ಹಾವೇರಿ | ವಾರ್ಷಿಕ ಜಕಾತ್ ವಿತರಣಾ ಕಾರ್ಯಕ್ರಮ ಯಶಸ್ವಿ

Date:

ಇಸ್ಲಾಮಿಕ್ ಸಾಮಾಜಿಕ ಜವಾಬ್ದಾರಿಯ ಭಾವನೆಯಿಂದ ಪ್ರೇರಿತರಾಗಿ ರಾಣೇಬೆನ್ನೂರು ಪಟ್ಟಣದ ನಾಲ್ಕು ಪ್ರದೇಶಗಳಲ್ಲಿ ನೂರಾರು ಅರ್ಹ ಕುಟುಂಬಗಳಿಗೆ ಉಮ್ಮತ್ ವೆಲ್ಫೆರ್ಎಜ್ಯುಕೇಶನಲ್ ಆಂಡ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ವಾರ್ಷಿಕ ಜಕಾತ್ ವಿತರಣಾ ಕಾರ್ಯಕ್ರಮ ನಡೆಯಿತು.

- Advertisement -

“ಈ ವಿತರಣಾ ಕಾರ್ಯಕ್ರಮವನ್ನು ಪಾರದರ್ಶಕತೆ ಮತ್ತು ಘನತೆಯಿಂದ ಯೋಜಿಸಿ ಕಾರ್ಯ ರೂಪಕ್ಕೆ ತರಲಾಗಿದೆ. ಟ್ರಸ್ಟ್‌ನ ಸ್ವಯಂಸೇವಕರು ಮತ್ತು ಅಧಿಕಾರಿಗಳು ಜೊತೆಗೂಡಿ ಮೋಮಿನ್ ಗಲ್ಲಿ, ಗಂಜಿ ಗಲ್ಲಿ, ಖತೀಬ್ ಗಲ್ಲಿ ಹಾಗೂ ಇಸ್ಹಾಕ್ ಖಾನ್ ಗಲ್ಲಿಯಲ್ಲಿ ಮೊದಲೇ ಸಮೀಕ್ಷೆ ನಡೆಸಿ, ಅರ್ಹತೆ ಇರುವ ಕುಟುಂಬಗಳನ್ನು ಗುರುತಿಸಲಾದ್ದು, ಅವರಿಗೆ ಆರ್ಥಿಕ ನೆರವು ಹೊಂದಿರುವ ಜಕಾತ್ ಲಕೋಟೆಗಳನ್ನು ಪ್ರತಿ ಕುಟುಂಬಕ್ಕೆ ಗೌರವ ಮತ್ತು ಘನತೆಯಿಂದ ತಲುಪಿಸಲಾಯಿತು” ಎಂದು ಹೇಳಿದರು‌‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಈ ಕಾರ್ಯಕ್ರಮವನ್ನು ಸಾಧ್ಯಗೊಳಿಸಿದ ಎಲ್ಲ ದಾನಿಗಳಿಗೆ ಮತ್ತು ಶುಭ ಚಿಂತಕರಿಗೆ ಟ್ರಸ್ಟ್ ವತಿಯಿಂದ ಧನ್ಯವಾದಗಳನ್ನು ಸಲ್ಲಿಸುತ್ತೇವೆ.

“ಜಕಾತ್ ಕೇವಲ ಧಾರ್ಮಿಕ ಕರ್ತವ್ಯವಲ್ಲ, ಅದು ಸಾಮಾಜಿಕ ನ್ಯಾಯದ ಶಕ್ತಿಶಾಲಿ ಸಾಧನವಾಗಿದೆ. ನಾವು ನೀಡುವ ಪ್ರತಿ ಲಕೋಟೆಯಲ್ಲಿ ಕೇವಲ ಆರ್ಥಿಕ ಸಹಾಯವಲ್ಲ, ಸಮುದಾಯದ ಬೆಚ್ಚನೆಯ ಕಾಳಜಿಯೂ ಇದೆ” ಎಂದು ಟ್ರಸ್ಟ್ ಸದಸ್ಯರು ಹೇಳಿದರು.

“ಜೊತೆಗೆ ಶಿಕ್ಷಣ ವಿದ್ಯಾರ್ಥಿವೇತನ, ವೈದ್ಯಕೀಯ ನೆರವು ಮತ್ತು ವೃತ್ತಿ ತರಬೇತಿ ಕಾರ್ಯಕ್ರಮಗಳಿಗಾಗಿ ಸಮುದಾಯ ಮತ್ತು ದಾನಿಗಳು ತಮ್ಮ ಬೆಂಬಲ ಮುಂದುವರಿಸಬೇಕು” ಎಂದು ಟ್ರಸ್ಟ್ ಮನವಿ ಮಾಡಿದೆ.

ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷರು ಮುಷ್ತಾಕ್ ಅಹ್ಮದ್ ಸೈಕಲ್‌ಗರ, ಖಜಾಂಚಿ ಅನ್ಸಾರ್ ಖಾಜಿ, ಸಲಹೆಗಾರರು ಗೌಸ್ ಅಗಡಿ, ಸದಸ್ಯರು ಝಕೀರ್ ಹುಸೇನ್ ಚಿಕ್ಕೇರೂರ್, ಶಫೀ ಉಲ್ಲಾ ಯಲ್ಲಾಪುರ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...