ಹಾವೇರಿ | ಅಂಬೇಡ್ಕರ್ ಹೆಸರಲ್ಲಿ ರಾಜಕೀಯ ಹಗ್ಗಜಗ್ಗಾಟ ಬಿಡಿ: ಬಸವರಾಜ ಎಸ್

Date:

ಪ್ರಸ್ತುತ ದಿನಗಳಲ್ಲಿ ರಾಜಕೀಯ ಜನಪ್ರತಿನಿಧಿಗಳು ಬಾಬಾ ಸಾಹೇಬರು ಶೋಷಿತರಿಗೆ ನೀಡಿದ ಮೀಸಲಾತಿಯ ವಿಚಾರದಲ್ಲಿ ಕಿತ್ತಾಡುತ್ತಿದ್ದಾರೆ ವಿನಾ ಅವರ ಆಶಯಗಳನ್ನು ಸಾಕಾರಗೊಳಿಸುತ್ತಿಲ್ಲ. ಮೀಸಲಾತಿ ಹಗ್ಗಜಗ್ಗಾಟ ಬಿಟ್ಟು, ವಿದ್ಯಾರ್ಥಿ-ಯುವಜನರಿಗೆ ಶಿಕ್ಷಣ ಉದ್ಯೋಗ ಕೊಡಿ ಎಂದು ಎಸ್ಎಫ್ಐ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಹೇಳಿದರು.

- Advertisement -

ನಗರದ ಶಿವಾಜಿ ನಗರದಲ್ಲಿರುವ ಎಸ್ಎಫ್ಐ ಕಚೇರಿಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆಯೋಜಿಸಿದ್ದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಎಲ್ಲಾ ಭಾರತೀಯರು ಬದುಕು ನಡೆಸುವ ಅತ್ಯುತ್ತಮ ಸಂವಿಧಾನ ನೀಡಿದ ಅಂಬೇಡ್ಕರ್ ವಕೀಲರಾಗಿದ್ದರು ಎಂಬುದು ಅತ್ಯಂತ ಹೆಮ್ಮೆಯ ಸಂಗತಿ. ಕಟ್ಟಕಡೆಯ ಜನರಿಗೂ ಸ್ವಾತಂತ್ರ್ಯ, ಶಿಕ್ಷಣ, ಉದ್ಯೋಗ, ಬದುಕುವ ಹಕ್ಕಿನ ಹಿಂದೆ ಬಾಬಾ ಸಾಹೇಬರ ಶ್ರಮವಿದೆ. ಸ್ವಾತಂತ್ರ್ಯ ಸಮಾನತೆ ಮತ್ತು ಸಹೋದರತೆ ತಳಹದಿಯ ಮೇಲೆ ಕಟ್ಟಲ್ಪಟ್ಟ ಒಂದು ಸಮಾಜವೇ ನನ್ನ ಆದರ್ಶ ಸಮಾಜ ಎಂದ ಬಾಬಾ ಸಾಹೇಬರ ಮಾತನ್ನು ಸಾಕಾರಗೊಳಿಸುವ ಕೆಲಸವಾಗಬೇಕಿದೆ” ಎಂದರು.

“ಶಿಕ್ಷಣದ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ದುಡಿದರು ಮತ್ತು ಸಮಾಜದ ಎಲ್ಲ ಜನರಿಗೆ ಸಮಾನತೆಯನ್ನು ಖಾತ್ರಿಪಡಿಸಿಕೊಳ್ಳಲು ಜಾತಿ ಅಡೆತಡೆಗಳನ್ನು ಕೆಡವಲು ಶ್ರಮಿಸಿದವರು. ಸಮಾಜದ ಎಲ್ಲಾ ಸಮುದಾಯದ ಜನರಿಗೆ ಶಿಕ್ಷಣವನ್ನು ತಲುಪುವಂತೆ ಮಾಡಲು ಮತ್ತು ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒತ್ತು ನೀಡಿದವರು. ಇಂದಿನ ಸಮಾಜದಲ್ಲಿ ಜಾತಿ ಎಂಬ ಪಿಡುಗನ್ನು ಕೈ ಬಿಡದ ಹೊರತು ಸಮಾಜದ ಸುಧಾರಣೆ ಅಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಹಾವೇರಿ | ಮಹಾವೀರರ ಬದುಕು ಮತ್ತು ಬೋಧನೆಗಳು ಸರ್ವಕಾಲಕ್ಕೂ ಆದರಣೀಯ

ಕಾರ್ಯಕ್ರಮದಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ದುರುಗಪ್ಪ ಯಮ್ಮಿಯವ, ಜಿಲ್ಲಾ ಸಹ ಕಾರ್ಯದರ್ಶಿ ಕೃಷ್ಣ ನಾಯಕ, ಎಂಜಿನಿಯರಿಂಗ್ ಕಾಲೇಜ್ ಘಟಕ ಅಧ್ಯಕ್ಷ ರೇವಣಸಿದ್ದು ವಿ, ಹಾಸ್ಟೆಲ್ ಘಟಕ ಅಧ್ಯಕ್ಷ ದಯಾನಂದ, ಬಾಲ ಸಂಘಂನ ಧನುಷ್ ದೊಡ್ಡಮನಿ, ತೇಜಸ್ ಎನ್ ಡಿ, ಆಧ್ಯಾ ಎನ್ ಆರ್, ಮೈನು ಎಲಿಬುಡ್ಡಿ, ಅಭಿ ಬಂಡಿವಡ್ಡರ, ಅನುಪಮ ಬಿ, ಮುಖಂಡರಾದ ಸುನೀಲ್ ಕುಮಾರ್ ಎಲ್, ವಸಂತ ವಿ, ಸುನಿಲ್ ಲಮಾಣಿ, ಕೃಷ್ಣ ಕೆ, ಮಂಜು ಹೆಚ್, ಜಯೇಶ್, ವಿಜಯ ಲಮಾಣಿ, ಆನಂದ ಎಲ್, ಗದಿಗೇಪ್ಪ ಹರಿಜನ,ಕಾರ್ತಿಕ ಕಮ್ಮಾರ, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...