ಹಾವೇರಿ | ಒಳಮೀಸಲಾತಿ ಜಾರಿಗೊಳಿಸದೇ ಸರ್ಕಾರದ ಕಾಲಹರಣ ಖಂಡನೀಯ

Date:

ಸುಪ್ರೀಂ ಕೋರ್ಟ್‌ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೇ ಕಾಲಾಹರಣ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿದ್ದು, ಬೆಳಗಾವಿಯಲ್ಲಿ ಜರುಗುವ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ಧ್ವನಿ ಎತ್ತಬೇಕು ಎಂದು ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

- Advertisement -

ಹಾವೇರಿ ಪಟ್ಟಣದ ವಿಧಾನಸಭಾ ಉಪಸಭಾಧ್ಯಕ್ಷ ಹಾಗೂ ಸ್ಥಳೀಯ ಶಾಸಕ ರುದ್ರಪ್ಪ ಲಮಾಣಿಯವರ ಕಚೇರಿ ಮುಂದೆ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದಿಂದ ತಮಟೆ ಚಳವಳಿ ಮಾಡುವ ಮೂಲಕ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜ್ಯ ಸಂಘಟನಾ ಸಂಚಾಲಕ ಉಡಚಪ್ಪ ಮಾಳಗಿ ಮಾತನಾಡಿ, “ಆಗಸ್ಟ್ 1ರಂದು ಸುಪ್ರೀಂ ಕೋರ್ಟಿನ ಸಂವಿಧಾನ ಪೀಠವು, ಒಳಮೀಸಲಾತಿ ಜಾರಿಮಾಡುವ ಅಧಿಕಾರವನ್ನು ರಾಜ್ಯಗಳಿಗೇ ಕೊಡುವ ಮೂಲಕ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕ ಸರ್ಕಾರ ಅಮೆಗತಿಯಲ್ಲಿ ಸಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕಾಟಾಚಾರಕ್ಕೆ ನ್ಯಾ ನಾಗಮೋಹನ್ ದಾಸ್ ಆಯೋಗ ರಚಿಸಿದ್ದನ್ನು ಬಿಟ್ಟರೆ ಈವರೆಗೆ ಬೇರೆ ಏನನ್ನೂ ಮಾಡಿಲ್ಲ. ʼಎರಡು ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆ’ ಎಂದು ಸರ್ಕಾರ ಹೇಳಿತ್ತು. ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ. ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವುಕೊಡದೆ ಕಾಲಾಹರಣ ನೆಡೆಸಲಾಗುತ್ತಿದೆ. ಆಯೋಗ ರಚಿಸಬೇಕು ಎನ್ನುವುದು ಮಾದಿಗ ಸಮಾಜದ ಯಾರೊಬ್ಬರ ಬೇಡಿಕೆಯೂ ಆಗಿರಲಿಲ್ಲ. ಸರ್ಕಾರದ ಮುಂದೆ ನ್ಯಾ. ಸದಾಶಿವ ಆಯೋಗ, ಮಾಧುಸ್ವಾಮಿ ಸಮಿತಿ ವರದಿ ಇದೆ. ಮಾಧುಸ್ವಾಮಿಯವರ ಸಮಿತಿ ಏಕೆ? ಎಂದು ಪ್ರಶ್ನಿಸಿದರು.

“2011ರ ಜನಗಣತಿಯ ಅಂಕಿ ಅಂಶಗಳ ಆಧಾರದಲ್ಲಿ ವರ್ಗೀಕರಣ ಮಾಡಿದೆ. ಈಗ ಮತ್ತೆ ನಾಗಮೋಹನ್ ದಾಸ್ ಆಯೋಗಕ್ಕೆ ಅದೇ ಕೆಲಸ ಕೊಡಲಾಗಿದೆ. ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ಇವರಿಗೆ ಅವಕಾಶ ವಂಚಿತ ದಲಿತ ಸಮುದಾಯಗಳಿಗೆ ಒಳಮೀಸಲಾತಿ ಕೊಡುವ ಮನಸ್ಸಿಲ್ಲವೆಂಬುದು ಸ್ಪಷ್ಟವಾಗುತ್ತದೆ. ಒಳಮೀಸಲಾತಿ ಜಾರಿಯಾಗುವವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲವೆಂದು ಭರವಸೆ ಕೊಟ್ಟಿತ್ತು. ಆದರೆ ಈ ಭರವಸೆ ಜಾರಿಯಾಗಿಲ್ಲ. ವಿವಿಧ ಇಲಾಖೆಯಿಂದ ನೇಮಕಾತಿಯ ಘೋಷಣೆಗಳು ಬರುತ್ತಲೇ ಇವೆ” ಎಂದು ಉಡಚಪ್ಪ ಮಾಳಗಿ ಖಂಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ ಮಾತನಾಡಿ, “ಹರಿಯಾಣದ ಬಿಜೆಪಿ ಸರ್ಕಾರ ಸುಪ್ರೀಂ‌ ಕೋರ್ಟಿನ ತೀರ್ಪು ಬಂದ ಮೊದಲ ವಾರದಲ್ಲೇ ಒಳಮೀಸಲಾತಿಯನ್ನು ಜಾರಿಮಾಡಿದೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬ‌ದ್ಧತೆ ತೋರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಧಿಕಾರಕ್ಕೆ ಬಂದ ಮೊದಲ ವಾರದಲ್ಲೇ ಒಳಮೀಸಲಾತಿ ಜಾರಿ ಮಾಡುತ್ತೇವೆಂದು ಹಸಿಸುಳ್ಳು ಹೇಳಿದ ಕಾಂಗ್ರೆಸ್ ನಾಯಕರು ಮಾದಿಗ ಜನತೆಯ ವಿಶ್ವಾಸ ಕಳೆದುಕೊಂಡಿದ್ದಾರೆ. ಹಾಗಾಗಿ ಮಾದಿಗ ಮತ್ತು ಉಪಜಾತಿಗಳ ಈ ಹೋರಾಟಕ್ಕೆ ಸಹಕಾರ ಕೊಡಬೇಕು” ಎಂದು ಶಾಸಕ ರುದ್ರಪ್ಪ ಲಮಾಣಿಯವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ಎಂ ಆಂಜನೇಯ, ಮಂಜಪ್ಪ ಮರೋಳ, ಕಿಟ್ಟಪ್ಪ ಕರ್ಜಗಿ, ಬಸಣ್ಣ ಮುಗಳಿ, ಅಶೋಕ ಮರೆಣ್ಣನವರ, ನೀಲಮ್ಮ ಪೂಜಾರ, ಹನಮಂತಪ್ಪ ಸಿ ಡಿ, ಮಹೇಶಪ್ಪ ಹರಿಜನ, ಶಿವು ಮುದಿಮಲ್ಲಣ್ಣನವರ, ಚಂದ್ರಪ್ಪ ದಾಸನಕೇರಿ, ಶಂಭುಲಿಂಗಪ್ಪ ದೀವಟರ, ರಘು ಮಾಳಗಿ, ಮಹಾಂತೇಶಪ್ಪ ಚಿನ್ನಿಕಟ್ಟಿ, ಮುತ್ತಪ್ಪ ದೊಡ್ಡಮನಿ, ಅರುಣ ಭೋವಿ, ಮಂಜುನಾಥ ಸಿದ್ದಣ್ಣನವರ, ಅಶೋಕ ಅರೆಕಟ್ಟಿ, ಸುಭಾಷ ದೊಡ್ಡಮನಿ, ಮುತ್ತಣ್ಣ ಮುಷ್ಠಿ, ಗುಡ್ಡಪ್ಪ ಕನವಳ್ಳಿ ಸೇರಿದಂತೆ ಅನೇಕ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...