ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

Date:

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮಹಾನವಮಿ ಆಯುಧಪೂಜೆಗೆ ಎಲ್ಲರೂ ಕಡ್ಡಾಯವಾಗಿ ಹಾಜರಾಗುವಂತೆ ಸುತ್ತೋಲೆ ಹೊರಡಿಸಿದ್ದಾರೆ. ಈ ಕುರಿತು ಸಾಹಿತಿಗಳು, ಪ್ರಗತಿಪರ ಚಿಂತಕರು ಹಾಗೂ ಶಿಕ್ಷಣ ತಜ್ಞರು ತೀವ್ರ ಖಂಡಿಸಿದ್ದು, ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಾಗಿದೆ.

- Advertisement -

ವಿಶ್ವವಿದ್ಯಾಲಯದಲ್ಲಿ ಅಧಿಕೃತ ಧಾರ್ಮಿಕ ಆಚರಣೆಗೆ ಹಾಜರಾಗುವಂತೆ ಕಡ್ಡಾಯಗೊಳಿಸಿ ಸುತ್ತೋಲೆ ನೀಡಿರುವ ಕುಲಸಚಿವರನ್ನು  ಕೂಡಲೇ ಅಮಾನತ್ತುಗೊಳಿಸಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ವಿಶ್ವವಿದ್ಯಾಲಯ ಒಂದು ಜಾತ್ಯಾತೀತ ಸಂಸ್ಥೆಯೇ ಹೊರತು ಮಠವಲ್ಲ. ವಿಶ್ವವಿದ್ಯಾಲಯದಲ್ಲಿ ಎಲ್ಲಾ ಧರ್ಮ, ಜಾತಿ, ನಂಬಿಕೆಯ ವಿದ್ಯಾರ್ಥಿಗಳಿಗೆ ಸೇರಿದ್ದು, ಸಂವಿಧಾನದ 28ನೇ ವಿಧಿಯ ಪ್ರಕಾರ ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಆಚರಣೆಯನ್ನು ಕಡ್ಡಾಯಗೊಳಿಸುವಂತಿಲ್ಲ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

1004214984

“ಕುಲಸಚಿವರ ಈ ನಡೆ ವೈಜ್ಞಾನಿಕ ಮನೋಭಾವಕ್ಕೆ ವಿರುದ್ಧವಾಗಿದ್ದು, ಸಂವಿಧಾನದ 51A(h) ಪ್ರಕಾರ ವೈಜ್ಞಾನಿಕ ಚಿಂತನೆ, ಚಿಂತನಶೀಲ ಮನೋಭಾವ ಬೆಳೆಸುವುದು ವಿಶ್ವವಿದ್ಯಾಲಯದ ಕರ್ತವ್ಯ. ಆಯುಧಪೂಜೆ ವ್ಯಕ್ತಿಯ ವೈಯಕ್ತಿಕ ನಂಬಿಕೆಯಾಗಿರಬಹುದು, ಆದರೆ ಅದನ್ನು ಸಂಸ್ಥೆಯ ಕಾರ್ಯಕ್ರಮವನ್ನಾಗಿ ಮಾಡಿ ಕಡ್ಡಾಯಗೊಳಿಸುವುದು ವಿಶ್ವವಿದ್ಯಾಲಯವನ್ನು ಒಂದು ಧರ್ಮದ ಆಚರಣಾ ಕೇಂದ್ರವನ್ನಾಗಿ ಪರಿವರ್ತಿಸಿದಂತಾಗುತ್ತದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ವಿಶ್ವವಿದ್ಯಾಲಯದಲ್ಲಿ ಮುಸ್ಲಿಂ, ಕ್ರೈಸ್ತ, ಬೌದ್ಧ, ನಾಸ್ತಿಕ, ವಿವಿಧ ನಂಬಿಕೆಯ ವಿದ್ಯಾರ್ಥಿಗಳು, ಉಪನ್ಯಾಸಕರು ಇದ್ದಾರೆ. ಅವರ ಮೇಲೆ ಒಂದು ನಿರ್ದಿಷ್ಟ ಧಾರ್ಮಿಕ ಆಚರಣೆಯನ್ನು ಹೇರುವುದು ಅವರ ಆತ್ಮಸಾಕ್ಷಿಯ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದ್ದು, ಬಹುತ್ವಕ್ಕೆ ಧಕ್ಕೆ ತರುತ್ತದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಕುಲಸಚಿವರು ಹೊರಡಿಸಿರುವ ಈ ಸುತ್ತೋಲೆ “ಗಾಂಧಿ ಭಾರತ ಜಯಂತಿ ಲೋಗೋ ಬಳಸಿ, ಗಾಂಧೀಜಿಯವರು ಪ್ರತಿಪಾದಿಸಿದ ಸರ್ವಧರ್ಮ ಸಮಭಾವದ ತತ್ವಕ್ಕೇ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಉನ್ನತ ಶಿಕ್ಷಣ ಸಚಿವರು ಹಾವೇರಿ ವಿವಿಯ ಕುಲಸಚಿವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಾಹಿತಿಗಳು, ಪ್ರಗತಿಪರ ಚಿಂತಕರು ಶಿಕ್ಷಣ ತಜ್ಞರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಶಿಕ್ಷಣ ತಜ್ಞರು ನಿರಂಜನಾರಾಧ್ಯ ವಿ. ಪಿ, ಬಸವರಾಜ ಸೂಳಿಬಾವಿ, ಅನಿಲ ಹೊಸಮನಿ ಸಾಮಾಜಿಕ  , ಡಾ. ಎಚ್ ಎಸ್ ಅನುಪಮಾ, ಸನತಕುಮಾರ ಬೆಳಗಲಿ, ಬಿ. ಸುರೇಶ, ದಿನೇಶ್ ಪಟವರ್ಧನ್, ಸುನೀತ ಬಿ ವಿ, ವಿರೂಪಾಕ್ಷ ಪಡಿಗೋದಿ, ಕುಂ. ವೀರಭದ್ರಪ್ಪ, ಡಾ. ವೀರಣ್ಣ ರಾಜೂರು, ಕಾಳೆಗೌಡ ನಾಗಾವರ, ಪ್ರೊ. ಎಸ್.ಜಿ.ಸಿದ್ದರಾಮಯ್ಯ, ಶ್ರೀಪಾದ ಭಟ್, ಎಲ್.ಎನ್ ಮುಕುಂದರಾಜ್ ಸೇರಿದಂತೆ ನೂರಾರು ಪ್ರಗತಿಪರ ಚಿಂತಕರು, ಸಾಹಿತಿಗಳು, ಶಿಕ್ಷಣ ತಜ್ಞರು ಪತ್ರಕ್ಕೆ ಬೆಂಬಲ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...

ಯುವಜನತೆ ದುಶ್ಚಟಗಳಿಂದ ದೂರವಿದ್ದು ಉತ್ತಮ ನಾಗರಿಕರಾಗಬೇಕು: ಹಜ್ರತ್ ಎಂ.ಪಿ. ಮುಜಮ್ಮಿಲ್ ಸಾಹೇಬ್ ಕರೆ

ಮೈಸೂರಿನ ಗೌಸಿಯಾ ನಗರದ ಉಸ್ಮಾನಿಯಾ ಬ್ಲಾಕ್‌ನ ನೌಜವಾನ್ ಕಮಿಟಿ ವತಿಯಿಂದ ಪ್ರತಿವರ್ಷದಂತೆ...

ಸೇನಾ ನೇಮಕಾತಿ ಆಯ್ಕೆ ಪ್ರಕ್ರಿಯೆ ಕುರಿತು ಅರಿವು; ಪೂರ್ವಭಾವಿ ಪರೀಕ್ಷೆ

ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ...