ಹಾವೇರಿ | ದೌರ್ಜನ್ಯ ತಡೆಗೆ ಕ್ರಮ ವಹಿಸಿ ಬದಲಾವಣೆ ತನ್ನಿ: ಜಿಲ್ಲಾಧಿಕಾರಿ ಸೂಚನೆ

Date:

“ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಗ್ರಾಮ ಪಂಚಾಯತಿವಾರು ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.

- Advertisement -

ಹಾವೇರಿ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧ ವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಮೀಸಲಾದ ಅನುದಾನವನ್ನು ಆ ಸಮುದಾಯದ ಅಭಿವೃದ್ಧಿಗೆ ವೆಚ್ಚಮಾಡಬೇಕು” ಎಂದರು.

“ಅಧಿಕಾರಿಗಳು ಸಮಾಜದ ಪರವಾಗಿ ಕಾಳಜಿ ಯಿಂದ ಕೆಲಸ ಮಾಡುತ್ತಾರೆ, ಸಮಾಜದ ಅಭಿವೃದ್ಧಿ ಕೆಲಸಗಳಲ್ಲಿ ಅಡಚಣೆಯಾದ ಸಂದರ್ಭದಲ್ಲಿ, ಸಮಾಜದ ಮುಖಂಡರು ಕಾಮಗಾರಿಗಳ ಅನು ಜ್ಞಾನಕ್ಕೆ ಸಹಕಾರ ನೀಡಬೇಕು. ಸಮಾಜದಲ್ಲಿ ಬದಲಾವಣೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ” ಎಂದರು.

“ಈಗಾಗಲೇ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಾಲೋನಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಒಂದು ವೇಳೆ ಅಭಿವೃದ್ಧಿಯಾಗದ ಕಾಲೋನಿಗಳ ಬಗ್ಗೆ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಗಮನಕ್ಕೆ ತರಬಹುದು” ಎಂದರು.

“ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ, ಇಲಾಖಾವಾರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಹಂಚಿಕೆಯಾಗುವ ಅನುದಾನದ ಮಾಹಿತಿ ನೀಡುವಂತೆ, ಎಸ್.ಸಿ.ಎಸ್.ಪಿ. ಹಾಗೂ ಟಿ. ಎಸ್.ಪಿ. ಯೋಜನೆಗೆ ಮೀಸಲಾದ ಅನುದಾನ ಆಯಾ ಸಾಲಿನಲ್ಲೇ ವೆಚ್ಚವಾಗಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ತಲುಪಬೇಕು” ಎಂದು ಹೇಳಿದರು.

“ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ವೇತನ ಪಾವತಿಯಾಗಬೇಕು. ಯಾವ ಯಾವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಬೇಕು” ಎಂದು ತಿಳಿಸಿದರು.

“ಗುತ್ತಲದಲ್ಲಿ ನೂತನ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡುವಂತೆ, ಬಾಳಂಬೀಡ ಗ್ರಾಮದಲ್ಲಿ ಎಸ್ಪಿ ಎಸ್.ಟಿ.ಕಾಲೋನಿಯಲ್ಲಿ ಪಕ್ಕಾ ಗಟಾರ್ ನಿರ್ಮಾಣ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ, ಬರಡಿ-ಮರಡೂರ ಗ್ರಾಮದಲ್ಲಿ ಸ್ಮಶಾನಕ್ಕೆ ಜಮೀನು ಹಾಗೂ ಸ್ಮಶಾನಕ್ಕೆ ಹೋಗಲು ರಸ್ತೆ” ಕುರಿತು ಚರ್ಚೆ ನಡೆಸಲಾಯಿತು.

“ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಸುತ್ತಿರುವ ಪೌರ ಕಾರ್ಮಿಕರ ವೇತನ ಪಾವತಿಗೆ ಮೊದಲ ಆದ್ಯತೆ ನೀಡಬೇಕು. ಜೊತೆಗೆ ಕರ ವಸೂಲಿಗೆ ಹೆಚ್ಚಿನ ಗಮನಹರಿಸಬೇಕು. ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ಸ್ಮಶಾನದ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ಸ್ಮಶಾನಕ್ಕೆ ಹೋಗಲು ದಾರಿ ಸಮಸ್ಯೆ ಇರುವ ಬಗ್ಗೆ ಮಾಹಿತಿ ಪಡೆದುಕೊಂಡು ಕೂಡಲೇ ಜಮೀನು ಗುರುತಿಸಬೇಕು. ಸಭೆಯ ಗಮನಕ್ಕೆ ತರಲಾದ ಎಲ್ಲ ಸಮಸ್ಯೆಗಳನ್ನು ಆದ್ಯತೆ ಮೇರಗೆ ಬಗೆಹರಿಸಿ” ಎಂದು ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.

“ವಿವಿಧ ಬ್ಯಾಂಕ್ ಗಳಲ್ಲಿ ಗ್ಯಾರಂಟಿ ಯೋಜನೆ ಹಣ, ನರೇಗಾ ಕೂಲಿ ಹಣ, ಬೆಳೆ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿದ್ದು, ಸರ್ಕಾರದ ಯೋಜನೆಗಳ ಹಣವನ್ನು ಸಾಲಕ್ಕೆ ಜಮೆ ಮಾಡದಂತೆ ಬ್ಯಾಂಕ್ ಗಳಿಗೆ ನಿರ್ದೇಶನ ನೀಡುವಂತೆ ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ ಅವರು ಮಾತನಾಡಿದರು.

ಸಭೆಯಲ್ಲಿ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರು ಶಿವರಾಜ ಹರಿಜನ, ಬಸವರಾಜ ಹೆಡಿಡ್ಕೊಂಡ, ಸಂಜಯಗಾಂಧಿ, ಜಗದೀಶ ಹರಿಜನ. ಎನ್.ಎನ್. ಗಾಳೆಮ್ಮ ನವರ, ರಮೇಶ ಕೊರವರ, ಅಜ್ಜಪ್ಪ ಗೋಣೆಮ್ಮ ನವರ, ಯಲ್ಲಪ್ಪ ದೇವಗಿರಿ, ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಕೃಷಿ ಜಂಟಿ ನಿರ್ದೇಶಕ ಡಾ.ಮಲ್ಲಿಕಾರ್ಜುನ, ತೋಟಗಾರಿಕೆ ಜಂಟಿ ನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಜಿಲ್ಲಾ ಸರ್ಕಾರಿ ಅಭಿಯೋಜಕ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರಗಳು, ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಇತರರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...