“ಮಕ್ಕಳಲ್ಲಿ ಅಡಗಿರುವ ಪ್ರತಿಭೆ, ಸೃಜನಶೀಲತೆ ಮತ್ತು ಆತ್ಮವಿಶ್ವಾಸವನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರ ಪ್ರಮುಖ ಜವಾಬ್ದಾರಿಯಾಗಿದೆ. ಮಕ್ಕಳು ದೇಶದ ಭವಿಷ್ಯದ ಅಮೂಲ್ಯ ಸಂಪತ್ತಾದರೆ ಪ್ರತಿಯೊಂದು ಮಗುವು ತನ್ನದೇ ಆದ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಹೊಂದಿರುತ್ತದೆ” ಎಂದು ತಾಲೂಕು ದಂಡಾಧಿಕಾರಿ ವಿಠ್ಠಲ ಚೌಗಲ್ ಹೇಳಿದರು.
ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಶನಿ ಸಮಾಜ ಸೇವಾ ಸಂಸ್ಥೆಯ ಸಭಾಂಗಣದಲ್ಲಿ ತಾಲೂಕು ಮಟ್ಟದ ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
“ಮಕ್ಕಳ ಆಸಕ್ತಿ ಹಾಗೂ ಅಭಿರುಚಿಗೆ ಅನುಗುಣವಾಗಿ ಅವಕಾಶ ಕಲ್ಪಿಸಬೇಕು. ನಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡದೆಅವರ ಸಾಧನೆಗೆ ಪ್ರೋತ್ಸಾಹ ನೀಡಬೇಕು.ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೌಷ್ಠಿಕ ಆಹಾರ ಸ್ವಚ್ಛತೆ ಸುರಕ್ಷಿತ ವಾತಾವರಣ ಹಾಗೂ ಪೋಷಕರ ಪ್ರೀತಿ ಆರೈಕೆತುಂಬಾ ಮುಖ್ಯಅವರ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಬೇಕು” ಎಂದು ವಿಠಲ್ ಚೌಗಾಲ್ ದಂಡಾಧಿಕಾರಿ ಹಾನಗಲ್ಲ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋಶನಿ ಸಮಾಜ ಸೇವಾ ಸಂಸ್ಥೆರು ನಿರ್ದೇಶಕರು ಸಿಸ್ಟರ ಅನಿತಾ ಡಿಸೋಜಾ ಮಾತನಾಡಿ, ಮಕ್ಕಳ ಸುರಕ್ಷತೆ, ಹಕ್ಕುಗಳು ಹಾಗೂ ವೈಯಕ್ತಿಕ ಸ್ವಾತಂತ್ರದ ಮಹತ್ವವನ್ನು ತಿಳಿಸುತ್ತಾ, ವಿಶೇಷವಾಗಿ ಮಕ್ಕಳಿಗೆ ಸುರಕ್ಷತಾ ಸ್ಪರ್ಶ ಮತ್ತು ಅಸುರಕ್ಷತಾ ಸ್ಪರ್ಶದ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಿ ಯಾವ ಸ್ವರ್ಶ ಸುರಕ್ಷಿತ ಮತ್ತು ಯಾವ ಸ್ವರ್ಶ ಅಸುರಕ್ಷಿತ ಎಂಬುದನ್ನು ಸರಳವಾಗಿ ವಿವರಿಸಿದರು. ಯಾರಾದರುಅಸಹಜವಾಗಿ ಸ್ವರ್ಶಿಸಿದರೆ ಭಯ ಪಡದೆಧೈರ್ಯವಾಗಿ ವಿರೋಧಿಸಬೇಕು. ತಕ್ಷಣವೆ ತಂದೆ-ತಾಯಿ, ಶಿಕ್ಷಕರು ಅಥವಾ ನಂಬಿಕಸ್ಥ ಹಿರಿಯರ ಗಮನಕ್ಕೆ ತರಬೇಕು” ಎಂದು ಹೇಳಿದರು.
ಪ್ರತಿಯೊಂದು ಮಗುವಿಗೆ ತನ್ನದೇಹದ ಮೇಲೆ ಪೂರ್ಣ ಹಕ್ಕಿದೆ ಹಾಗೂ ತನ್ನ ಸುರಕ್ಷತೆಯ ಬಗ್ಗೆ ಜಾಗೃತಿ ಹೊಂದಿರುವುದು ಅತ್ಯಂತ ಅವಶ್ಯಕ. ಮಕ್ಕಳಲ್ಲಿ ಧೈರ್ಯ, ಆತ್ಮ ವಿಶ್ವಾಸ ಮತ್ತು ಸ್ವಯಂ ರಕ್ಷಣೆಯ ಅರಿವು ಬೆಳೆಸುವ ಈ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವೀಶೆಷ ಆಕರ್ಷಣೆ ಆಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಾನಗಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಚಿನ್ನಿಕಟ್ಟಿ ಅವರು ಮಕ್ಕಳೊಂದಿಗೆ ಸಂವಾದ ನಡೆಸಿ ಮಾತನಾಡಿ, “ಪ್ರತಿಯೊಂದು ಮಗುವಿನಲ್ಲಿಯೂ ವಿಶೇಷ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಬೆಳೆಸಿಕೊಳ್ಳುವ ಮೂಲಕ ಜೀವನದಲ್ಲಿ ಸಾಧನೆಯ ಶಿಖರ ಏರಬೇಕು”ಎಂದರು.
ಕಾರ್ಯಕ್ರಮಕ್ಕೆ ವೀಶೆಷ ಅತಿಥಿ ಕು. ಕಿರಣ್ ಚಂದ್ರಪ್ಪ ಓಲೆಕಾರ ಹಾಗೂ ಕು ಪ್ರಿಯಾ ಕುಲಕರ್ಣಿ ಅವರು ತಮ್ಮ ಮಕ್ಕಳ ಪಂಚಾಯತಿಯಲ್ಲಿನ ಅನುಭವಗಳನ್ನು ಹಂಚಿಕೊಂಡರು. ಮಕ್ಕಳ ಪಂಚಚಾಯತಿಯಲ್ಲಿ ಭಾಗವಹಿಸುವದರಿಂದ ನಾಯಕತ್ವ ಗುಣ, ಆತ್ಮ ವಿಶ್ವಾಸ, ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿತು. ಮಕ್ಕಳು ತಮ್ಮ ಅಭಿಪ್ರಾಯಗಳನ್ನು ಧೈರ್ಯವಾಗಿ ವ್ಯಕ್ತಪಡಿಸಿ ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಸಂದೇಶ ನೀಡಿದರು.
ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ನೃತ್ಯಗಳು, ನಾಟಕಗಳು ಹಾಗೂ ಸುಮಧುರಗಾಯನ ಕಾರ್ಯಕ್ರಮಗಳು ಜರುಗಿದವು. ಅಲ್ಲದೇ ಹಳ್ಳಿಗಳಲ್ಲಿ ನಡೆಸಿದ ವಿವಿಧಕ್ರೀಡಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಾಲಕರು, ಮಕ್ಕಳು ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ರೋಶನಿ ಸಮಾಜ ಸೇವಾ ಸಂಸ್ಥೆಯ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಾಕ್ಷಿಯಾದರು. ದೀಪಾ ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಾ ಸ್ವಾಗತಿಸಿದರು. ಸಿಮ್ರಾನ್ ವಂದಿಸಿದರು.



