ಹಾವೇರಿ | ವಿ ವಿ ಉಳಿಸಲು ರಾಜ್ಯದ ರೈತ ಸಂಘಟನೆಗಳು ಬೆಂಬಲಿಸಿ: ಉಡಚಪ್ಪ ಮಾಳಗಿ

Date:

“ಕಳೆದ ಎರಡು ವರ್ಷಗಳ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಜ್ಯ ಸರಕಾರ ಪ್ರಾರಂಭಿಸಿದ ಹಾವೇರಿ ವಿಶ್ವವಿದ್ಯಾಲಯ ಸೇರಿದಂತೆ 9 ವಿ.ವಿ ಗಳನ್ನು ಮುಚ್ಚಲು ರಾಜ್ಯ ಸರಕಾರದ ಸಚಿವ ಸಂಪುಟ ಉಪ ಸಮಿತಿಯು ತೀರ್ಮಾನಕ್ಕೆ ಮುಂದಾಗಿರುವುದು ಆತಂಕವನ್ನುಂಟು ಮಾಡಿದೆ.ರಾಜ್ಯ ಸರಕಾರದ ಈ ನಡೆಯಿಂದಾಗಿ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ. ವಿ ವಿ ಉಳಿಸಲು ರಾಜ್ಯದ ಎಲ್ಲಾ ರೈತ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲಿಸಿ” ಎಂದು ಹಾವೇರಿ ವಿವಿ ರಕ್ಷಣಾ ಹೋರಾಟ ಸಮಿತಿ ಮುಖಂಡ ಉಡಚಪ್ಪ ಮಾಳಗಿ ಹೇಳಿದರು.

- Advertisement -

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚುವ ತೀರ್ಮಾನವನ್ನು ರಾಜ್ಯ ಸರಕಾರ ಹಿಂಪಡೆಯಲು ಹಾಗೂ ಮುಂಬರುವ ಬಜೆಟ್ ನಲ್ಲಿ ವಿ.ವಿ ಗೆ ಅಗತ್ಯ ಅನುದಾನ ಒದಗಿಸುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಲು ರಾಜ್ಯ ರೈತ ಸಂಘಟನೆಗಳು ಬೆಂಬಲ ಸೂಚಿಸಿ ಸರ್ಕಾರಕ್ಕೆ ಒತ್ತಡ ಹೇರುವಂತೆ ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಅಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸರಕಾರ ಮುಚ್ಚಲು ಹೊರಟಿರುವ ಈ ವಿ.ವಿ ಗಳಿಗೆ ಪೂರ್ಣಕಾಲಿಕ ಉಪನ್ಯಾಸಕರು, ಬೋದಕೇತರ ಸಿಬ್ಬಂದಿ ನೇಮಕ.ಗ್ರಾಂಥಾಲಯ, ಪ್ರಯೋಗಾಲಯ, ಹಾಸ್ಟೇಲ್, ಅನುದಾನ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರಕಾರ ಒದಗಿಸಬೇಕಿತ್ತು. ಈ ಸೌಕರ್ಯಗಳನ್ನು ಒದಗಿಸದಿರುವ ಸ್ಥಿತಿಯಲ್ಲಿಯೂ ಹಲವು ಪ್ರಮುಖ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಉನ್ನತ ಶಿಕ್ಷಣ ಪಡೆಯಲು ವಿವಿಧ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಹಾವೇರಿ ವಿ.ವಿ ಯು ಮುನ್ನಡೆಯುತ್ತಿದೆ” ಎಂದರು.

ಹಾವೇರಿ ವಿವಿ ರಕ್ಷಣಾ ಹೋರಾಟ ಸಮಿತಿ ಸಂಚಾಲಕ ಬಸವರಾಜ ಪೂಜಾರ್ ಮಾತನಾಡಿ, “ಸರಕಾರದಿಂದ ಅನುದಾನವಿರದ ಪರಿಸ್ಥಿತಿಯಲ್ಲಿಯೂ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ವಿಶ್ವವಿದ್ಯಾಲಯವನ್ನು ಮುಚ್ಚಲು ರಾಜ್ಯ ಸರಕಾರ ತೀರ್ಮಾನಿಸಿರುವುದು ಯಾವುದೇ ರೀತಿಯಲ್ಲಿ ಒಪ್ಪಲಾಗದು. ಹಾವೇರಿ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿ ವಿ. ವಿ ಯನ್ನು ಉಳಿಸಿ, ಬೆಳೆಸಲು ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದ್ವಿತೀಯ ಪಿಯು ಪರೀಕ್ಷೆ : 794 ವಿದ್ಯಾರ್ಥಿಗಳು ಗೈರು

ಈ ಸಂದರ್ಭದಲ್ಲಿ ರಾಜ್ಯ ಮುಖಂಡರಾದ ಎಂ ಗೋಪಿನಾಥ, ಡಾ.ಎನ್ ಮೂರ್ತಿ, ಅಶೋಕ ಮರೆಣ್ಣನವರ,ಮಹಾದೇವಪ್ಪ ಮಾಳಮ್ಮನವರ, ಹನಮಂತಪ್ಪ ಕಬ್ಬಾರ, ಎಂ ಕೆ ಮಖಬೂಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...