ಹಾವೇರಿ | ಬಿ. ಆರ್ ಭಾಸ್ಕರ್ ಪ್ರಸಾದ್ ಅವರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ: ಮಾದಿಗ ಮುಖಂಡರು

Date:

“ನಾವೆಲ್ಲರೂ ಸಮಾನತೆ ಸಾರೋಣ. ಸಮಾಜದ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಾಗಬೇಕು. ಒಲಮೀಸಲಾತಿ ಜಾರಿಗಾಗಿ ಹೋರಾಟ ಮಾಡುತ್ತಿರುವ ಭಾಸ್ಕರ್ ಪ್ರಸಾದ್ ಅವರಿಗೆ ನಾವು ಬೆಂಬಲ ಕೊಡಲು ಮೈಸೂರಿಗೆ ಹೋಗುತ್ತೇವೆ” ಎಂದು ಪತ್ರಿಕಾ ಗೋಷ್ಠಿಯಲ್ಲಿ ಮಾದಿಗ ಮುಖಂಡರು ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ಹಿರೇಕೆರೂರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯದ ಮುಖಂಡರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮಾದಿಗ ಸಮಾಜದ ಮುಖಂಡರು ಮಹದೇವಪ್ಪ ಮಳಮ್ಮನವರ ಮಾತನಾಡಿ, “ಮಾದಿಗ ಸಮಾಜ ತಲತಲಾಂತರಗಳಿಂದ ಮೇಲ್ವರ್ಗದ ಸೇವೆ ಮಾಡಿಕೊಂಡು, ಕಷ್ಟ ಅನುಭವಿಸಿ, ಶೋಷಣೆ ಅನುಭವಿಸುತ್ತಾ ಬಂದಿದ್ದೇವೆ. ಜಸ್ಟೀಸ್ ನಾಗಮೋಹನದಾಸ್ ಹಾಗೂ ಸದಾಶಿವ ಆಯೋಗದ ವರದಿಯನ್ನು ಯತಾವತ್ತಾಗಿ ಜಾರಿಗೊಳಿಸಿ ಮಾದಿಗ ಸಮಾಜಕ್ಕೆ ಅನುಕೂಲ ಮಾಡಿಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರೆ. ಆದರೆ ಅವರ ಸಚಿವ ಸಂಪುಟದ ಸಚಿವ ಹೆಚ್ ಸಿ ಮಹದೇವಪ್ಪ ಅವರ ಹುನ್ನಾರ ಎಲ್ಲ ಜನರಿಗೆ ಗೊತ್ತಿದೆ. ಮಾದಿಗ ಸಮಾಜವದ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದ್ದಕ್ಕಾಗಿ ಮಾದಿಗ ಸಮಾಜದ ಮುಖಂಡರು ಬಿ ಆರ್ ಭಾಸ್ಕರ್ ಪ್ರಸಾದ್ ಅವರು ಹರಿಹದಿಂದ ಮೈಸೂರು ವರೆಗೆ ಪಾದಯಾತ್ರೆ ಮಾಡಿ ಸಮಾಜದ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹೇಗೆ ವಂಚಿತರಾಗಿದ್ದೇವೆ” ಎಂಬುದು ಗೊತ್ತಾಗಿದೆ ಎಂದರು.

ಸಚಿವ ಹೆಚ್ ಸಿ ಮಹದೇವಪ್ಪ ಅವರ ಗುಲಾಮನಾಗಿ ಜ್ಞಾನ ಪ್ರಕಾಶ್ ಸ್ವಾಮೀಜಿಯ ಮಾತನ್ನು ಕಟ್ಟಿಕೊಂಡು ನಮ್ಮ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡುತ್ತಿರುವುದು ಅವರ ಬಾಯಿಯಿಂದಲೇ ಬಂದಿರುವುದು ಗೊತ್ತಾಗಿದೆ. ಹಾಗಾಗಿ ಬಿ. ಆರ್. ಭಾಸ್ಕರ್ ಪ್ರಸಾದ್ ಅವರು ಮೈಸೂರಿನಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುತ್ತಿದ್ದಾರೆ. ಆ ಪ್ರತಿಭಟನೆಗೆ ನಾವು ಕೂಡ ಹೋಗಿ ಬೆಂಬಲ ಸೂಚಿಸುತ್ತೇವೆ” ಎಂದು ಹೇಳಿದರು.

“ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ಮಾದಿಗ ಸಮಾಜದ ಜನರು ಭಾಸ್ಕರ್ ಪ್ರಸಾದ ಅವರ ಪ್ರತಿಭಟನೆಗೆ ಬೆಂಬಲ ಕೋರುತ್ತೇವೆ” ಎಂದು ಹೇಳಿದರು.

“224 ಶಾಸಕರಿಗೆ ಸ್ವಾಭಿಮಾನ ಇದ್ದರೆ, ಮಾದಿಗ ಸಮಾಜ ನಮಗೆ ಓಟು ಕೊಟ್ಟು ಗೆಲ್ಲಿಸಿದೆ. ಮಾದಿಗ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡಬೇಕು. ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರಬೇಕು” ಎಂದರು.

“ಮುಂದೆ ಮತ್ತೆ ಚುನಾವಣೆ ಬರುತ್ತದೆ. ಸಚಿವ ಹೆಚ್ ಸಿ ಮಹದೇವಪ್ಪ ಅವರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ನಮ್ಮ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ನಾವೆಲ್ಲರೂ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ರಾಜು ತಾಳಿಕೋಟೆ ಅಗಲಿಕೆ ರಂಗಭೂಮಿಗೆ ತುಂಬಲಾರದ ನಷ್ಟ: ಹಿರಿಯ ಸಾಹಿತಿ ಸತೀಶ ಕುಲಕರ್ಣಿ

“ನಾಳೆಯಿಂದಲೇ ನಾವೆಲ್ಲರೂ ಬಿ ಆರ್ ಭಾಸ್ಕರ್ ಪ್ರಸಾದ ಅವರಿಗೆ ಬೆಂಬಲ ನೀಡಲು ಹೋಗುತ್ತಿದ್ದೇವೆ” ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಾದಿಗ ಸಮಾಜದ ಮುಖಂಡರು ಮಾಲತೇಶ್ ಹೊಲಬಿಕೊಂಡ, ಚಂದ್ರಪ್ಪ ಬಾಲಣ್ಣವರ, ಬಸವರಾಜ ಕಲ್ಲಹಳ್ಳಿ, ಶೇಕಪ್ಪ ನಡುಗೇರಿ, ಕುಮಾರ್  ಪ್ರಭು ನಡುವಿನಮನಿ  ಕುಮಾರ ದ್ಯಾವಣ್ಣವರ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...