ಹಾವೇರಿ | ಅತಿಥಿ ಉಪನ್ಯಾಸಕರ ಕೊರತೆ: ತಿಂಗಳಾದರೂ ಆರಂಭವಾಗದ ತರಗತಿಗಳು 

Date:

“ರಾಜ್ಯದಲ್ಲಿ ಪದವಿ ಕಾಲೇಜಿನ ತರಗತಿಗಳು ಶುರುವಾಗಿ ತಿಂಗಳಾಗಿದೆ. ಎಲ್ಲ ಕಾಲೇಜಿನಲ್ಲೂ ಉಪನ್ಯಾಸಕರ ಕೊರತೆ ಇದೆ. ಎಲ್ಲಿಯೂ ಅತಿಥಿ ಉಪನ್ಯಾಸಕರ ನೇಮಕಾತಿ ನಡೆದಿಲ್ಲ. ಇದು ವ್ಯಾಸಂಗದ ಮೇಲೆ ಪರಿಣಾಮ ಬೀರಿದೆ” ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

- Advertisement -

ಹಾವೇರಿ ಪಟ್ಟಣದ ನಗರದ ವಾಲ್ಮೀಕಿ ವೃತ್ತದಲ್ಲಿ ಸೇರಿದ್ದ ವಿದ್ಯಾರ್ಥಿಗಳು, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅತಿಥಿ ಉಪನ್ಯಾಸಕರನ್ನೇ ನಂಬಿಕೊಂಡಿದ್ದ ಕಾಲೇಜುಗಳಲ್ಲಿ ಹೆಚ್ಚಿನ ತೊಂದರೆಯಾಗಿದೆ. ಬಡ, ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚಾಗಿ ಪದವಿ ಕಾಲೇಜಿನಲ್ಲಿ ಓದುತ್ತಿದ್ದಾರೆ. ಉಪನ್ಯಾಸಕರು ಇಲ್ಲದಿದ್ದರಿಂದ, ತರಗತಿಗಳು ನಡೆಯುತ್ತಿಲ್ಲ” ಎಂದರು.

“ರಾಜ್ಯ ಸರ್ಕಾರ ತ್ವರಿತವಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬೇಕಿತ್ತು. ಆದರೆ, ಇದುವರೆಗೂ ಪ್ರಕ್ರಿಯೆ ಆರಂಭಿಸಿಲ್ಲ. ಇದು ವಿದ್ಯಾರ್ಥಿ ವಿರೋಧಿ ನಡೆಯಾಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ಸರ್ಕಾರ, ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

“ಉಪನ್ಯಾಸಕರ ಕೊರತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರಿ ಕಾಲೇಜುಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಅನುದಾನ ನೀಡಬೇಕು. ಪ್ರಯೋಗಾಲಯ, ಕಂಪ್ಯೂಟರ್ ಹಾಗೂ ಆಧುನಿಕ ಶಿಕ್ಷಣಕ್ಕೆ ತಕ್ಕಂತೆ ಉಪಕರಣಗಳನ್ನು ಒದಗಿಸಬೇಕು” ಎಂದೂ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...