ಹಾವೇರಿ | ರಾಷ್ಟ್ರೀಯ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌ ಗೆ ಅಂಗವಿಕಲೆ ಗಿರಿಜಾ ಹೆಚ್ ಆಯ್ಕೆ

Date:

ರಾಷ್ಟ್ರೀಯ ಮಟ್ಟದ ಪ್ರಥಮ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌–2026ರಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಹಾವೇರಿಯ ಕ್ರೀಡಾಪಟು ಗಿರಿಜಾ ಹೆಚ್ ಅವರು ಆಯ್ಕೆಯಾಗಿದ್ದಾರೆ.

- Advertisement -

ನವೆಂಬರ್ 18 ರಿಂದ 21ರವರೆಗೆ ಮೈಸೂರಿನ ವಿಜಯನಗರದ ಕ್ರೀಡೆ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಗಿರಿಜಾ ಅವರು ಭಾಗವಹಿಸಲಿದ್ದಾರೆ. ಗಿರಿಜಾ ಅವರ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನರ ಫೆಡರೇಶನ್ (ಡಿವೈಎಫ್ಐ) ಸಂಘಟನೆಗಳ ವತಿಯಿಂದ ನಗರದ ಪರಿವೀಕ್ಷಣಾ ಮಂದಿರದ ಆವರಣದಲ್ಲಿ ಅಭಿನಂದಿಸಿ, ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಶುಭಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

ಅಂಗವೈಕಲ್ಯವನ್ನು ಮೀರಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಗಿರಿಜಾ ಅವರ ಆಯ್ಕೆಯು ಇತರ ಕ್ರೀಡಾಪಟುಗಳಿಗೂ ಪ್ರೇರಣೆಯಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಚೇತನರಿಗೆ ಹೆಚ್ಚಿನ ಅವಕಾಶ, ಪ್ರೋತ್ಸಾಹ ಹಾಗೂ ಅಗತ್ಯ ಸೌಲಭ್ಯಗಳು ದೊರೆಯಬೇಕು. ಇವರ ಜೀವನಕ್ಕೆ ಆಸರೆ ಆಗಿದ್ದ ವಿಕಲಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿಗಳ ವಸತಿ ನಿಲಯವನ್ನು ಪುನರ್ ಆರಂಭಿಸಬೇಕು ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್ಐ ಜಿಲ್ಲಾ ಖಜಾಂಚಿ ರೇಣುಕಾ ಕಹಾರ, ಭಗತ್ ಸಿಂಗ್ ಶಿಕ್ಷಣ ಸಂಸ್ಥೆ ಮುಖ್ಯಸ್ಥರಾದ ಸತೀಶ್ ಬಾಗಣ್ಣನವರ, ಪತ್ರಕರ್ತರಾದ ನಿಂಗಪ್ಪ ಆರೇರ್, ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣಕುಮಾರ ನಗವತ, ಡಿವೈಎಫ್ಐ ಮುಖಂಡರಾದ ತಸ್ಲೀಮಾ, ನಿಂಗರಾಜ ಪೂಜಾರ, ಬಾಲಸಂಘಂನ ಧನುಷ್ ದೊಡ್ಡಮನಿ, ಮೈನುದೀನ್ ಇಲಿಬುಡ್ಡಿ, ಅನ್ವಿಕಾ ಆರ್ ಬಿ, ತೇಜಸ್ ಎನ್ ಡಿ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನೀರಿಗಾಗಿ ಸಿಂಧನೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಡಿ. 31ರವರೆಗೆ ನೀರು ಹರಿಸಲು ರೈತರ ಪಟ್ಟು

ತುಂಗಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ಡಿಸೆಂಬರ್ 31ರವರೆಗೆ ನಿರಂತರವಾಗಿ ನೀರು ಹರಿಸಬೇಕು....

ಕಾಂಗ್ರೆಸ್ ಸಂಘಟನೆ ಬಲಪಡಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ: ಡಾ. ಯತೀಂದ್ರ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ...

ಬೆಳಗಾವಿ |ನಂದಿನಿ ಹಾಲು ಉತ್ಪಾದಕರಿಗೆ ₹2.40 ಕೋಟಿ ಮೌಲ್ಯದ ಉಪಕರಣ ವಿತರಣೆ

ನಂದಿನಿ ಹಾಲಿನ ಗುಣಮಟ್ಟ ಮತ್ತು ಒಕ್ಕೂಟದ ಮೇಲಿನ ರೈತರ ವಿಶ್ವಾಸದಿಂದಾಗಿ ಬೆಳಗಾವಿ...

ಗದಗ | ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಸ್ಎಫ್ಐ ಸಹಿ ಸಂಗ್ರಹ ಆಂದೋಲನ; ರಾಜ್ಯಾಧ್ಯಕ್ಷ ಗಣೇಶ್ ರಾಠೋಡ್ ಚಾಲನೆ

ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಸ್ಎಫ್ಐ ಸಹಿ ಸಂಗ್ರಹ ಆಂದೋಲನಕ್ಕೆ ರಾಜ್ಯಧ್ಯಕ್ಷ ಗಣೇಶ...