ಹಾವೇರಿ | ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಮುಖ್ಯ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್.

Date:

“ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಮಹಿಳಾ ನ್ಯಾಯಾಧೀಶರು ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಹಾಗೂ ಇತರೆ ಮಹಿಳೆಯರಿಗೆ ಪ್ರೇರಣೆಯಾಗಿರುತ್ತಾರೆ” ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಬಿರಾದಾರ ದೇವಿಂದ್ರಪ್ಪಾ ಎನ್. ಹೇಳಿದರು.

- Advertisement -

ಹಾವೇರಿ ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಸೋಮವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಅಭಿಯೋಜನಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

“ನ್ಯಾಯಾಂಗದ ಎಲ್ಲ ಹಂತಗಳಲ್ಲಿ ಕೆಲಸಮಾಡುವ ಮಹಿಳೆಯರು ಸಹ ಇತರರಿಗೆ ಮಾರ್ಗದರ್ಶಿ ಸ್ಥಾನದಲ್ಲಿ ನಿಲ್ಲಬೇಕು. ನಾಯಕತ್ವದ ಸ್ಥಾನವು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸಹಾಯಮಾಡಬಹುದು. ಸಮಾಜದಲ್ಲಿ ಪೋಕೋ, ಬಾಲ್ಯವಿವಾಹ ಹಾಗೂ ವರದಕ್ಷಿಣೆ ಪಿಡುಗು ತಡೆಗೆ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಸಾಧ್ಯ. ಜೊತೆಗೆ ಬೇಸಿಗೆ ಸಮಯದಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಪ್ರಾಣಿ-ಪಕ್ಷಿಗಳಿಗೆ ನಮ್ಮ ನಮ್ಮ ಮನೆಯ ಆವರಣದಲ್ಲಿ ಆಹಾರ ಹಾಗೂ ನೀರಿನ ವ್ಯವಸ್ಥೆ ಮಾಡುವುದು ಮಾನವೀಯತೆ ಆಗಿದೆ” ಎಂದು ಹೇಳಿದರು.

ಸನ್ಮಾನ: ಇದೇ ಸಂದರ್ಭದಲ್ಲಿ ಮಹಿಳಾ ನ್ಯಾಯಾಧೀಶರು ಅಶ್ವಿನಿ ಶಿರಿಯಣ್ಣನವರ, ಶೋಭಾ ಬಿ.ಜಿ, ಶ್ರೀಶೈಲಜಾ ಎಚ್.ವಿ, ಸರ್ಕಾರಿ ಅಭಿಯೋಜಕರು ಸರೋಜಾ ಕೂಡಲಗಿಮಠ, ಸಹಾಯಕ ಸರ್ಕಾರಿ ಅಭಿಯೋಜಕರು ಇಂದುಮತಿ ಪಾಟೀಲ ಅವರನ್ನು ಸನ್ಮಾನಿಸಲಾಯತು.

ಬಹುಮಾನ ವಿತರಣೆ: ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾದ ರಂಗೋಲಿ ಹಾಗೂ ಮನೋರಂಜನೆ ಕಾರ್ಯಕ್ರಮದಲ್ಲಿ ವಿಜೇತಾರದ ಮಹಿಳೆಯರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಯಿತು.

ಕಾರ್ಯಕ್ರಮವನ್ನು ಕಾವೇರಿ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಉದ್ಘಾಟನೆ ನೆರವೇರಿಸಿದರು. ನ್ಯಾಯಾಧೀಶರಾದ ಎಂ.ಜಿ.ಶಿವಳ್ಳಿ, ಎನ್.ಎಂ.ರಮೇಶ, ಮಹಮ್ಮದ ಅನ್ವರ ಹುಸೇನ ಮೊಗಲಾನಿ,  ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡರ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...