“ಕನ್ನಡ ಶಾಲೆಗಳು ಆರಂಭಗೊಂಡಿದ್ದು ವಿದ್ಯಾರ್ಥಿಗಳು ಶಾಲೆಗಳಿಗೆ ಅತ್ಯಂತ ಉತ್ಸಾಹ, ಖುಷಿಯಿಂದ ಶಾಲೆಗೆ ಬಂದಿದ್ದಾರೆ” ಎಂದು ಶಿಕ್ಷಕ ಮೌನೇಶ ಕರೆಮ್ಮನವರ ಹೇಳಿದರು.
ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಪಟ್ಟಣದ ಚಿದಂಬರ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪ್ರಾರಂಭವಾಗಿದ್ದರಿಂದ ಶಿಕ್ಷಕರರು ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಸ್ವಾಗತಿಸಿದರು.
“ಶಾಲೆಯು ಸನ್ 2007ರಲ್ಲಿ ಪ್ರಾರಂಭಗೊಂಡು ಈವರೆಗೆ ತಾಲೂಕಿನಲ್ಲಿ ಅತಿ ಹೆಚ್ಚು ಮಕ್ಕಳ ಸಂಖ್ಯೆಯನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಂಟು ಸುಸಜ್ಜಿತ ತರಗತಿ ಕಟ್ಟಡಗಳು, ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಗ್ರಂಥಾಲಯ, ಸಭಾಭವನ ವಾಹನಗಳ ಕಿರಿಕಿರಿ ಇಲ್ಲದ ಶಾಂತವಾದ ಶಾಂತಿನಗರದಲ್ಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಎಲ್ಲ ಶಿಕ್ಷಕರು ಗುಣಮಟ್ಟದ ಶಿಕ್ಷಣ ವನ್ನು ಕೊಡುತ್ತಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ” ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.
