ಹಾವೇರಿ ಜಿಲ್ಲೆಯ 3 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರೈತರ ಆಗ್ರಹ

Date:

ಸಂಪೂರ್ಣ ಬಯಲು ಸೀಮೆಯ ವ್ಯಾಪ್ತಿಗೆ ಬರುವ ಜಿಲ್ಲೆಯ ರಾಣೇಬೆನ್ನೂರು, ಹಾವೇರಿ ಮತ್ತು ಸವಣೂರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್) ಆಗ್ರಹಿಸಿದೆ.

- Advertisement -

ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ರೈತ ಸಂಘಟನೆಯ ಮುಖಂಡರು ಹಾಗೂ ರೈತರು ಜಿಲ್ಲೆಯ ಉಳಿದ ತಾಲೂಕುಗಳನ್ನು ಹಸಿ ಬರಪೀಡಿತ ಎಂದು ಘೋಷಿಸಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಸಂದರ್ಭದಲ್ಲಿ ಕ. ರಾ. ರೈ. ಸಂಘದ  ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಡೊಳ್ಳಿನ, ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ. ಡಿ. ಬಸವರಾಜ್ ಅವರು ಮಾತನಾಡಿ, “ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಯಲ್ಲಾಪುರ, ಶಿರಸಿ ತಾಲೂಕುಗಳ ಮೂಲಕ ಪಶ್ಚಿಮ ನೈರುತ್ಯ ಮಾರುತಗಳು ಹಾವೇರಿ ಜಿಲ್ಲೆಯನ್ನು ಪ್ರವೇಶಿಸುತ್ತವೆ. ರಾಜ್ಯ ಸರ್ಕಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಮುಂಡಗೋಡ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿದೆ.  ಆದರೆ, ಹಾವೇರಿ ಜಿಲ್ಲೆಯ ಒಂದೇ ಒಂದು ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿಲ್ಲ. ಇದೆಂಥ ನ್ಯಾಯ” ಎಂದು ಪ್ರಶ್ನಿಸಿದರು.

ಜಿಲ್ಲಾಧಿಕಾರಿಗಳ ಪರವಾಗಿ ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ನಾಗರಾಜ ಎಲ್ ಅವರು ಮಾತನಾಡಿ, ರೈತರ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಂಘದ ಮುಖಂಡರಾದ ಚನಬಸಪ್ಪ ಹಾವಣಗಿ, ಆನಂದ ಕೆಳಗಿನಮನಿ, ಚಂಸು ಪಾಟೀಲ, ಜೆಡ್. ಎಂ. ಅರಳಿಮರದ, ಶಂಕ್ರಪ್ಪ ಮೆಳ್ಳಿಹಳ್ಳಿ, ಚಂದ್ರಪ್ಪ ಬಂಕಾಪುರ, ಚೆನ್ನವೀರಪ್ಪ ಕರೆಯಣ್ಣನವರ, ಶಂಕರಗೌಡ ಪಾಟೀಲ ಮತ್ತು ಅನೇಕ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌರವ್ ದಾಸ್, ಆಶುತೋಷ್ ರಾಂಕಾ ಬಿಡುಗಡೆಯಲ್ಲಿ ವಿಳಂಬ; 4 ಶ್ಯೂರಿಟಿ ಬಾಂಡ್ ತಿರಸ್ಕಾರ: ಸಿಜೆಪಿ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು...

ಶಿವಮೊಗ್ಗ | ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಶಿವಮೊಗ್ಗ, ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದು,...

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ...

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ...