ಹಾವೇರಿ | ಭಗತ್ ಸಿಂಗ್ ಅವರ ವಿಚಾರಗಳನ್ನು ಯುವಜನತೆ ಅರಿಯಬೇಕು: ಬಸವರಾಜ ಎಸ್

Date:

ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯಾಗಿದ್ದ ಶಹೀದ್ ಭಗತ್ ಸಿಂಗ್ ಅವರ ವಿಚಾರಗಳನ್ನು ವಿದ್ಯಾರ್ಥಿ-ಯುವಜನರು ಅರಿತುಕೊಂಡು, ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಎಸ್ಎಫ್ಐ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಹೇಳಿದರು.

- Advertisement -

ಹಾವೇರಿ ನಗರದ ಎಸ್ಎಫ್ಐ ಕಚೇರಿ ಎದುರು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಆಯೋಜಿಸಿದ ಶಹೀದ್ ಭಗತ್ ಸಿಂಗ್ ಅವರ 118ನೇ ಜನ್ಮ ದಿನಚಾರಣೆಯನ್ನು ಭಗತ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಗೌರವ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಭಗತ್‌ಸಿಂಗ್ ಕಂಡ ಕನಸಿನ ಭಾರತ ಇನ್ನೂ ನಿರ್ಮಾಣವಾಗಿಲ್ಲ. ಶೋಷಿತರ ಪರವಾದ ಭಗತ್‌ಸಿಂಗ್ ನಿಲುವು ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲೆ ಮೂಡಿತ್ತೆಂದರೆ ಅವರ ವಯಸ್ಸಿಗೆ ಅವರ ಅಧ್ಯಯನವನ್ನು ಇಂದಿನ ಯುವಪೀಳಿಗೆ ಅನುಸರಿಸಬೇಕಿದೆ ಎಂದರು.

1919 ರಂದು ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್‌ರನ್ನು ಕ್ರಾಂತಿಯತ್ತ ತಿರುಗಿಸಿತು. ಭಗತ್‌ಸಿಂಗ್ ಕುಟುಂಬ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬವಾಗಿತ್ತು. ಸ್ವಾತಂತ್ರ್ಯ ಹೋರಾಟದ ಕಿಚ್ಚು ಮನೆಯಿಂದಲೆ ಶುರುವಾಗಿದ್ದರೂ ಕೂಡಾ ಅವರ ಸೈದ್ದಾಂತಿಕ ತಿಳುವಳಿಕೆ ಮಟ್ಟ ಚಳುವಳಿಯ ಸಂದರ್ಭದಲ್ಲಿ ಮತ್ತಷ್ಟು ಹೆಚ್ಚಿತು. ಭಗತ್‌ಸಿಂಗ್ ಗಲ್ಲು ಶಿಕ್ಷೆಗೆ ಒಳಗಾಗಿ ಬಂಧನದಲ್ಲಿದ್ದರೂ ಕೂಡ ತಮ್ಮ ಓದುವ ಹವ್ಯಾಸವನ್ನು ಬಿಟ್ಟಿರಲಿಲ್ಲ. ಅವರು ಓದುವ ಪರಿ ಹೇಗಿತ್ತೆಂದರೆ ಗಲ್ಲುಶಿಕ್ಷೆಯ ಸಮಯ ಹತ್ತಿರವಾಗಿದೆ, ಜೈಲಿನಿಂದ ಹೊರಗೆ ಬಾ ಅಂತ ಜೈಲರ್ ಷರಣ್‌ಸಿಂಗ್ ಕರೆದಾಗ, ‘ಒಬ್ಬ ಕ್ರಾಂತಿಕಾರಿ ಮತ್ತೊಬ್ಬ ಕ್ರಾಂತಿಕಾರಿಯೊಡನೆ ಸಂಭಾಷಣೆ ನಡೆಸುತ್ತಿದ್ದಾನೆ. ಸ್ವಲ್ಪ ಕಾಯಿರಿ’ ಎಂದು ಹೇಳಿದ್ದರು ಎಂದು ಬಸವರಾಜ ವಿವರಿಸಿದರು.

ಭಗತ್‌ಸಿಂಗ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಅಷ್ಟೇ ಅಲ್ಲದೆ, ಭವಿಷ್ಯದಲ್ಲಿ ಭಾರತ ಹೇಗಿರಬೇಕೆಂದು ಕನಸು ಕಂಡವರು, ಜಾತಿ ತಾರತಮ್ಯ ನೀತಿಗಳು ಹೋಗಬೇಕು, ಧರ್ಮದ ಒಡೆದಾಳುವವರು, ಸಾಮ್ರಾಜ್ಯಶಾಹಿಗಳನ್ನು ದೇಶವನ್ನು ಬಿಟ್ಟು ಓಡಿಸಬೇಕು ಎಂದು ಹೇಳುತ್ತಿದ್ದ ಅವರು, ಅಸ್ಪೃಶ್ಯತೆಯ ಬಗ್ಗೆ ಭಗತ್‌ಸಿಂಗ್ ತನ್ನ 16ನೇ ವಯಸ್ಸಿನಲ್ಲಿಯೇ ಲೇಖನವನ್ನು ಬರೆದಿದ್ದರು. ಭಗತ್‌ಸಿಂಗ್ ಬಯಸಿದ್ದ ಭಾರತ ನಿರ್ಮಾಣ ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಶಿರೂರು ದುರಂತ | ಶೋಧ ಕಾರ್ಯಾಚರಣೆಯ ವೇಳೆ ಎರಡು ಮಾನವ ಮೂಳೆ ಪತ್ತೆ

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಶೃತಿ ಆರ್ ಎಮ್, ಮುತ್ತರಾಜ್ ದೊಡ್ಡಮನಿ, ದೇವರಾಜ ಅಕ್ಕಸಾಲಿ, ಜಿಲ್ಲಾ ಸಹ ಕಾರ್ಯದರ್ಶಿ ಅಣ್ಣಪ್ಪ ಕೊರವರ್, ಪೂರ್ಣಿಮಾ ಡವಗಿ, ಲಲಿತಾ ಹಾವೇರಿ, ತಾಲೂಕು ಅಧ್ಯಕ್ಷ ಸುಲೇಮಾನ್ ಮತ್ತಿಹಳ್ಳಿ, ಮುಖಂಡರಾದ ರಕ್ಷಿತ ಡವಗಿ, ಫತೀಮಾ ಶೇಖ್, ಕೀರ್ತನಾ ಹಿರಿಯಕ್ಕನವರ, ತಾಲೂಕು ಅಧ್ಯಕ್ಷ, ಕೃಷ್ಣ ನಾಯಕ, ದಾನೇಶ್ವರಿ ಗಡ್ಡದ, ನಿಕೀತಾ, ಧನುಷ್ ದೊಡ್ಡಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...