ಹಾವೇರಿ | ಹೆಚ್ಚುವರಿ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ

Date:

 “ಸಮ್ಮಸಗಿ ಗ್ರಾಮದ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಸ್ಸುಗಳು ನಿಲುಗಡೆ ಮಾಡಬೇಕು ಹಾಗೂ ಹೆಚ್ಚುವರಿ ಬಸ್ಸುಗಳನ್ನು ಬಿಡಬೇಕು” ಎಂದು ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಸಮ್ಮಸಗಿ ಗ್ರಾಮದ ವಿದ್ಯಾರ್ಥಿಗಳು ಸೋಮವಾರ ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.

- Advertisement -

ಈ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಾತನಾಡಿ, “ಹಾನಗಲ್ ತಾಲೂಕಿನ ಸಮ್ಮಸಗಿ ಗ್ರಾಮದ ಮೂಲಕವೇ ನಿತ್ಯ ಸಾಕಷ್ಟು ಬಸ್ಸುಗಳು ಹಾವೇರಿ ಮತ್ತು ಹಾನಗಲ್ಲಿನಿಂದ ಸಂಚರಿಸುತ್ತಿವೆ. ಸುತ್ತಲಿನ ಹಳ್ಳಿಗಳ ಮಕ್ಕಳು ಇದೆ ಬಸ್ಸ ನಿಲ್ದಾಣದಲ್ಲಿ ನಿಂತಿದ್ದರೂ ಬಸ್ಸನ್ನು ನಿಲ್ಲಿಸುವುದಿಲ್ಲ. ದಿನನಿತ್ಯ ಶಾಲಾ-ಕಾಲೆಜಿಗೆಂದು ೨೫೦ಕ್ಕೂ ಹೆಚ್ಚು ಮಕ್ಕಳು, ಮತ್ತು ಇತರ ಕೆಲಸ-ಕಾರ್ಯಗಳಿಗೆ ನೂರಾರು ಜನರು ಓಡಾಡುತ್ತಾರೆ. ಶಾಲೆಗೆ ಮೂರನೇ ಕ್ಲಾಸ್ ಮುಗಿದ ಮೇಲೆ ಹೋಗುತ್ತಿದ್ದೇವು. ಪ್ರತಿದಿನ ಶಾಲೆಯಲ್ಲಿ ಬಸ್ಸಿನ ಕಾರಣವನ್ನೇ ಹೇಳುತ್ತಾ ಬಂದಿದ್ದೆವೆ. ಶಾಲೆಯಿಂದ ಹಿಂತಿರುಗುವ ಸಂದರ್ಭದಲ್ಲಿ ರಾತ್ರಿ ೮ ಘಂಟೆಗೆ ಮನೆಗೆ ತಲುಪುತ್ತೇವೆ. ಇದರಿಂದಾಗಿ ಪಾಲಕರು ಶಾಲೆ ಬಿಡಿಸುವ ಸಂಭವ ಕೂಡ ಒದಗುತ್ತದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ವಿದ್ಯಾರ್ಥಿಗಳಿಗೆ ಅನೂಕೂಲವಾಗುವ ವೇಳೆಗೆ ಬಸ್ ಬಿಡಬೇಕು. ಬಸ್ಸಲ್ಲಿ ಸಾಕಷ್ಟು ಸ್ಥಳಾವಕಾಶ ಇದ್ದಾಗಲೂ ಬಸ್ ನಿಲ್ಲಿಸದೇ ಹಾಗೇ ಓಡಾಡುತ್ತಿದ್ದು ೨ ಬಾರಿ ಶಿರಸಿ ಡಿಪೋಗೆ  ಮೂಖಿಕವಾಗಿ ದೂರು ಕೊಟ್ಟಿದ್ದಲ್ಲದೇ  ಮನವಿಯನ್ನು ಕೂಡಾ ಮಾಡಿಕೊಂಡಿದ್ದೆವೆ. ಆದರೂ ನಮ್ಮ ಮನವಿಗೆ ಪ್ರತಿಕ್ರಿಯೆ ಸಿಕ್ಕಿಲ್ಲ.  ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಒದಗಿಸದಿದ್ದಲ್ಲಿ ಉಗ್ರ ಹೋರಾಟವನ್ನು ಮಾಡುತ್ತೇವೆ” ಎಂದು ಈ ಮೂಲಕ ಪಾಲಕರು ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಇಸ್ರೋ ವಿಜ್ಞಾನಿ ಡಾ. ರಾಮನಗೌಡ ವಿ ನಾಡಗೌಡ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಈ ವೇಳೆ ಪಾಲಕರು, ವಿದ್ಯಾರ್ಥಿಗಳು, ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...