಾಳಿ ಭೀತಿ: ಬಂಗಲೆ ತೊರೆದು ಸೇನಾ ನೆಲೆ ಸೇರಿದ ಟ್ರಂಪ್ ಸಚಿವರು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಪ್ರಮುಖ ಸಚಿವರು ಮತ್ತು ಉನ್ನತ...

ಈ ದಿನ ಸಂಪಾದಕೀಯ | ಡಿಲಿಮಿಟೇಷನ್: 50% ಸಮಾನ ಕ್ಷೇತ್ರಗಳ ಹೆಚ್ಚಳವಾಗಲಿ; ಶಾಶ್ವತ ಸಂವಿಧಾನಾತ್ಮಕ ರಕ್ಷಣೆ ಸಿಗಲಿ

ಬಿಜೆಪಿಯ ತಂತ್ರಗಳಿಗೆ ಅವಕಾಶ ದೊರೆತರೆ, ಚುನಾವಣೆಯಲ್ಲಿ ಮತದಾರರು ನೀಡುವ ತೀರ್ಪಿಗೂ ಪಕ್ಷಗಳು...

ಚಿಕ್ಕಮಗಳೂರು | ಆನೆಗಳ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು; ಅನಿಲ್ ಹೊಸಕೊಪ್ಪ ಆಗ್ರಹ

ಕಾಡಿನಲ್ಲಿ ಆಹಾರ ಮತ್ತು ನೀರಿನ ವ್ಯವಸ್ಥೆ ಕಲ್ಪಿಸದ ಪರಿಣಾಮ ರೈತರ ತೋಟಗಳೇ...