ಹಾವೇರಿ | ವಿಚಿತ್ರ ಘಟನೆ; ಬಾಲಕನ ಮುಖದ ಮೇಲಿನ ಗಾಯಕ್ಕೆ ಹೊಲಿಗೆ ಬದಲು ‘ಫೆವಿಕ್ವಿಕ್’ ಹಾಕಿದ ನರ್ಸ್!

Date:

ಹಾವೇರಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 7 ವರ್ಷದ ಬಾಲಕನ ಕೆನ್ನೆಯ ಮೇಲಾಗಿದ್ದ ಗಾಯಕ್ಕೆ ನರ್ಸ್‌ ಒಬ್ಬರು ‘ಫೆವಿಕ್ವಿಕ್‌’ ಗಮ್ ಹಚ್ಚಿ ಚಿಕಿತ್ಸೆ ನೀಡಿರುವ ಘಟನೆ ನಡೆದಿದೆ.

- Advertisement -

‘ಸ್ಟಿಚ್ ಹಾಕಿದರೆ ಕಲೆ ಉಳಿಯುತ್ತದೆ’ ಎನ್ನುವ ಕಾರಣಕ್ಕೆ ನರ್ಸ್ ಈ ರೀತಿ ನಡೆದುಕೊಂಡಿರುವುದಾಗಿ ವರದಿಯಾಗಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೋಷಕರು ನರ್ಸ್‌ ವಿರುದ್ಧ ಹಿರಿಯ ಆರೋಗ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅಷ್ಟಕ್ಕೂ ಆಗಿದ್ದೇನು?

ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ. ಕಳೆದ ಜನವರಿ 14ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

7 ವರ್ಷದ ಗುರುಕಿಶನ್ ಅಣ್ಣಪ್ಪ ಹೊಸಮನಿ ಎಂಬ ಬಾಲಕನಿಗೆ ಕೆನ್ನೆ ಮೇಲೆ ಗಾಯ ಆಗಿತ್ತು. ಆಟ ಆಡುವಾಗ ಗುರುಕಿಶನ್‌ ಕೆನ್ನೆಗೆ ಗಾಯ ಮಾಡಿಕೊಂಡಿದ್ದ. ಕೆನ್ನೆಯ ಮೇಲಿನ ಗಾಯ ಬಹಳ ಆಳಕ್ಕೆ ಇಳಿದಿದ್ದರಿಂದ ರಕ್ತ ಕೂಡ ಸುರಿಯುತ್ತಿತ್ತು. ಕೂಡಲೇ ಬಾಲಕ ಗುರುಕಿಶನ್ ನನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕುಟುಂಬಸ್ಥರು ಕರೆದೊಯ್ದಿದ್ದರು. ವಿದ್ಯಾರ್ಥಿಗೆ ಗಾಯಕ್ಕೆ ಹೊಲಿಗೆ ಹಾಕೋದು ಬಿಟ್ಟು ಫೆವಿಕ್ವಿಕ್ ಗಮ್ ಅಂಟಿಸಿ ನರ್ಸ್‌ ಜ್ಯೋತಿ ಎನ್ನುವವರು ಚಿಕಿತ್ಸೆ ನೀಡಿದ್ದರು.

WhatsApp Image 2025 02 05 at 12.29.04 PM

ಇತ್ತ ಬಾಲಕನಿಗೆ ಫೆವಿಕ್ವಿಕ್ ಯಾಕೆ ಹಾಕಿದ್ದೀರಿ ಅಂತ ಕೇಳಿದರೆ ಸ್ಟಿಚ್ ಹಾಕಿದರೆ ಬಾಲಕನ ಕೆನ್ನೆ ಮೇಲೆ ಕಲೆ ಆಗ್ತಾ ಇತ್ತು ಎಂದು ಹೇಳಿದ್ದಾರೆ. ಹೀಗಾಗಿ ಚರ್ಮದ ಮೇಲಷ್ಟೇ ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ್ದೇನೆ ಎಂದು ನರ್ಸ್‌ ಜ್ಯೋತಿ ಹೇಳಿದ್ದಾರೆ.

ಸಮಜಾಯಿಷಿ ನೀಡಿದ ನರ್ಸ್‌!

“ನನಗೆ ತಿಳಿದ ಮಟ್ಟಿಗೆ ನಾನು ಚಿಕಿತ್ಸೆ ಮಾಡಿದ್ದೇನೆ. ನೀವು ಫೆವಿಕ್ವಿಕ್ ಹಚ್ಚಬೇಡಿ ನಾವು ಮುಂದೆ ಹೋಗುತ್ತೇವೆ ಅಂದಿದ್ದರೆ ಬೇರೆ ಕಡೆಗೆ ರೆಫರ್ ಮಾಡುತ್ತಿದ್ದೆವು” ನರ್ಸ್‌ ಸಮಜಾಯಿಷಿ ನೀಡಿದ್ದಾರೆ.

ನರ್ಸ್‌ ಜ್ಯೋತಿ ನೀಡಿರುವ ವಿಡಿಯೋ ಹೇಳಿಕೆಯನ್ನು ಮೊಬೈಲ್‌ನಲ್ಲಿ ಬಾಲಕನ ಪೋಷಕರು ಚಿತ್ರೀಕರಿಸಿದ್ದಾರೆ. ಈ ಬಗ್ಗೆ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಬಾಲಕನ ಪೋಷಕರು ದೂರು ನೀಡಿದ್ದಾರೆ.

ಈ ಬಗ್ಗೆ ವರದಿ ಪಡೆದು ಕ್ರಮ ಜರುಗಿಸಲು ಡಿ.ಹೆಚ್ ಒ ರಾಜೇಶ್ ಸುರಗಿಹಳ್ಳಿ ಮುಂದಾಗಿದ್ದು, ಹಾವೇರಿ ತಾಲೂಕು ಗುತ್ತಲ ಆರೋಗ್ಯ ಸಂಸ್ಥೆಗೆ ನಿಯೋಜನೆ ಮಾಡಲು ಡಿ‌ಹೆಚ್‌ಒ ಆದೇಶಿಸಿದ್ದಾರೆ. ಬಾಲಕನ ಪೋಷಕರು ದೂರು ನೀಡಿದ್ದರೂ ಕೂಡ ನರ್ಸ್ ಅನ್ನು ಅಮಾನತು ಮಾಡದೇ ಬೇರೆಡೆಗೆ ವರ್ಗಾವಣೆ ಮಾಡಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಭವಿಷ್ಯದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಮಾತ್ರ ಅನುಮತಿಸಿ: ಸಾರಿಗೆ ಸಚಿವರಿಗೆ ಆರೋಗ್ಯ ಸಚಿವ ಗುಂಡೂರಾವ್ ಪತ್ರ

ಈ ಬಗ್ಗೆ ಮಾಹಿತಿ ನೀಡಿರುವ ಪೋಷಕರು, “ಕಳೆದ ಜನವರಿ 14 ರಂದು ನಡೆದ ಘಟನೆ ಇದು. ಮಗ ಗುರುಕಿಶನ್ ಆಟ ಆಡುವಾಗ ಗುರುಕಿಶನ್‌ ಕೆನ್ನೆಗೆ ಗಾಯ ಮಾಡಿಕೊಂಡಿದ್ದ. ಮುಖದ ಮೇಲೆ ಮೂರು ಹೊಲಿಗೆ ಹಾಕುವಷ್ಟು ಗಾಯವಾಗಿತ್ತು. ಕೂಡಲೆ ಆತನನ್ನು ಹಾನಗಲ್‌ನ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದೆವು. ಇದಾದ ಬಳಿಕ ನರ್ಸ್ ಬಾಲಕನ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಗಮ್ ಹಾಕಿ ಬ್ಯಾಂಡೇಜ್ ಅಂಟಿಸಿದ್ದಾರೆ. ಅವರು ಅಂಟಿಸಿದ ಬಳಿಕವಷ್ಟೇ ನಮಗೆ ಗೊತ್ತಾಯಿತು. ಈ ಬಗ್ಗೆ ಮೇಲಧಿಕಾರಿಗಳಿಗೆ ದೂರು ಕೊಟ್ಟರೂ ಸರಿಯಾದ ಕ್ರಮ ಜರುಗಿಸಿಲ್ಲ. ಮಗನ ಮುಖದ ಗಾಯಕ್ಕೆ ಹಾಕಿರುವ ಫೆವಿಕ್ವಿಕ್‌ನಿಂದ ಏನಾದರೂ ಸೆಪ್ಟಿಕ್ ಆಗಿ, ಗಾಯ ಉಲ್ಬಣಗೊಂಡರೆ ಯಾರು ಹೊಣೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಇಲಾಖೆಯ ಅಧಿಕಾರಿಗಳು ಇಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಪೋಷಕರು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...