ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಅಭಿಯಾನ ಆರಂಭಿಸಲಾಗಿದೆ. ಹೋರಾಟವನ್ನು ಚುರುಕುಗೊಳಿಸಲು ಮತ್ತಷ್ಟು ‘ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ’ ರಚಿಸಲಾಗಿದೆ.
ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲ ನಗರದ ಶುಕ್ರವಾರ ಹಮ್ಮಿಕೊಂಡಿದ್ದ ಹೋರಾಟದ ಚರ್ಚಾ ಸಭೆಯಲ್ಲಿ ಜಿಲ್ಲೆಯ ಹಲವು ಸಂಘಟನೆಗಳ ಮುಖಂಡರು ಪಾಲ್ಗೊಂಡರು. ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಿದರು.
ಜಿಲ್ಲೆಗೆ ಹಾವೇರಿ ವಿಶ್ವವಿದ್ಯಾಲಯ ಬೇಕು. ಇದನ್ನು ಮುಚ್ಚಲು ಬಿಡುವುದಿಲ್ಲ. ಮುಚ್ಚುವ ನಿರ್ಧಾರವನ್ನು ಖಂಡಿಸಿ ಹಾವೇರಿ ಜಿಲ್ಲೆಯ ಆರು ಶಾಸಕರಿಗೆ ಸಾಧ್ಯದಲ್ಲಿಯೇ ಮನವಿ ಸಲ್ಲಿಸಲಾಗುವುದು. ಹಾವೇರಿ ವಿವಿ ಉಳಿಸಲು ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಒತ್ತಾಯಿಸಲಾಗುವುದು’ ಎಂದು ಸಮಿತಿ ಸದಸ್ಯರು ಹೇಳಿದರು.
ಈ ಬಾರಿಯ ಬಜೆಟ್‌ನಲ್ಲಿ ವಿಶ್ವವಿದ್ಯಾಲಯಕ್ಕೆ ನೀಡಬೇಕು ಅನುದಾನ ಎಂದೂ ಆಗ್ರಹಿಸಲಾಗುವುದು. ಸಂಸದ, ವಿಧಾನಪರಿಷತ್ ಸದಸ್ಯರು, ಸ್ಥಳೀಯ ಆಡಳಿತ ಸಂಸ್ಥೆಗಳ ಅಧ್ಯಕ್ಷೆರಿಗೂ ಮನವಿ ಸಲ್ಲಿಸಲಾಗುವುದು’ ಎಂದರು.
‘ಮನವಿ ಸಲ್ಲಿಕೆ ಬಳಿಕ, ಶಾಸಕರ ಅಭಿಪ್ರಾಯ ಪಡೆಯಲಾಗುವುದು. ನಂತರವೇ, ಹೋರಾಟವನ್ನು ಮತ್ತಷ್ಟು ಗಂಭೀರಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮೂರು ದಿನಗಳ ಕಾಲ ರನ್ನ ವೈಭವಕ್ಕೆ ಸಕಲ ಸಿದ್ಧತೆ
ಸಭೆಯಲ್ಲಿ ಬಸವರಾಜ್ ಪೂಜಾರ್, ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ, ಏಳುಕೋಟೆಪ್ಪ ಪಾಟೀಲ್, ಪರಿಮಳ ಜೈನ್, ಉಡಚಪ್ಪ ಮಳಗಿ, ಮಲ್ಲಿಕಾರ್ಜುನ ಬಳ್ಳಾರಿ, ಬಸವರಾಜ್ ಎಸ್ ಇನ್ನೂ ಅನೇಕರು ಪ್ರಗತಿಪರರು ಉಪಸ್ಥಿತರಿದ್ದರು.
