ಹಾವೇರಿ | ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ

Date:

Advertisements

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹೊಸಚಂದಾಪುರ ಗ್ರಾಮದಲ್ಲಿ ತುಂಗಭದ್ರಾ ನದಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು, ಚಿಕ್ಕಕುರುವತ್ತಿ ಗ್ರಾಪಂ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾಮದ ರಾಜಶೇಖರ ಮಾತನಾಡಿ, ನೆರೆ ಸಂತ್ರಸ್ತರಿಗೆ ವಿತರಿಸಲು ಹೊಸ ಚಂದಾಪುರದಲ್ಲಿ 336 ನಿವೇಶನ ಸಿದ್ಧಪಡಿಸಿ, ಅದರಲ್ಲಿ ಸರ್ಕಾರದಿಂದ 129 ಜನರಿಗೆ ಮಾತ್ರ ಅಧಿಕೃತವಾಗಿ ಹಂಚಿಕೆ ಮಾಡಲಾಗಿದೆ. ಆದರೆ, ಸದ್ಯ ಗ್ರಾಮದಲ್ಲಿ ಬೆರಳೆಣಿಕೆಯಷ್ಟು ಮಾತ್ರ ನಿವೇಶನ ಉಳಿದುಕೊಂಡಿವೆ. ನಿವೇಶನ ಹಂಚಿಕೆಯಲ್ಲಿ ಕೆಲವು ಅಧಿಕಾರಿಗಳು, ಜನಪ್ರತಿನಿಧಿಗಳು ಅಕ್ರಮ ಎಸಗಿದ್ದಾರೆ. ಅಲ್ಲದೆ ತಹಶೀಲ್ದಾರ್‌ ಹೆಸರಿನಲ್ಲಿ ನಕಲಿ ಪ್ರಮಾಣಪತ್ರ ನೀಡಿ ಮೋಸ ಮಾಡಲಾಗಿದೆ. ಆದ್ದರಿಂದ ಜಿಲ್ಲಾಡಳಿತ ಹಾಗೂ ಜಿಪಂ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳು, ಗ್ರಾಪಂ ಸದಸ್ಯರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನೆರೆ ಸಂತ್ರಸ್ತರಿಗೆ ವಿತರಿಸಲು ಹೊಸ ಚಂದಾಪುರದಲ್ಲಿ 336 ನಿವೇಶನ ಸಿದ್ಧಪಡಿಸಿ, ಅದರಲ್ಲಿ ಸರ್ಕಾರದಿಂದ 129 ಜನರಿಗೆ ಮಾತ್ರ ಅಧಿಕೃತವಾಗಿ ಹಂಚಿಕೆ ಮಾಡಲಾಗಿದೆ. ಆದರೆ, ಸದ್ಯ ಗ್ರಾಮದಲ್ಲಿ ಬೆರೆಳೆಣಿಕೆಯಷ್ಟು ಮಾತ್ರ ನಿವೇಶನ ಉಳಿದುಕೊಂಡಿವೆ ಎಂದು ತಿಳಿಸಿದರು.

Advertisements

ಇದನ್ನು ಓದಿದ್ದೀರಾ? ರಾಯಚೂರು | ಮಾನಸಿಕ ಅಸ್ವಸ್ಥ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಗ್ರಾಮಸ್ಥರಾದ ಮಲ್ಲಪ್ಪ ಗಂಟಿ, ಈರಣ್ಣ ಅಂಬಿಗೇರ, ರುದ್ರಪ್ಪ ಹುಲಮನಿ, ಶಿವಾಜಿ ನನ್ನೂರಿ, ದರ್ಶನ ಕಂಚಾರಗಟ್ಟಿ, ಶಿವಕುಮಾರ ಬಣಕಾರ, ಸಚಿನ್ ಕುದುರಿಹಾಳ, ಸುರೇಶ ಬಂಗಿ, ಸಾಕವ್ವ ಕಡತಿ, ಮಾರುತಿ ಕಂಚಾರಗಟ್ಟಿ, ನಿರ್ಮಲಾ ಮಾಳಗಿ, ಉಡಚವ್ವ ಬಾರ್ಕಿ, ಮೀನಾಕ್ಷವ್ವ ಗಂಟಿ, ನಾಗಮ್ಮ ಗಂಟಿ, ಪಾರವ್ವ ಕಂಚಾರಗಟ್ಟಿ, ಲಕ್ಷ್ಮವ್ವ ಹೊನ್ನತೆಪ್ಪನವರ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X