ಹಾವೇರಿ | ಸರ್ವಜ್ಞನ ತ್ರಿಪದಿಗಳು ತಾರ್ಕಿಕ ಚಿಂತನಗೆ ಹಚ್ಚುತ್ತವೆ: ಕೆ.ಆರ್ ಕೊಣ್ತಿ

Date:

“ಸರ್ವಜ್ಞನ ತ್ರಿಪದಿ ಸಾಹಿತ್ಯವು ಮೂಢನಂಬಿಕೆಗಳನ್ನು ಖಂಡಿಸಿ ವೈಚಾರಿಕ,ವೈಜ್ಞಾನಿಕ ಮತ್ತು ತಾರ್ಕಿಕ ಚಿಂತನೆಗೆ ಹಚ್ಚುತ್ತವೆ ಎಂದು ಮಾಸೂರಿನ ಪ್ರಾಚಾರ್ಯರು ಕೆ.ಆರ್ ಕೊಣ್ತಿ ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಜಿಲ್ಲಾ ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ತ್ರಿಪದಿ ಕವಿ ಸರ್ವಜ್ಞರ ಸಾಹಿತ್ಯದಲ್ಲಿ ಸಾಮಾಜಿಕ ಪ್ರಜ್ಞೆ ವಿಶೇಷದ ಕುರಿತು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸರ್ವಜ್ಞನ ತ್ರಿಪದಿಗಳು ಅವು ಬರಿ ಕವಿತೆಗಳಲ್ಲ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸಲಹೆ ಸೂಚನೆ ಮಾರ್ಗದರ್ಶನ ನೀಡುವ ಸಂದೇಶಗಳಾಗಿವೆ. ಮಾನವೀಯ ಮೌಲ್ಯಗಳನ್ನು ಮೂಡಿಸಿ ಸರ್ವರು ಸಮಾನರು ಎಂಬ ಭಾವನೆಯನ್ನು ಮೂಡಿಸುತ್ತವೆ.

 ಸರ್ವಜ್ಞರಿಗೆ ಲೌಕಿಕ ಬದುಕಿನ ಅನುಭವ ಹಾಗೂ ಆಧ್ಯಾತ್ಮಿಕ ಅನುಭಾವಗಳನ್ನು ಬಲ್ಲವರಾದ್ದರಿಂದ ಅವರ ಸಾಹಿತ್ಯದಲ್ಲಿ ಶಿಸ್ತು, ಜ್ಞಾನ, ಭಕ್ತಿ, ನೇರ ನುಡಿ, ಸರಳತೆ ವೈಚಾರಿಕ ಹಾಗೂ ವೈಜ್ಞಾನಿಕತೆ ಅವರ ತ್ರಿಪದಿಗಳ ಸಾರವಾಗಿವೆ” ಎಂದರು.

“ಜಾತಿ ತಾರತಮ್ಯವಿರದ ಸೌಹಾರ್ದ ಸಾಮರಸ್ಯದ  ಸಮ ಸಮಾಜ ನಿರ್ಮಿಸಲು ಜನತೆಯಲ್ಲಿ ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಿದ ಸರ್ವಜ್ಞರು ಸಮಾಜೋದ್ಧಾರದ ಸಂದೇಶಗಳನ್ನು ಸಾರಿದ್ದಾರೆ” ಎಂದು ಹೇಳಿದರು.

ಸಾಹಿತಿ ಬಸವರಾಜ ಪೂಜಾರ ಮಾತನಾಡಿ, “ಇಂದಿನ ಯುವ ಜನತೆ ಸರ್ವಜ್ಞರ ಸಾಹಿತ್ಯವನ್ನು ಓದಿ ಅವರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯ ಶ್ರೀ ಗುಡ್ಡಪ್ಪ ಮಾಳಗುಡ್ಡಪ್ಪನವರ ಮಾತನಾಡಿ, “ಸರ್ವಜ್ಞರ ಸಾಹಿತ್ಯ  ಸರ್ವರಿಗೂ ಮುಟ್ಟುವಂತಾಗಲಿ ಸರ್ಕಾರ, ಸಾಹಿತ್ಯ ಅಕಾಡೆಮಿ ಸರ್ವಜ್ಞರ ತ್ರಿಪದಿ ಸಾಹಿತ್ಯದ ಕುರಿತು ಸಂಶೋಧನೆ, ಪುಸ್ತಕ ಪ್ರಕಟಣೆ ಹೆಚ್ಚು ಹೆಚ್ಚು ಕೈಗೊಳ್ಳುಲಿ. ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ ಶೀಘ್ರ ಕಾರ್ಯೋನಮುಖವಾಗಿ ಕಾರ್ಯಪ್ರವೃತ್ತವಾಗಲಿ” ಎಂದು ಆಶಿಸಿದರು.

ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕ ಮಾರುತಿ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಕುಮಾರ ಮಡಿವಾಳರ ವಿದ್ಯಾರ್ಥಿ ವೇದಿಕೆ ಪ್ರತಿನಿಧಿ ಕುಮಾರಿ ರೇಣುಕಾ  ಹಾಗೂ ರವಿ ಭಜಂತ್ರಿ  ಉಪಸ್ಥಿತರಿದ್ದರು. ಸೃಷ್ಟಿ ಅಂಕಿತ ಪ್ರಾರ್ಥಿಸಿದರು,ಕು. ದೀಪಾ ಹರಿಯಪ್ಪನವರ ನಿರೂಪಿಸಿದರು ಕಾಂಚನ ಮಡಿವಾಳರ ಸ್ವಾಗತಿಸಿದರು, ರಾಧಿಕಾ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...