ಹಾವೇರಿ | ಮಟ್ಕಾ ದಂಧೆಗೆ ಯುವಕರು ಬಲಿ, ಕಡಿವಾಣ ಹಾಕಲು ಕರವೇ ಒತ್ತಾಯ

Date:

“ಈ ಮಟ್ಕಾ ಆಟದಿಂದ ಸಾಕಷ್ಟು ಯುವಕರು ದಾರಿ ತಪ್ಪುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಕೆಲಸ ಬಿಟ್ಟು ಈ ಆಟಗಳಲ್ಲಿ ಮಗ್ನರಾಗಿದ್ದಾರೆ. ಕೂಡಲೇ ಮಟ್ಕಾ ದಂಧೆಗೆ ಕಡಿವಾಣ ಹಾಕಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಹಾಲೇಶ ಹಾಲಣ್ಣವರ ಒತ್ತಾಯಿಸಿದರು.

- Advertisement -

ಹಾವೇರಿ ಜಿಲ್ಲೆಯ ಹಾವೇರಿ ತಾಲೂಕು ಗುತ್ತಲ ಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ರಾಜಾರೋಷವಾಗಿ ನಡೆದಿರುವ ಮಟ್ಕಾ(ಓಸಿ) ದಂಧೆಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗುತ್ತಲ ಪೊಲೀಸ್ ಠಾಣೆಯ ಪಿ ಎಸ್ ಐ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಹಾವೇರಿ ತಾಲೂಕು ಸುತ್ತಮುತ್ತಲಿನ ಸಣ್ಣ ಸಣ್ಣ ಗ್ರಾಮಗಳ ಗೂಡಂಗಡಿಗಳಲ್ಲಿ, ಮಟ್ಕಾ ದಂಧೆ ಗುತ್ತಲ ಪಟ್ಟಣದಲ್ಲಿ ಪ್ರಮುಖ ನಾಲ್ಕು ರಸ್ತೆಯ ಬಾಡಿಗೆ ಅಂಗಡಿ, ಬೀಡಿ ಅಂಗಡಿ, ಟೀ ಅಂಗಡಿಗಳಲ್ಲಿ ರಾಜಾರೋಷವಾಗಿ ಮಟ್ಕಾ ಚೀಟಿ ಬರೆಯುತ್ತಿದ್ದಾರೆ. ಮಟ್ಕಾ ದಂಧೆ ಈಗ ಹೈಟೆಕ್ ಸ್ಪರ್ಷ ಪಡೆದುಕೊಂಡಿದ್ದು, ಕೈ ಚೀಟಿ ಬದಲಾಗಿ ವಾಟ್ಸ್‌ ಆಪ್ ಮೂಲಕ ಬರೆದುಕೊಳ್ಳುತ್ತಿದ್ದಾರೆ. ಹೀಗಾಗಿ ಗುತ್ತಲ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಯುವಕರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಈ ದಂಧೆಗೆ ಬಲಿಯಾಗುತ್ತಿದ್ದಾರೆ” ಎಂದು ಹೇಳಿದರು.

“ಮಟ್ಕಾ ರೂ. ಒಂದಕ್ಕೆ ರೂ. ಎಂಬತ್ತು ದುಡಿಯುವ ಆಸೆಗೆ ಬಿದ್ದು ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಓಸಿ(ಓಪನ್ ಕ್ಲೋಸ್) ಎನ್ನುವ ಸಂಖ್ಯೆಗಳ ಆಟದ ಮಟ್ಕಾ ದಂಧೆಯನ್ನು ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರು ಈ ದಂಧೆ ವ್ಯಾಪ್ತಿ ವಿಸ್ತಾರಗೊಳ್ಳುತ್ತಲೇ ಇದೆ. ಈ ಪೈಕಿ ಸಟಕಾಮಟ್ಕಾ ಡಾಟ್ ಕಾಮ್ ವೆಬ್‌ ಸೈಟ್ ಹೆಚ್ಚು ಜಾಗೃತವಾಗಿದೆ. ದಿನಕ್ಕೆ ಎರಡು ಹಂತದಲ್ಲಿ ಕಲ್ಯಾಣಿ(ಮಧ್ಯಾಹ್ನದ ಆಟ), ಬಾಂಬೆ(ರಾತ್ರಿ ಆಟ) ಹೀಗೆ ಮಟ್ಕಾ ದಂಧೆ ಜೋರಾಗಿ ನಡೆಯುತ್ತಿದೆ” ಎಂದರು.

“ಈ ಮಟ್ಕಾ ದಂಧೆಯಿಂದ ಅನೇಕರು ಹಲವಾರು ಕಡೆ ಸಾಲಾ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರ ಕುಟುಂಬದ ತಂದೆ-ತಾಯಿ, ಹೆಂಡತಿ ಮಕ್ಕಳೊಡನೆ ಜಗಳ ಮಾಡುವುದು, ಮನೆಯಲ್ಲಿರುವ ಸಾಮಾನುಗಳನ್ನು ಮಾರಿ ಸಾಲಗಾರರಿಗೆ ಕೊಡುವ ಪರಸ್ಥಿತಿ ಎದುರಾಗಿದೆ. ಇದರಿಂದ ಮಹಿಳೆಯರು ಕಷ್ಟದಲ್ಲಿ ಜೀವನ ನಡೆಸುವಂತಾಗಿದೆ. ಹಾಗೂ ಕೆಲವೊಂದು ಕುಟುಂಬಗಳು ಬೀದಿಗೆ ಬರುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನೇಮಕ

“ಯುವಕರ ಭವಿಷ್ಯ ಹಾಗೂ ಮಹಿಳೆಯರ ಜೀವನ ಕಾಪಾಡುವ ಸಲುವಾಗಿ ಪೊಲೀಸ್ ಅಧಿಕಾರಿಗಳು ಈ ಮಟ್ಕಾ(ಓಸಿ) ದಂಧೆಗೆ ಕಡಿವಾಣ ಹಾಕಬೇಕು” ಎಂದು ಒತ್ತಾಯಿಸಿದರು.

ಈ ಮನವಿಯಲ್ಲಿ ಕರವೇ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...