ಹಾವೇರಿ | ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿ: ಉಡಚಪ್ಪ ಮಾಳಗಿ

Date:

“ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಶೀಘ್ರವಾಗಿ ಈಡೇರಿಕೆಗೆ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮುಂದಾಗಬೇಕು” ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಒತ್ತಾಯಿಸಿದರು.

- Advertisement -

ಹಾವೇರಿ ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರೊಂದಿಗೆ ಸಭೆ ಹಾಗೂ ಸಮಾಲೋಚನೆ ನಡೆಸಿ, ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಯಲ್ಲಿ ಶಕ್ತಿ ಯೋಜನೆಯೂ ಒಂದಾಗಿದ್ದು, ಸಾರಿಗೆ ನೌಕರರ ಶ್ರಮದಿಂದ ಈ ಯೋಜನೆ ಯಶಸ್ವಿಯಾಗಲು ಸಹಕಾರಿಯಾಗುತ್ತಿದೆ. ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಒತ್ತಾಯಿಸಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮಕೈಗೊಳ್ಳಬೇಕು” ಎಂದರು.

“ಮೇ-20 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಕರೆ ನೀಡಿದ್ದು, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ) ಬೆಂಬಲಿಸಲಿದೆ. ಸಾರಿಗೆ ನೌಕರರ ಪರವಾಗಿ ನಾವು ಸದಾ ಇರಲಿದ್ದೇವೆ.ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ “ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸದಸ್ಯರು ಎಂ ಎಸ್ ಪವಾರ, ಎಸ್.ಎಸ್ ಸೋಮನಾಲ, ಎಂ.ಬಿ ಅಂಗಡಿ, ಎಎಲ.ಎಸ್ ಅಂಗಡಿ, ಸಿ.ಬಿ ಗೌಡರ, ಎನ್.ಎಸ್ ತಾಂಬೇಕರ, ಜಿ.ಆರ್ ಸಾಹುಕಾರ, ಎ ವ್ಹಿ ಇಟಗಿ, ಜೆಟ್ಟಿ ರಾಜಶೇಖರ, ಐ.ಎಮ್ ಬಡಿಗೇರ, ಜಿ ಬಿ ಇಟಗಿ, ವಿ.ಕೆ ಕಮ್ಮಾರ, ಪಿ.ಹೆಚ್ ದೊಡ್ಡಮನಿ, ಕೆ.ಪಿ ಕೋರವರ, ಎಂ ಜೆ ಹಿರೇಮಠ, ಜಡ್.ಐ ಕರ್ಜಗಿ, ಲಿಂಗರಾಜ ನಾಯ್ಕ, ಉಮೆದುಲ್ಲಾ, ಎಸ್.ಎಂ ಹಿರೇಮಠ, ಎಂ.ಎ ಪಟವೇಗಾರ, ಎಸ್ ಎಂ ದೇವಣ್ಣನವರ, ಆರ್.ಎಂ ನದಾಫ, ಆರ್.ಎಂ ಕೆಳಗಡೆ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...