ಹಾವೇರಿ | ಲೈಂಗಿಕ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ

Date:

ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಗ್ರಾಮವೊಂದರ ನಿವಾಸಿಯಾಗಿದ್ದ 20 ವರ್ಷದ ಯುವತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಗೆ ಕಿರುಕುಳ ನೀಡಿದ್ದ ಆರೋಪದಡಿ ಮೂವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

‘ಬಿ.ಎಸ್ಸಿ. ಕೋರ್ಸ್‌ಗೆ ಪ್ರವೇಶ ಪಡೆಯಲು ಸಿದ್ಧತೆ ನಡೆಸಿದ್ದ ಯುವತಿ, ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಅದರನ್ವಯ ಆರೋಪಿಗಳಾದ ದರ್ಶನ್, ಅಕ್ಷಯ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆ‌ರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

‘ಯುವತಿ ಹಾಗೂ ಆರೋಪಿ ದರ್ಶನ್, ಪರಸ್ಪರ ಪ್ರೀತಿಸುತ್ತಿದ್ದರು. ವಿಷಯ ಗೊತ್ತಾಗಿ ಹಿರಿಯರು ಬುದ್ದಿವಾದ ಹೇಳಿದ್ದರು. ಇದೇ ವಿಚಾರಕ್ಕೆ ಯುವತಿ ಬೇಸರಗೊಂಡಿದ್ದರು ಎಂದು ತಿಳಿದುಬಂದಿದೆ. ಇದರ ನಡುವೆಯೇ, ವಿವಾಹಿತ ಅಕ್ಷಯ್ ಎಂಬಾತ ಯುವತಿಯ ಹಿಂದೆ ಬಿದ್ದಿದ್ದ. ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ. ಮನೆಯಲ್ಲಿ ಯಾರೋ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ, ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದನೆಂದು ಯುವತಿಯ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಈ ಎಲ್ಲ ಆರೋಪಗಳ ಬಗ್ಗೆ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಎಚ್‌.ಡಿ. ಕುಮಾರಸ್ವಾಮಿ ಭೇಟಿಗೆ ಬಂದ ಮುಸುಕುಧಾರಿ ಬಂಧನಕ್ಕೆ ಆಗ್ರಹ

ನಗರದ ಪತ್ರಿಕಾಗೋಷ್ಠಿಯಲ್ಲಿ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ರಾಜ್ಯ ಸಂಚಾಲಕ...

ಬಾಗಲಕೋಟೆ |ಎಂಬಿಎ ವಿದ್ಯಾರ್ಥಿಗಳು ಎಐ ಕೌಶಲ್ಯ ಬೆಳೆಸಿಕೊಳ್ಳುವುದು ಅಗತ್ಯ: ಪ್ರೊ. ದಯಾನಂದ ಸಾಹುಕಾರ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಂಬಿಎ ವಿದ್ಯಾರ್ಥಿಗಳು ಕೇವಲ ಪದವಿಗೆ ಸೀಮಿತವಾಗದೆ, ಕೃತಕ...

ಹಾಸನ | ಅರಣ್ಯಾಧಿಕಾರಿ ಮನೇಲಿ 500 ನೋಟಿನ ಕಂತೆ ಪತ್ತೆ 

ಈ ಕಾರ್ಯಾಚರಣೆಯ ವೇಳೆ, ಮನೆಯಲ್ಲಿನ ನಗದು ಹಣವನ್ನು ಹೊರಗೆ ಸಾಗಿಸಲು ನಡೆಸಿದ...

ಮಂಗಳೂರು | ನ.30 ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ: ಸಚಿವ ಯುಟಿ‌ ಖಾದರ್

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ...