ಹಾವೇರಿ | ಚಿಲ್ಲರೆ ಹಣದ ವಿಚಾರಕ್ಕೆ ಗಲಾಟೆ; ಬೀದಿ ಬದಿ ವ್ಯಾಪಾರಿ ಕೊಲೆ

Date:

ಚಿಲ್ಲರೆ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೀದಿಬದಿ ವ್ಯಾಪಾರಿ ಶಿವಾಜಿರಾವ್‌ ಬೈರೋಜಿ (55) ಎಂಬುವವರನ್ನು ಕೊಲೆ ಮಾಡದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದಿದೆ.

- Advertisement -

ರಟ್ಟಿಹಳ್ಳಿ ಪಟ್ಟಣದ ನಿವಾಸಿ ಶಿವಾಜಿರಾವ್ ಅವರು ಮೊಟ್ಟೆ ಮಾರಾಟ ಮಾಡುತ್ತಿದ್ದರು. ಮೊಟ್ಟೆ ಖರೀದಿಗಾಗಿ ಬುಧವಾರ ರಾತ್ರಿ ಬಂದಿದ್ದ ಆರೋಪಿಗಳು, ಶಿವಾಜಿರಾವ್‌ ಜೊತೆ ಜಗಳ ಮಾಡಿ ಎದೆಗೆ ಒದ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಆರೋಪಿಗಳಾದ ವಾಸೀಮ್ ಮುಲ್ಲಾ, ಸರ್ಫರಾಜ್ ಮುಲ್ಲಾ, ಸಾದಿಕ್ ಮುಲ್ಲಾ ಹಾಗೂ ಶಿರಾಜ್ ಮುಲ್ಲಾ ಅವರು ತಲೆಮರೆಸಿಕೊಂಡಿದ್ದಾರೆ ಎಂದು ರಟ್ಟಿಹಳ್ಳಿ ಪೊಲೀಸರು ತಿಳಿಸಿದರು.

‘ಮೊಟ್ಟೆ ಖರೀದಿಸಲು ಬಂದಿದ್ದ ನಾಲ್ವರು ಆರೋಪಿಗಳು, ಮೊಟ್ಟೆ ಖರೀಸಿದ್ದರು. ನಂತರ, ತಾವು ₹500 ಕೊಟ್ಟಿರುವುದಾಗಿ ಜಗಳ ತೆಗೆದಿದ್ದರು. ಇಲ್ಲ ₹100 ಮಾತ್ರ ಕೊಟ್ಟಿರುವುದಾಗಿ ಶಿವಾಜಿರಾವ್ ಹೇಳಿದ್ದರು. ಮಧ್ಯಪ್ರವೇಶಿಸಿದ್ದ ಮಗನ ಜೊತೆಗೂ ಆರೋಪಿಗಳು ವಾದಿಸಿದ್ದರು. ತಂದೆ-ಮಗ ಇಬ್ಬರ ಮೇಲೂ ಆರೋಪಿಗಳು ಹಲ್ಲೆ ಮಾಡಿದ್ದರು. ತೀವ್ರ ಗಾಯಗೊಂಡು ಶಿವಾಜಿರಾವ್‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಜಿಲ್ಲಾ ಎಸ್‌.ಪಿ. ಯಶೋಧಾ ವಂಟಗೋಡಿ ಅವರು ಸ್ಥಳಕ್ಕೆ ಭೇಟಿ ನೀಡಿದ ಬಳಕ ಮಾತನಾಡದ ಅವರು, “ಮೊಟ್ಟೆ ಖರೀದಿಸಿದ ಹಣದ ವಿಚಾರವಾಗಿ ಜಗಳ ನಡೆದಿದ್ದು, ಈ ವೇಳೆ ತಳ್ಳಾಟ ಉಂಟಾಗಿದೆ. ತಳ್ಳಾಟದ ವೇಳೆ ಶಿವಾಜಿರಾವ್‌ ಅವರು ಕುಸಿದು ಬಿದ್ದಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ” ಎಂದು ಹೇಳಿದರು.

“ಶಿವಾಜಿರಾವ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಾಗಿದ್ದು, ಎಫ್‌ಐಆ‌ರ್ ದಾಖಲಿಸಲಾಗಿದೆ” ಎಂದು ಅವರು ತಿಳಿಸಿದರು.

“ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಮೇಲ್ನೋಟಕ್ಕೆ ತಳ್ಳಿದ ಪರಿಣಾಮ ಅವರು ಬಿದ್ದು ಮೃತಪಟ್ಟಿರುವುದು ಗೊತ್ತಾಗಿದೆ” ಎಂದು ಎಸ್‌ಪಿ ಹೇಳಿದರು.

“ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗುವುದು. ಕಾನೂನು ಪ್ರಕಾರ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...