ಹಾವೇರಿ | ಬ್ಯಾಡಗಿ ತಾಲೂಕನ್ನು ಸಂಪೂರ್ಣ ಬರಗಾಲ ಘೋಷಣೆಗೆ ರೈತರು ಮನವಿ

Date:

ಬ್ಯಾಡಗಿ ತಾಲೂಕಿನಲ್ಲಿ ಕಳೆದ 4 ವರ್ಷಗಳಿಂದ ಅತಿವೃಷ್ಟಿ ಹಾಗೂ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಈ ವರ್ಷ ವಾಡಿಕೆಗಿಂತ 33% ಮಳೆ ಕಡಿಮೆಯಾಗಿದ್ದು, ಯಾವ ಕೆರೆಗಳಲ್ಲಿಯೂ ನೀರು ಇಲ್ಲ. ಬೋರ್‌ವೆಲ್‌ಗಳು ಸಹ ನಿಂತು ಹೋಗಿವೆ. ಕೂಡಲೇ ಸರಕಾರ ಬ್ಯಾಡಗಿ ತಾಲೂಕನ್ನು ಸಂಪೂರ್ಣ ಬರಗಾಲ ಘೋಷಣೆ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬ್ಯಾಡಗಿ ತಾಲೂಕು ಘಟಕದ ಮುಖಂಡರು ಹಾವೇರಿ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಮನವಿ ಸಲ್ಲಿಸಿದರು.

- Advertisement -

ರೈತ ಸಂಘದ ತಾಲೂಕು ಅಧ್ಯಕ್ಷ ರುದ್ರಗೌಡ್ರ ಕಾಡನಗೌಡ್ರ ಮಾತನಾಡಿ, “ಮುಂಗಾರು ವೈಫಲ್ಯದಿಂದ ಎರಡು ಬಾರಿ ಸಾಲ ಮಾಡಿ ಬಿತ್ತನೆ ಬೀಜ, ಗೊಬ್ಬರ, ಬಂಡವಾಳ ಹಾಕಿದ್ದು ಮಳೆ ಕೈ ಕೊಟ್ಟಿದ್ದರಿಂದ ಬೆಳೆಗಳು ಒಣಗಿ ಹಾಳಾಗಿವೆ. ಕೆಲವು ಕಡೆ ಹಸಿರಾಗಿದ್ದರೂ ಕೂಡ ಮೆಕ್ಕೆಜೋಳ ತೆನೆಯಾಗಿಲ್ಲ ಮತ್ತು ಕಾಳು ಕಟ್ಟಿಲ್ಲ ಹತ್ತಿ, ಸೋಯಾಬಿನ್, ಮೆಕ್ಕೆಜೋಳ ಬೆಳೆಗಳು ನಾಶವಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ರಾಜ್ಯ ಸರ್ಕಾರ 102 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದು ನಮ್ಮ ತಾಲೂಕುಗಳನ್ನು ಕೈ ಬಿಟ್ಟು ರೈತರಿಗೆ ಅನ್ಯಾಯ ಮಾಡಿದ್ದಾರೆ. ಪಕ್ಕದ ಜಿಲ್ಲೆಗಳಾದ ದಾವಣಗೆರೆ, ಶಿವಮೊಗ್ಗ. ಧಾರವಾಡ, ಗದಗ ಜಿಲ್ಲೆಗಳನ್ನು ಬರಗಾಲವೆಂದು ಘೋಷಣೆ ಮಾಡಿದ ಮೇಲೆ ಹಾವೇರಿ ಜಿಲ್ಲೆಯನ್ನು ಕಡೆಗಣಿಸಿರುವುದು ನ್ಯಾಯ ಸಮ್ಮತವಲ್ಲ” ಅಸಮಾಧಾನ ವ್ಯಕ್ತಪಡಿಸಿದರು.

“ಕೃಷಿಗಾಗಿ ಸಾಲ ಮಾಡಿ ಮಳೆ ಕೈ ಕೊಟ್ಟಿರುವುದರಿಂದ ಹಾಕಿದ ಬಂಡವಾಳ ವಾಪಾಸ್ ಬರದಂತಾಗಿ ರೈತರು ಸಾಲಕ್ಕೆ ಹೆದರಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಇಂತಹ ಸಂಧರ್ಭದಲ್ಲಿ ರೈತರಿಗೆ ಧೈರ್ಯ ತುಂಬುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಬೇಕಾಗಿರುವುದು ಅತಿ ಅವಶ್ಯಕ. ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸಬೇಕು” ಎಂದು ಆಗ್ರಹಿಸಿದರು.

“ಬ್ಯಾಡಗಿ ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡಿ, ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಹಾಗೂ ಬ್ಯಾಂಕುಗಳ ಬಲತ್ಕಾರದ ಸಾಲ ವಸೂಲಿಯನ್ನು ನಿಲ್ಲಿಸಬೇಕು. ನಮ್ಮ ತಾಲೂಕನ್ನು ಬರಗಾಲವಿಲ್ಲವೆಂದು ಯಾವ ಮಾನದಂಡನೆ ಮೇಲೆ ನಿರ್ಧರಿಸಿದ್ದಾರೆಂಬುವುದು ಖಚಿತಪಡಿಸಿಕೊಳ್ಳಬೇಕು. ಕೃಷಿ ಪ್ರಧಾನವಾದ ಜಿಲ್ಲೆಯಲ್ಲಿ ಕೃಷಿಯನ್ನೆ ನಂಬಿ ಬದುಕುತ್ತಿರುವುದು ತಾವುಗಳು ಸರ್ಕಾರಕ್ಕೆ ರೈತರ ಧ್ವನಿಯಾಗಿ ಸದನದ ಒಳಗೆ ನಮ್ಮ ಪರವಾಗಿ ಮಾತನಾಡಿ ನ್ಯಾಯ ಒದಗಿಸಬೇಕು” ಒತ್ತಾಯಿಸಿದರು.

“ಕೇಂದ್ರ ಸರ್ಕಾರ ಬೆಳೆನಷ್ಟ ಪರಿಹಾರವನ್ನು (ಕೃಷಿಗಾಗಿ ಸಾಲಮಾಡಿ ಖರ್ಚು ಮಾಡಿದ ಹಣ) ಪ್ರತಿ ಎಕರೆಗೆ 30,000 ರೂ. ಕೊಡಬೇಕು. ಎಂದು ಮನವಿ ಪತ್ರದ ಮುಖಾಂತರ ಮಾನ್ಯ ಶಾಸಕರಿಗೆ ಒತ್ತಾಯಿಸುತ್ತೇವೆ. ಒಂದು ವೇಳೆ ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಜಿಲ್ಲೆಯ ರೈತರು ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮನವಿ ಸಂದರ್ಭದಲ್ಲಿ‌ ರೈತ ನುಖಂಡರು ಮೌನೇಶ ಕಮ್ಮಾರ, ಶಿವರುದ್ರಪ್ಪ ಮೂಡೇರ, ಸಂಗಣ್ಣ ಕ ಎಲಿ, ಚಿಕ್ಕಪ್ಪ ಛತ್ರದ, ಮಲ್ಲೇಶಪ್ಪ ಡಂಬಳ, ಮಂಜು ತೋಟದ, ಕೆ.ವಿ.ದೊಡ್ಡಗೌಡ್ರ, ಪ್ರಕಾಶ ಸಿದ್ದಪ್ಪನವರ, ಶಂಕರ ಮರಗಾಲ, ಆನಂದ ಸಂಕಣ್ಣನವರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ...

ಗದಗ | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ, ತಾಂತ್ರಿಕ ಕೌಶಲ್ಯ ಬೆಳೆಸುವುದು ಅಗತ್ಯ: ಆರ್.ಎಸ್ ಬುರಡಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವುದರ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Gen Z ಪೀಳಿಗೆ ತನ್ನ ಶಕ್ತಿ ಪ್ರದರ್ಶಿಸಬೇಕು: ಪ್ರದೀಪ್ ಪಾಟೀಲ್

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ...

ವಿಜಯಪುರ | ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಬಳಸುವಂತೆ ಜಾಗೃತಿ ಅಭಿಯಾನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಹಾಗೂ ವಿವಿಧ...