ಹಾವೇರಿ | ಶಿಗ್ಗಾಂವ ʼಬರಗಾಲ ತಾಲ್ಲೂಕುʼ ಎಂದು ಘೋಷಿಸಿ : ರೈತ ಸಂಘ ಆಗ್ರಹ

Date:

  • ಶಿಗ್ಗಾಂವ ತಾಲೂಕನ್ನು ಬರಗಾಲ ತಾಲ್ಲೂಕು ಎಂದು ಘೋಷಿಸುವಂತೆ ಒತ್ತಾಯ
  • ಸಕ್ಕರೆ ಕಾರ್ಖಾನೆ ಆರಂಭಿಸುವ ಮೊದಲು ರೈತರೊಂದಿಗೆ ಸಭೆ ನಡೆಸಿ ಸೂಕ್ತವಾದ ಬೆಲೆ ನಿಗದಿಪಡಿಸಬೇಕು.

ಕಬ್ಬು ಬೆಳೆಗೂ ಬೆಳೆ ವಿಮೆ ನೀಡಬೇಕು. ಬೆಳೆ ವಿಮೆ, ಬರ ಪರಿಹಾರ, ಬೆಳೆ ಹಾನಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ದುಂಡಸಿ ಗ್ರಾಮ ಪಂಚಾಯತಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಮುತ್ತಣ್ಣ ಗುಡಗೇರಿ ಮಾತನಾಡಿ, “ನಮ್ಮ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವ ಮೊದಲು ರೈತರನ್ನು ಕರೆಯಿಸಿ ಸಭೆ ನಡೆಸಬೇಕು. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು. ಒಂದು ವೇಳೆ ರೈತರೊಂದಿಗೆ ಸಕ್ಕರೆ ಕಾರ್ಖಾನೆ ಹೊಂದಾಣಿಕೆ ಮಾಡಿಕೊಳ್ಳದೆ ಇದ್ದಲ್ಲಿ, ತಾಲೂಕು ಮಟ್ಟದಲ್ಲಿ ನಮ್ಮ ಹೋರಾಟವನ್ನು ಮುಂದುವರೆಸಬೇಕಾಗುತ್ತದೆ” ಎಂದು ತಿಳಿಸಿದರು.

ರೈತ ಮುಖಂಡ ಈಶ್ವರಗೌಡ ಮಾತನಾಡಿ, “2023-24ನೇ ಸಾಲಿನ ಮುಂಗಾರು ಹಂಗಾಮಿನ 25% ಬೆಳೆ ವಿಮೆ ವಿತರಿಸಬೇಕು. ಶಿಗ್ಗಾಂವ ತಾಲೂಕನ್ನು ಬರಗಾಲ ತಾಲೂಕು ಎಂದು ಘೋಷಿಸಬೇಕು. ಸಹಕಾರಿ ಸಂಘದಲ್ಲಿ ಸಾಲ ಮಾಡಿದ್ದ ಸಂಕಷ್ಟಕ್ಕೆ ಒಳಗಾಗಿರುವ ರೈತರ ಬೆಳೆ ಸಾಲಮನ್ನಾ ಮಾಡಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಊರಿನ‌ ಮುಖಂಡ ಶಿವನಗೌಡ ಪಾಟೀಲ್ ಮಾತನಾಡಿ, “ಶಿಗ್ಗಾವಿ ಭಾಗ ಮಲೆನಾಡು ಪ್ರದೇಶವಾದರೂ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ರೈತರ ಕಬ್ಬು ಬೆಳೆಗೆ ಫ್ಯಾಕ್ಟರಿ 350 ರೂ ನೀಡುತ್ತದೆ ಆದರೆ ರೈತರಿಂದ 800-1000 ರೂಪಾಯಿ ವಸೂಲಿ ಮಾಡುತ್ತಾರೆ ಇದರಿಂದ ರೈತರಿಗೆ ಸಂಪೂರ್ಣ ಅನ್ಯಾಯವಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಭೆಟ್ಟಿ ನೀಡಿ, ಪ್ರತಿಭಟನಾಕಾರರ ಹಕ್ಕೊತ್ತಾಯಗಳನ್ನು ಆಲಿಸಿದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, “ಬೆಳೆ ವಿಮೆ ವಿಚಾರವಾಗಿ ಈಗಾಗಲಿ ಮಾತನಾಡಲಾಗಿದೆ. ಸದ್ಯದಲ್ಲೆ ಸಮಸ್ಯೆ ಬಗೆಹರಿಯುವುದು. ಇನ್ನು ರೈತರ ಎಲ್ಲ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತಾಗಿ ಸರ್ಕಾರದ ಮುಂದೆ ಪ್ರಸ್ತಾವನೆಯನ್ನು‌ ಇಡಲಾಗುತ್ತದೆ” ಎಂದು ಭರವಸೆ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಅನ್ಯಾಯ; ಚೆಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು...

ಉಡುಪಿ | ಮತದಾನ ಬಹಿಷ್ಕಾರ ಹಿಂಪಡೆದ ಕಟ್ಟಿಂಗೇರಿ ಮತದಾರರು

ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ...

ಕಲಬುರಗಿ | ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿತ್ತು: ಮಾಲೀಕಯ್ಯ ಗುತ್ತೇದಾರ

2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ...

ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ...