ಹಾವೇರಿ | ಮಹಿಳೆಯರು ವಿಶೇಷ ತರಬೇತಿ ಪಡೆದು ಸ್ವಾವಲಂಬಿಯಾಗಬೇಕು: ಡಾ. ದೇವಾನಂದ ದೊಡ್ಡಮನಿ

Date:

Advertisements

ಬಜ್ ಸಂಸ್ಥೆ ಅಂಗನವಾಡಿಗಳ ಮೂಲಕ ಮಹಿಳೆಯರನ್ನು ಸಂಘಟಿಸಿ ಕುಟುಂಬದ ಆರ್ಥಿಕತೆ, ಆದಾಯ, ಖರ್ಚು ವೆಚ್ಚದ ಕುರಿತು ವಿಶೇಷ ತರಬೇತಿ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದು ಗುತ್ತಲ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಡಾ. ದೇವಾನಂದ ದೊಡ್ಡಮನಿ ಅ‌ಭಿಪ್ರಾಯಪಟ್ಟರು.

ಹಾವೇರಿ ತಾಲೂಕಿನ ಗುತ್ತಲ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಬಜ್ ಇಂಡಿಯಾ ಟ್ರಸ್ಟ್ ಆಯೋಜಿಸಿದ್ದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಮಹಿಳೆಯರಿಗೆ ಕಿಟ್ ಕೊಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

“ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿವೆ. ಬಜ್ ಸಂಸ್ಥೆಯು ಕೈಸಾಲ ಮಾಡುವುದು ಅಗತ್ಯವಿಲ್ಲ, ಆದಾಯಕ್ಕನುಗುಣವಾಗಿ ಖರ್ಚನ್ನು ಕಡಿಮೆ ಮಾಡಿಕೊಂಡು ಉಳಿತಾಯ ಮಾಡಬಹುದು ಎಂಬುದನ್ನು ವಸ್ತುನಿಷ್ಠವಾಗಿ ಕೌಶಲಗಳ ಮೂಲಕ ತರಬೇತಿ ನೀಡುತ್ತಿರುವುದು ಅಭಿನಂದನಾರ್ಹ. ಈ ವಿಶೇಷ ತರಬೇತಿ ಪಡೆದುಕೊಂಡು ಮಹಿಳೆಯರು ಸ್ವಾವಲಂಬಿಗಳಾಗಿ ಉನ್ನತ ಸ್ಥಾನಮಾನ ಗಳಿಸಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಮಾಂತ್ರಿಕನಿಗೆ ಶ್ರದ್ಧಾಂಜಲಿ

ಪ್ರಾಸ್ತಾವಿಕವಾಗಿ ಬಜ್ ಸಂಸ್ಥೆಯ ತರಬೇತಿ ಸುಗಮಕಾರರಾದ ರೇಣುಕಾ ಕಹಾರ ಮಾತನಾಡಿದರು. ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಾಳವ್ವ ಗೊರವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸ್ಥಾಯಿ ಸಮಿತಿ ಅಧ್ಯಕ್ಷ ಪ್ರದೀಪ ಸಾಲಗೇರಿ, ಅಮೀನಾ ಗಳಗನಾಥ, ಯಶೋಧಾ ಕಮ್ಮಾರ, ಜಯಲಕ್ಷ್ಮೀ ಅಂಗೂರು, ಇಂದಿರಾ ಲಮಾಣಿ, ಚೈತ್ರಾ ಮೈಕಲ್, ದೇವಿಕಾ ಲಮಾಣಿ, ಸುಮಂಗಲಾ ಚರಂತಿಮಠ, ಕಾಂಚನಾ ಓದಿಸೋಮಠ, ಅಸ್ಮಾಬಾನು ನೆಗಳೂರು, ಭಾಗ್ಯಶ್ರೀ ಸೀತಾಳ, ಚಮನಬಿ ಬಾಗವಾನ್ ಸೇರಿದಂತೆ  ಮಹಿಳೆಯರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X