ಹಾವೇರಿ | ಟೇಲರಿಂಗ್ ಶಾಪ್ ನಲ್ಲಿ ಗ್ರಂಥಾಲಯ ಉದ್ಘಾಟನೆ

Date:

ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಮನೆಗೊಂದು ಗ್ರಂಥಾಲಯ ಅಡಿಯಲ್ಲಿ ವಿನೂತಾ ಟೇಲರಿಂದ ಶಾಪ್ ನಲ್ಲಿ ಗ್ರಂಥಾಲಯ ಅನುಷ್ಠಾನಗೊಂಡಿತು.

- Advertisement -

ಹಾವೇರಿ ಪಟ್ಟಣದ ಬಸವೇಶ್ವರ ನಗರದ 11ನೇ ಕ್ರಾಸ್ ಬಳಿ ವಿನೂತಾ ಟೇಲರಿಂಗ್ ಶಾಪ್ ನಲ್ಲಿ ಗ್ರಂಥಾಲಯವನ್ನು ಸರಸ್ವತಿ ಬಸವರಾಜ ಶಿವಣ್ಣನವರ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಾಧಿಕಾರದ ಅಧ್ಯಕ್ಷರು ಡಾ.ಮಾನಸ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ನಮ್ಮ ನಿತ್ಯ ಜೀವನವನ್ನು ಸುಂದರಗೊಳಿಸುವ ಸಮಾಜದಲ್ಲಿನ ಕೆಳಸ್ತರದ ದುಡಿಮೆಗಾರರ ಕೈಯಲ್ಲಿ ಪುಸ್ತಕ ಬರುವುದು, ಅವರ ಮನೆಗಳಲ್ಲಿ ಗ್ರಂಥಾಲಯ ಅನುಷ್ಠಾನಗೊಳ್ಳುವುದು ಪ್ರಾಧಿಕಾರಕ್ಕೆ ಸಿಕ್ಕ ದೊಡ್ಡ ಗೌರವ ಎಂದರು. ೮ – ೧೦ ಅಡಿಯ ಈ ಚಿಕ್ಕ ಗ್ರಂಥಾಲಯ ನಕ್ಷತ್ರದಂತೆ ಸದಾಕಾಲ ಬೆಳಗಲಿ” ಎಂದು ಹಾರೈಸಿದರು.

ಪುಟ್ಟ ಆಪ್ತ ಸಮಾರಂಭದಲ್ಲಿ ಅನಿತ ಮಂಜುನಾಥ ಮಾತನಾಡಿ, “ಮನೆಗೊಂದು ಗ್ರಂಥಾಲಯ ಯೋಜನೆಯಲ್ಲಿಯೇ ಟೇಲರೊಬ್ಬರ ಅಂಗಡಿಯಲ್ಲಿ ಗ್ರಂಥಾಲಯ ಸ್ಥಾಪನೆಯಾಗುವುದು ಅಪರೂಪದ ಸಂಗತಿ” ಎಂದರು. 

ಮನೆಗೊಂದು ಗ್ರಂಥಾಲಯ ಜಿಲ್ಲಾ ಜಾಗೃತಿ ಸಮಿತಿ ಸಂಚಾಲಕರಾದ ಎಸ್. ಆರ್. ಹಿರೇಮಠ ಮಾತನಾಡಿ “ಜಿಲ್ಲೆಯಲ್ಲಿ ಒಟ್ಟು ೪೯ ಗ್ರಂಥಾಲಯಗಳು ಅನುಷ್ಠಾನಗೊಂಡಿದ್ದು, 50ನೇ ಗ್ರಂಥಾಲಯ ಇದೇ 22ರಂದು ಬಸವೇಶ್ವರ ನಗರದ ಸಿ ಬ್ಲಾಕಿನ ಪಾರ್ಕಿನಲ್ಲಿ ಉದ್ಗಾಟನೆಯಾಗಲಿದೆ” ಎಂದರು.

ಈ ಸಂದರ್ಭದಲ್ಲಿ ಶ್ರೀಮತಿ ನೇತ್ರಾ ಅಂಗಡಿ ಮತ್ತು ಅವರ ಪತಿ ಕಾಂತೇಶ ಅಂಗಡಿ ಅವರುಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರು ಲಿಂಗಯ್ಯ ಹಿರೇಮಠ ಸನ್ಮಾನಿಸಿದರು. ಜೊತೆಗೆ ಜಿಲ್ಲಾ ಆಡಳಿತದಿಂದ ಬಾಲ ವಿಜ್ಞಾನ ಸಾಧಕ ಧೃವ ಸುರೇಶ ಮಲ್ಲಾಡದ ಅವರನ್ನು ಕೂಡ ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಕಾಂತೇಶ ಅಂಗಡಿ ವಹಿಸಿದ್ದರು. ಸರ್ವಶ್ರೀ  ಡಿ. ಸೋಮನಾಥ, ವಿಭೂತಿಶೆಟ್ಟಿ, ಸಿ.ಎಸ್. ಮರಳಿಹಳ್ಳಿ, ಗೀತಾ ಮಲ್ಲಾಡದ, ಮನೋಜ, ಸಾವಿತ್ರಿ ರಜಪೂತ, ಉದಯ ಅಂಗಡಿ, ಶ್ರೀಮತಿ ಜಯಶೀಲಾ ಮುಂತಾದವರು ಉಪಸ್ಥಿತರಿದ್ದರು. ಕುಮಾರಿ ವಿನೂತಾ ಅಂಗಡಿ ಪ್ರಾರ್ಥಿಸಿದರು. ಕಾರ್ಯಕ್ರಮವನ್ನು ಸಿದ್ದೇಶ್ವರ ಹುಣಸಿಕಟ್ಟೀಮಠ ನಡೆಸಿಕೊಟ್ಟರು. ಕೊನೆಯಲ್ಲಿ ಎಸ್.ಆರ್. ಹಿರೇಮಠ ಎಲ್ಲರನ್ನು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...