ಹಾವೇರಿ | ಯುವಜನತೆ ಸಂಘಟಿತರಾಗಿ ಹೋರಾಡಿದಾಗ ಮಾತ್ರ ಘನತೆಯ ಬದುಕು ಕಟ್ಟಿಕೊಳ್ಳಲು ಸಾಧ್ಯ: ಬಸವರಾಜ ಪೂಜಾರ

Date:

“ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಕೋಮುವಾದ ಮತ್ತು ಶಿಕ್ಷಣದ ವ್ಯಾಪಾರೀಕರಣದ ವಿರುದ್ಧ ಯುವಜನತೆ ಸಂಘಟಿತರಾಗಿ ಹೋರಾಡಿದಾಗ ಮಾತ್ರ ಘನತೆಯ ಬದುಕು ಕಟ್ಟಿಕೊಳ್ಳಲು ಸಾಧ್ಯ” ಎಂದು ಡಿವೈಎಫ್ಐ ರಾಷ್ಟ್ರೀಯ ಮುಖಂಡ ಬಸವರಾಜ ಪೂಜಾರ ಹೇಳಿದರು.

- Advertisement -

ಹಾವೇರಿ ನಗರದ ಶಿವಾಜಿಯ ನಗರ 2ನೇ ಕ್ರಾಸ್ ನಲ್ಲಿರುವ ಎಸ್ಎಫ್ಐ – ಡಿವೈಎಫ್ಐ ಕಛೇರಿ ಎದುರು ಭಾರತ ಪ್ರಜಾಸತ್ತಾತ್ಮಕ ಯುವಜನರ ಫೆಡರೇಷನ್ (ಡಿವೈಎಫ್ಐ) ಹಾವೇರಿ ಜಿಲ್ಲಾ ಸಮಿತಿ ಹಮ್ಮಿಕೊಳ್ಳಲಾಗಿದ್ದ ಡಿ.ವೈ.ಎಫ್.ಐ 46ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶ್ವೇತ ಪಾತಕೆ  ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

“1980 ನವೆಂಬರ್ 03 ರಂದು ಪಂಜಾಬ್‌ನ ಲುಧಿಯಾನದಲ್ಲಿ ಆರಂಭವಾದ ಡಿ.ವೈ.ಎಫ್.ಐ, ಕಳೆದ ನಾಲ್ಕೂವರೆ ದಶಕಗಳಿಂದ ಯುವಜನರ ಘನತೆಯ ಬದುಕು ಮತ್ತು ಉದ್ಯೋಗದ ಹಕ್ಕಿಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಈ ಸುದೀರ್ಘ ಹೋರಾಟದ ಹಾದಿಯಲ್ಲಿ ದೇಶದ ನೂರಾರು ಕ್ರಾಂತಿಕಾರಿ ಯುವಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅವರ ಬಲಿದಾನವನ್ನು ಇಂದಿನ ಯುವಜನತೆ ವ್ಯರ್ಥ ಮಾಡಲು ಬಿಡಬಾರದು” ಎಂದರು.

“ಇಂದಿನ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿಗಳನ್ನು ಜಾರಿಗೊಳಿಸುತ್ತಿದ್ದು, ಯುವಜನರಿಗೆ ಉದ್ಯೋಗ ನೀಡುವಲ್ಲಿ ಸಂಪೂರ್ಣ ವಿಫಲವಾಗಿವೆ. ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿ ಮಾಡಬೇಕೆಂಬ ನಮ್ಮ ದಶಕಗಳ ಬೇಡಿಕೆಯನ್ನು ಸರ್ಕಾರಗಳು ಕಡೆಗಣಿಸುತ್ತಿವೆ. ಶಿಕ್ಷಣವನ್ನು ಕೇವಲ ಶ್ರೀಮಂತರ ಸೊತ್ತನ್ನಾಗಿ ಮಾಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ಯುವಕರ ಭವಿಷ್ಯವನ್ನು ಕತ್ತಲೆಗೆ ದೂಡಲಾಗುತ್ತಿದೆ. ಯುವಕರು ಧರ್ಮ, ಜಾತಿಯ ಹೆಸರಿನಲ್ಲಿ ಒಡೆದು ಹೋಗದೆ, ತಮ್ಮ ಹಕ್ಕುಗಳಿಗಾಗಿ ‘ಎಲ್ಲರಿಗೂ ಶಿಕ್ಷಣ, ಎಲ್ಲರಿಗೂ ಉದ್ಯೋಗ’ ಎಂಬ ಘೋಷಣೆಯಡಿ ಒಂದಾಗಬೇಕು” ಎಂದು ಕರೆ ನೀಡಿದರು.

ಡಿವೈಎಫ್ಐ ಮಾಜಿ ಮುಖಂಡರಾದ, ಪತ್ರಕರ್ತರು ನಿಂಗಪ್ಪ ಆರೇರ ಮಾತನಾಡಿ, “ದೇಶದ ಯುವಜನರ ಹಕ್ಕುಗಳ ರಕ್ಷಣೆಗಾಗಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗಾಗಿ ಡಿವೈಎಫ್ಐ ಜನ್ಮತಾಳಿತು ಎಂದು ಸಂಘಟನೆಯ ಇತಿಹಾಸವನ್ನು ಸ್ಮರಿಸಿದ ಅವರು, ಇಂದಿನ ಯುವ ಪೀಳಿಗೆ ಕೇವಲ ಉದ್ಯೋಗಕ್ಕಾಗಿ ಅಲೆಯದೇ, ತಮ್ಮ ಮೂಲಭೂತ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕಾದ ಅನಿವಾರ್ಯತೆ ಇದೆ ಎಂದರು. ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳಬೇಕು” ಎಂದರು.

ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಡಿವೈಎಫ್ಐ ದೇಶದ ಯುವಕರ ಪರವಾಗಿ ಧ್ವನಿ ಏಕೈಕ ಯುವಜನರ ಸಂಘಟನೆ ಆಗಿದೆ. ಉದ್ಯೋಗ ಸಿಕ್ಕಿಲ್ಲವೆಂದು ರಾಣೇಬೆನ್ನೂರಿನ ಅಸುಂಡಿ ಗ್ರಾಮದ ನಿರುದ್ಯೋಗಿ ಯುವಕನ ಆತ್ಮಹತ್ಯೆ ಪ್ರಕರಣ ಹಾಗೂ ಇತ್ತಿಚೆಗೆ ಪ್ರೀತಿಸಿ ಮದುವೆ ಆದು ಯುವಕ ಹಾಗೂ ಆತನ ಸ್ನೇಹಿತರನ್ನು ನಡು ರಸ್ತೆಯಲ್ಲಿಯೇ ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆಯನ್ನು ಸಹಿಸಲು ಸಾದ್ಯವಿಲ್ಲ. ಇಂತಹ ಅನ್ಯಾಯ ಅಕ್ರಮಗಳ ವಿರುದ್ಧ ಯುವಜನರ ಧ್ವನಿ ಡಿವೈಎಫ್ಐ ಹೋರಾಡುತ್ತಿದೆ. ಅಲ್ಲದೆ ಪ್ರಸ್ತುತ ಸಮಾಜದಲ್ಲಿ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಕೋಮು ಶಕ್ತಿಗಳ ವಿರುದ್ಧ ಯುವಶಕ್ತಿ ಜಾಗೃತಗೊಳ್ಳಬೇಕು ಮತ್ತು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕು” ಎಂದರು.

ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯರಾದ ರೇಣುಕಾ ಕಹಾರ, ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣಕುಮಾರ ನಗವತ, ಬಾಲ ಸಂಘಂನ ಧನುಷ್ ದೊಡ್ಡಮನಿ, ಡಿವೈಎಫ್ಐ ಮುಖಂಡರಾದ ಶಂಭು ಸವದತ್ತಿ, ಪರಶುರಾಮ ಎಸ್, ಸುನೀಲಕುಮಾರ್ ಎಲ್, ನಿಂಗರಾಜ ಪೂಜಾರ, ಸಂಜೀವ್ ಹಾವೇರಿಯಣ್ಣನವರ ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಖರ್ಗೆ ವೃತ್ತದಲ್ಲಿ ಕಾರಿಗೆ ಏಕಾಏಕಿ ಬೆಂಕಿ

ನಗರದ ಜನನಿಬಿಡ ಖರ್ಗೆ ವೃತ್ತದ ಸಮೀಪ ಬುಧವಾರ ರಾತ್ರಿ ಕಾರೊಂದಕ್ಕೆ ಏಕಾಏಕಿ...

ಯಾದಗಿರಿ | ನಾಲ್ಕು ತಿಂಗಳಿಂದ ವೇತನವಿಲ್ಲದೆ ಅತಿಥಿ ಶಿಕ್ಷಕರ ಪರದಾಟ; ಕುಟುಂಬ ನಿರ್ವಹಣೆ ದುಸ್ತರ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಎಲ್‌ಕೆಜಿ,...

ಕಲಬುರಗಿ | ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಮಹಿಳಾ ಸಂಘಟನೆಗಳ ಪ್ರತಿಭಟನೆ

ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ನ್ಯಾಯ, ಪಾರದರ್ಶಕ ತನಿಖೆ ಹಾಗೂ...