ಹಾವೇರಿ | ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಸ್ಎಫ್ಐ ಪ್ರತಿಭಟನೆ

Date:

Advertisements

“ರಾಜ್ಯದ 10 ಜಿಲ್ಲೆಗಳಲ್ಲಿರುವ ಸರ್ಕಾರಿ ಎಸಿ/ಎಸ್ಟಿ ವಸತಿಯುತ ಪ್ರಥಮ ದರ್ಜೆ ಕಾಲೇಜುಗಳಿಗೆ ವಸತಿ ಸೌಲಭ್ಯ, ಹೆಚ್ಚುವರಿ ಬಸ್ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ” ಎಸ್.ಎಫ್.ಐ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಹಾವೇರಿ ಜಿಲ್ಲೆಯ ಕಳ್ಳಿಹಾಳ ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜು ಎದುರಿಗೆ ಭಾರತ ವಿದ್ಯಾರ್ಥಿ ಫೆಡರೇಷನ್‌ ವತಿಯಿಂದ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬ್ರಹತ್ ಪ್ರತಿಭಟನೆ ನಡೆಸಿ, ಕೆಎಸ್ಆರ್ಟಿಸಿ ಕಂಟ್ರೋಲರ್ ಕೆ.ಬಿ.ನಾಯಕ ಹಾಗೂ ಪ್ರಾಂಶುಪಾಲರಾದ ಡಾ|| ಡಿ.ಟಿ. ಪಾಟೀಲ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎಸ್. ಎಫ್.ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ರಾಜ್ಯದಲ್ಲಿ ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುತ ಪ್ರಥಮ ದರ್ಜೆ ಕಾಲೇಜುಗಳು ಪ್ರಾರಂಭವಾಗಿ ಏಳು ವರ್ಷಗಳು ಕಳೆದರು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯದಿಂದ ವಂಚಿತರಾಗಿ ಮಾಡಿರುವುದನ್ನು ಎಸ್ಎಫ್ಐ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ”ಎಂದರು.

“ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ  ಹಾಗೂ ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಭಾಗಗಳಲ್ಲಿನ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾರಣಕ್ಕೆ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಗ್ರಾಮೀಣ ಭಾಗದಲ್ಲಿ ವಸತಿಯುತ ಶಿಕ್ಷಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ 2017 18ರಲ್ಲಿ ವಸತಿಯುತ ಸರ್ಕಾರಿ ಎಸ್ಸಿ/ಎಸ್ಟಿ ವಸತಿಯುತ ಪ್ರಥಮ ದರ್ಜೆ ಕಾಲೇಜುಗಳನ್ನು ರಾಜ್ಯದ ಹತ್ತು ಜಿಲ್ಲೆಗಳಿಗೆ ಮಂಜೂರು ಮಾಡಲಾಗಿತ್ತು” ಎಂದರು.

“ತಾವುಗಳು ಮುಖ್ಯಮಂತ್ರಿ ಆಗಿದ್ದ ಮೊದಲಿನ ಅವಧಿಯ ಕೊನೆ ವರ್ಷದಲ್ಲಿ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 60% ಮತ್ತು ಹಿಂದುಳಿದ ವರ್ಗಗಳ 40% ವಿದ್ಯಾರ್ಥಿಗಳಿಗಾಗಿ ಇಡೀ ರಾಜ್ಯಗಳ ಪೈಕಿ ಆರ್ಥಿಕವಾಗಿ ಹಿಂದುಳಿದ 10 ಜಿಲ್ಲೆಗಳಾದ ಹಾವೇರಿ, ಕೊಪ್ಪಳ, ಕೋಲಾರ,  ಚಿತ್ರದುರ್ಗ, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ, ಚಾಮರಾಜನಗರ, ರಾಯಚೂರುಗಳಲ್ಲಿ ವಸತಿಯುಕ್ತ ಪದವಿ ಕಾಲೇಜುಗಳನ್ನ ಆರಂಭಿಸಲು ತಿರ್ಮಾನಿಸಲಾಗಿತ್ತು. ಅದರಂತೆ ಎಸ್‌ಇಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ಪ್ರತಿ ಕಾಲೇಜಿಗೆ 25 ಕೋಟಿಯಂತೆ ಒಟ್ಟು 250 ಕೋಟಿ ಅನುದಾನ ವಿನಿಯೋಗಿಸಿ ಹಾವೇರಿ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಕಾಲೇಜು ಆರಂಭಿಸಲಾಯಿತು” ಎಂದು ತಿಳಿಸಿದರು.

“ಹಾವೇರಿಯಲ್ಲಿ ಈ ಮೊದಲು ಬೇರೆ ಬೇರೆ ಕಡೆಗಳಲ್ಲಿ ತರಗತಿ ನಡೆಸಿದ ಕಾಲೇಜು ಈಗ ತನ್ನದೇ ಆದ ಸುಸಜ್ಜಿತ ಕ್ಯಾಂಪಸ್‌ನಲ್ಲಿ ತರಗತಿ ಆರಂಭಿಸಿದೆ. ಆದರೆ, ಸರಿಯಾದ ನಿಯಮಗಳನ್ನು ರೂಪಿಸದ ಕಾರಣ ಏಳು ವರ್ಷ ಕಳೆದರೂ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವ್ಯವಸ್ಥೆಯಾಗಿಲ್ಲ. ಈಗಂತೂ ಹಾವೇರಿ ತಾಲೂಕಿನ ಭೂವೀರಾಪುರದಲ್ಲಿ ನಿರ್ಮಾಣವಾಗಿರುವ ಕಾಲೇಜು ಕ್ಯಾಂಪಸ್‌ನಲ್ಲಿ ಬಾಲಕರು ಹಾಗೂ ಬಾಲಕಿಯರಿಗೆ ಪ್ರತ್ಯೇಕ ಹಾಸ್ಟೆಲ್‌ ಕಟ್ಟಡಗಳು ಸಿದ್ಧವಾಗಿ ಎರಡು ವರ್ಷ ಕಳೆದಿದೆ. ಆದರೂ ಸರ್ಕಾರ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವ್ಯವಸ್ಥೆ ಕಲ್ಪಿಸಲಾಗಿಲ್ಲ” ಅಸಮಾಧಾನ ವ್ಯಕ್ತಪಡಿಸಿದರು.

“ಈ ಕುರಿತು ಸರ್ಕಾರದಲ್ಲಿಯೇ ಇನ್ನೂ ಗೊಂದಲದಲ್ಲಿದೆ. ಒಂದು ಯೋಜನೆ ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಘೋಷಣೆಯಾಗಿರುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಎರಡನೇ ಬಾರಿ ಅಧಿಕಾರಕ್ಕೆ ಬಂದರೂ ಈಡೇರದಿರುವುದು ವಿಪರ್ಯಾಸವೇ ಸರಿ” ಎಂದು ಬೇಸರ ವ್ಯಕ್ತಪಡಿಸಿದರು. 

ಎಸ್ಎಫ್ಐ ಮುಖಂಡ ಅರುಣ್ ನಾಗವತ್ ಮಾತನಾಡಿ, “ಕೂಡಲೇ ಸರ್ಕಾರ ನಿರ್ಮಾಣವಾಗಿರುವ ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಗಳಲ್ಲಿಯೇ ಶೀಘ್ರವಾಗಿ ಅಗತ್ಯ ಮೂಲಭೂತ ಸೌಕರ್ಯಗಳು, ಖಾಯಂ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೆತರ ಸಿಬ್ಬಂದಿ ನೇಮಕಾತಿ ಸೇರಿದಂತೆ ಸ್ವಂತ ಕಟ್ಟಡದಲ್ಲಿಯೇ ವಸತಿ ಸೌಲಭ್ಯ ಪ್ರಾರಂಭಿಸುವ ಜೊತೆಗೆ ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ಐಶ್ವರ್ಯ ಬಾಳಿಗೇರಿ ಮಾತನಾಡಿ, “ಹತ್ತಾರು ಕಿಮೀ ದೂರದ ಗುಡ್ಡದ ಮೇಲಿರುವ ಕಾಲೇಜ್ ಗೆ ಯಾವುದೇ ಮೂಲಭೂತ ಸೌಲಭ್ಯವಿಲ್ಲ, ವಿದ್ಯಾರ್ಥಿನಿಯರು ಕಾಲೇಜಿಗೆ ಬರಲು ಭಯಬೀತರಾಗಿದ್ದಾರೆ. ಪ್ರತಿನಿತ್ಯ ನಡೆದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಗಳ ಹಿತಗಮನಿಸಿ ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಸುನೀಲ್ ಕುಮಾರ್ ಎಲ್, ಚಾಮುಂಡೇಶ್ವರಿ, ಉಷಾ ಪೂಜಾರ್, ಪವಿತ್ರ ಶಿಂಗಾವಿ, ನಿಂಗಮ್ಮ ಅನ್ವೇರಿ, ಪ್ರೀಯ ಕಟ್ಟಿವಾಣಿ, ರಾಧಿಕಾ ಹುರಳಿಕೊಪ್ಪ, ಯಶೋದ ಗುಳೇದ್, ರಮೇಶ್ ಕೂನಬೇವು, ಶಿವು, ಭಾಗ್ಯಲಕ್ಷ್ಮಿ,  ಮಹೇಶ್, ಅಜೀಮ್,  ಹುಲಿಗೆಮ್ಮ, ಕವನ ದೊಡ್ಡಮನಿ, ಗುದ್ದಲೇಷ ಹಳ್ಳಿಕೇರಿ, ರಾಘವೇಂದ್ರ ಗೂಣೆಪ್ಪನವರ್, ಮಂಜುನಾಥ್, ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X