ಹಾವೇರಿ | ಕರವೇ ಸ್ವಾಭಿಮಾನಿ ಬಳಗ ವತಿಯಿಂದ ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ ಪುಣ್ಯ ಸ್ಮರಣೆ

Date:

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ವತಿಯಿಂದ ಯಾಲಕ್ಕಿ ಕಂಪಿನ ನಗರಿ ಹಾವೇರಿ ಪಟ್ಟಣದ ಚೌಡೇಶ್ವರಿ ವೃತ್ತದಲ್ಲಿ ಧ್ವಜ ಸ್ತಂಭದ ಬಳಿ ಕರ್ನಾಟಕ ರತ್ನ ಡಾಕ್ಟರ್ ವಿಷ್ಣುವರ್ಧನ್ ರವರ ಪುಣ್ಯ ಸ್ಮರಣೆಯನ್ನು ಆಚರಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷರು ಯಲ್ಲಪ್ಪ ಮರಾಠೆ ಮಾತನಾಡಿ, “ಈಗಾಗಲೇ ನಮ್ಮ ಸಂಘಟನೆ ವತಿಯಿಂದ ಯಾಲಕ್ಕಿ ಕಂಪಿನ ನಗರ ಹಾವೇರಿ ಪಟ್ಟಣದಲ್ಲಿ ಕರ್ನಾಟಕ ರತ್ನ ವಿಷ್ಣುವರ್ಧನ್ ಅವರ ಪುತ್ತಳಿಕೆಯನ್ನು ನಿರ್ಮಿಸಲು ಸೂಕ್ತವಾದ ಸ್ಥಳವನ್ನು ಒದಗಿಸಿಕೊಡುವಂತೆ ಮಾನ್ಯ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮನವಿ ಆಯುಕ್ತರು ಸ್ವೀಕರಿಸಿದ್ದು, ‘ಕರ್ನಾಟಕ ರತ್ನ ಡಾಕ್ಟರ ವಿಷ್ಣುವರ್ಧನ್ ರವರ ಪುತ್ತಳಿಕೆಯನ್ನು ನಿರ್ಮಿಸಲು ನಗರಸಭೆಯ ಸದಸ್ಯರ ಜೊತೆ ಚರ್ಚಿಸಿ ಸ್ಥಳ ಪರಿಶೀಲನೆ ಮಾಡಿ ಸೂಕ್ತ ಸ್ಥಳವನ್ನು ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ಆ ಜಾಗದಲ್ಲಿ ಡಾಕ್ಟರ್ ವಿಷ್ಣುವರ್ಧನ್ ಪುತ್ತಳಿಕೆಯನ್ನು ನಿರ್ಮಿಸಲಾಗುವುದು” ಎಂದು ನುಡಿದರು. 

ಈ ಸಂದರ್ಭದಲ್ಲಿ ಮಹಿಳಾ ಅಧ್ಯಕ್ಷರು ಗೀತಾಬಾಯಿ ಲಮಾಣಿ ಮಾತನಾಡಿ, “ಪಟ್ಟಣದಲ್ಲಿ ವಿಷ್ಣುವರ್ಧನ್ ಅವರ ಪುತ್ತಳಿಕೆಯನ್ನು ನಮ್ಮ ಸಂಘಟನೆಯಿಂದ ನಿರ್ಮಿಸುವ ಮುಖಾಂತರ ಅಭಿಮಾನಿಗಳ ಕನಸು ನನಸು ಮಾಡುವುದಾಗಿ” ನುಡಿದರು, 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಧ್ಯಕ್ಷರಾದ ಯೊಸುಫ್ ಸೈಕಲಗಾರ,ಹಾವೇರಿ ತಾಲೂಕ ಅಧ್ಯಕ್ಷರಾದ ರಾಜಾಭಕ್ಷ ಮಾನೇಗಾರ, ತಾಲೂಕ ಯುವ ಘಟಕದ ಅಧ್ಯಕ್ಷರಾದ ಅನಿಲ್ ಮಾವರಕರ, ರಕ್ಷೀತಾ ಲಮಾಣಿ, ಪರಶುರಾಮ,ಮಂಜು ಮೆಗೇರಿ, ನನ್ನು, ರಮೇಶ್, ಸೇರಿದಂತೆ ಅನೇಕ ಕರವೇ ಸ್ವಾಭಿಮಾನಿ ಬಳಗ ಕಾರ್ಯಕರ್ತರು ಹಾಗೂ ವಿಷ್ಣುವರ್ಧನ ಅಭಿಮಾನಿಗಳು ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...